Homeಕರ್ನಾಟಕಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ - ಮುರುಗೇಶ್ ನಿರಾಣಿ

ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

- Advertisement -
- Advertisement -

ಮಂಡ್ಯ ಜಿಲ್ಲೆ ಬೇಬಿ ಬೆಟ್ಟದ ಸುತ್ತಮುತ್ತಲೂ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ದಾಖಲೆಗಳಿದ್ದರೆ ಸರ್ಕಾರಕ್ಕೆ ನೀಡಲಿ. ನಾವು ಸಮಗ್ರ ತನಿಖೆಗೆ ಆದೇಶ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಕಲಬುರಗಿಯಲ್ಲಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ್ ನಿರಾಣಿ, ’ನನಗಿರುವ ಮಾಹಿತಿಯಂತೆ ಕಳೆದ ನಾಲ್ಕು ತಿಂಗಳಿನಿಂದ ಕೆಆರ್‌ಎಸ್ ಅಣೆಕಟ್ಟಿನ ಸುತ್ತ, ಇಲ್ಲವೇ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

’ಈ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದ ನಂತರ ನಾನೇ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೆ. ಕೆಲವರು ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರಿಂದ ಸ್ಥಗಿತಗೊಳಿಸಲು ಸೂಚನೆ ಕೊಟ್ಟಿದ್ದೆ. ನಿಯಮಗಳನ್ನು ಉಲ್ಲಂಘಿಸಿ ಗಣಿಗಾರಿಕೆ ನಡೆಸುತ್ತಿದ್ದವರಿಗೆ ದಂಡ ವಿಧಿಸಿ ಯಾವುದೇ ತರಹದ ಚಟುವಟಿಕೆಗಳು ನಡೆಯದಂತೆ ನಿರ್ಬಂಧ ಹಾಕಲಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

’ಒಂದು ವೇಳೆ ಈಗಲೂ ಅಲ್ಲಿ ಅಕ್ರಮವಾಗಿ ಯಾವುದೇ ರೀತಿಯ ಕಲ್ಲು ಗಣಿಗಾರಿಕೆ ಚಟುವಟಿಕೆಗಳು ನಡೆಯುತಿರುವುದರ ಬಗ್ಗೆ ದಾಖಲೆಗಳಿದ್ದರೆ ಸರ್ಕಾರಕ್ಕೆ ನೀಡಲಿ. ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

’ಕೆಆರ್‌ಎಸ್ ಅಣೆಕಟ್ಟು ಸುತ್ತಮುತ್ತ ಸುಮಾರು 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಕಾನೂನು ಕೈಗೊಳ್ಳಲಾಗಿದ್ದು, ಈಗಾಗಲೇ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ಸಂಗ್ರಹಿಸಲು ಸೂಚನೆ ಕೊಡಲಾಗಿದೆ. ಕಳೆದ 70 ವರ್ಷಗಳಿಂದ ಇಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಲೇ ಇದೆ. ಹೀಗಾಗಿ ಯಾವ ರಾಜಕಾರಣಿಗಳು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಇಬ್ಬರ ಬಗ್ಗೆಯೂ ಅಪಾರ ಗೌರವವಿದೆ. ಹಾದಿಬೀದಿಯಲ್ಲಿ ಜಗಳ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ರಾಜಕೀಯದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಈಗ ನಡೆಯುತ್ತಿರುವ ಸಂಘರ್ಷಕ್ಕೆ ಅವರು ಪೂರ್ಣ ವಿರಾಮ ಹಾಕಬೇಕು. ಶೀಘ್ರವೇ ಹಿರಿಯರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕೆಂದು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನು ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...