Homeಕರ್ನಾಟಕಭೂ ಸವಕಳಿ: ರೈತರ ಪರಿಹಾರದ ಮೊತ್ತ ಹೆಚ್ಚಳಕ್ಕೆ ಸಚಿವ ಮುರುಗೇಶ್ ನಿರಾಣಿ ಮನವಿ

ಭೂ ಸವಕಳಿ: ರೈತರ ಪರಿಹಾರದ ಮೊತ್ತ ಹೆಚ್ಚಳಕ್ಕೆ ಸಚಿವ ಮುರುಗೇಶ್ ನಿರಾಣಿ ಮನವಿ

- Advertisement -
- Advertisement -

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನಲ್ಲಿ ಕೃಷ್ಣ ನದಿಯ ಪ್ರವಾಹದಿಂದಾಗಿ ಕೃಷಿ ಭೂಮಿಯು ಫಲವತ್ತತೆಯನ್ನು ಕಳೆದುಕೊಂಡಿದ್ದು ರೈತರಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರದ್ಲಾಂಜೆ ಅವರನ್ನು ಭೇಟಿಯಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು ತಕ್ಷಣವೇ ಪರಿಹಾರದ ಮೊತ್ತವನ್ನು ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಜಮಖಂಡಿ ತಾಲ್ಲೂಕಿನ ಉಪವಿಭಾಗದಲ್ಲಿ ಕೃಷ್ಣ ನದಿಯಿಂದ ಪದೇ ಪದೇ ಪ್ರವಾಹ ಉಂಟಾಗುವ ಕಾರಣ,ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗುತ್ತದೆ. ಪರಿಣಾಮ ಸರಿಯಾದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲೆಯ ವಸ್ತುಸ್ಥಿತಿಯನ್ನು ತಿಳಿಸಿದ್ದಾರೆ.

ಒಂದು ಕಡೆ ರೈತರು ಪ್ರವಾಹದಿಂದ ತಮ್ಮ ಬೆಳೆಗಳನ್ನು ನಾಶವಾದರೆ ಮತ್ತೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದ್ದರಿಂದ ಮಣ್ಣು ಸವಕಳಿಗೆ ಬಂದಿದೆ. ಇದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ತಾಲ್ಲೂಕಿನ ಒಟ್ಟು 14,051 ಹೆಕ್ಟೇರ್ ಪ್ರದೇಶದಲ್ಲಿ 5,994 ಪ್ರದೇಶವು ಸವಕಳಿಗೆ ತುತ್ತಾಗಿದೆ. ಪ್ರಸ್ತುತ 1 ಹೆಕ್ಟೇರ್ ಗೆ 65,000 ರೂಪಾಯಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವನ ವಿಗ್ರಹ ಅನಾವರಣ

ಜಮಖಂಡಿ ತಾಲ್ಲೂಕಿನಲ್ಲಿ ಸಣ್ಣ, ಅತಿ ಸಣ್ಣ ಮತ್ತು ಕಡಿಮೆ ಆದಾಯ ಹೊಂದಿರುವ ರೈತರಿದ್ದು, ಕೃಷಿಯೇ ಜೀವನದ ಆಧಾರವಾಗಿದೆ. ಸರಕಾರ ನೀಡುತ್ತಿರುವ ಪರಿಹಾರದ ಮೊತ್ತ ಜೀವನ ನಿರ್ವಾಹಣೆಗೆ ಸಾಕಾಗದ ಕಾರಣ, ಪರಿಹಾರದ ಮೊತ್ತ ಹೆಚ್ಚಳವಾಗಬೇಕದ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.

ಸಚಿವ ನಿರಾಣಿ ಮನವಿಗೆ ಸ್ಪಂಧಿಸಿರುವ ಶೋಭಾ ಕರದ್ಲಾಂಜೆ, ರೈತರ ಹಿತಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂಬ ಭರವಸೆಯನ್ನು ನೀಡಿದ್ದಾರೆ. ಪ್ರತಿವರ್ಷ ಮಳೆಗಾಲದ ವೇಳೆ ಕೃಷ್ಣ ನದಿಯ ಪ್ರವಾಹ
ಹಾಗೂ ಹಿನ್ನೀರಿನ ಕಾರಣ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರೈತರಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಬಗ್ಗೆ ಸದ್ಯದಲ್ಲಿಯೇ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಸೂಕ್ತ ನ್ಯಾಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಓಂ ಬಿರ್ಲಾ ಪುತ್ರಿಯ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್; ಧ್ರುವ ರಾಠಿ ವಿರುದ್ಧ ಪ್ರಕರಣ ದಾಖಲು

0
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಬಗ್ಗೆ ಎಕ್ಸ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ ನಂತರ, ಮಹಾರಾಷ್ಟ್ರದ ಸೈಬರ್ ಪೊಲೀಸರು ಜನಪ್ರಿಯ ಯೂಟ್ಯೂಬರ್ ಧ್ರುವ ರಾಠಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ...