Homeಮುಖಪುಟದಲಿತರನ್ನು ಅವಮಾನಿಸಿದ ಸಚಿವ ಮಲ್ಲಿಕಾರ್ಜುನ್: ಹಳೆಯ ವಿಡಿಯೋಗೆ ತೀವ್ರ ವಿರೋಧ

ದಲಿತರನ್ನು ಅವಮಾನಿಸಿದ ಸಚಿವ ಮಲ್ಲಿಕಾರ್ಜುನ್: ಹಳೆಯ ವಿಡಿಯೋಗೆ ತೀವ್ರ ವಿರೋಧ

- Advertisement -
- Advertisement -

ನಟ ಉಪೇಂದ್ರ ಅವರು ಲೈವ್ ವಿಡಿಯೋದಲ್ಲಿ ಗಾದೆಯ ಪದ ಬಳಕೆ ಮಾಡಿ  ದಲಿತರಿಗೆ ಅವಮಾನ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ದಾಖಲಾದ ಎಫ್ ಐಆರ್  ಗೆ ಬಳಿಕ ಹೈಕೋರ್ಟ್ ತಡೆ ನೀಡಿತ್ತು. ಈ ಬೆಳವಣಿಗೆ  ಬೆನ್ನಲ್ಲೇ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹಳೆಯ ವೀಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನ ನಡೆಸಿದ್ದಾರೆ. ಈ ಸಂದರ್ಶನದ ವೀಡಿಯೊವನ್ನು ಯೂಟ್ಯೂಬ್‌ ಚಾನೆಲ್‌ ನಲ್ಲಿ ಮೂರು ತಿಂಗಳ ಮೊದಲು ಅಪ್ಲೋಡ್ ಮಾಡಲಾಗಿದೆ.

ವಿಡಿಯೋದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮಲ್ಲಿಕಾರ್ಜುನ್ ಅವರಿಗೆ  ದಾವಣಗೆರೆ ನಗರದ ಅಶೋಕ್‌ ಥಿಯೇಟರ್‌ ಬಳಿ ನಿರ್ಮಾಣಗೊಂಡಿರುವ ಅಂಡರ್‌ ಪಾಸ್‌ ಬಗ್ಗೆ ಅಭಿಪ್ರಾಯ ಕೇಳುತ್ತಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಲವು ಬಾರಿ ನಾನು ಪ್ರಶ್ನೆ ಮಾಡಿದ್ದೆ, ಸಂಬಂಧಪಟ್ಟ ಇಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡಿದ್ದೆ. ʼʼಊರನ್ನು ಹೊಲೆಗೇರಿ ಮಾಡಬೇಡಿʼʼ ಎಂದು ಹೇಳಿದ್ದೆ ಎಂದು ಮಲ್ಲಿಕಾರ್ಜುನ್ ಅವರು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾದಂತಹ ಆಕ್ರೋಶಕ್ಕೆ ಕಾರಣವಾಗಿದೆ. ಉಪೇಂದ್ರ‌ ಅವರ ಮೇಲೆ ಕೇಸ್ ದಾಖಲಿಸಿದಂತೆ ಇವರ ಮೇಲೆ ಯಾವಾಗ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಆರೋಪದಲ್ಲಿ ಎಸ್ ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ  ಸಚಿವರ ಮೇಲೂ ರಾಜಾಜಿನಗರ ಪೊಲೀಸ್ ಠಾಣೆಗೆ ಎಫ್ ಐಆರ್ ದಾಖಲಿಸುವಂತೆ ಅರ್ಜಿ ಕೊಡಲಾಗಿದೆ.ಸಚಿವರಾದ ಕಾರಣ ಅವರ ಮೇಲೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕಾಗಿದೆ. ಆದ್ದರಿಂದ ಅವರ ವಿರುದ್ಧದ ದೂರನ್ನು ಪಡೆದು ವಿಧಾನಸೌಧ  ಠಾಣೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...