Homeಕರ್ನಾಟಕವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣ: ಸಚಿವ ಬಿ ನಾಗೇಂದ್ರ ರಾಜೀನಾಮೆ?

ವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣ: ಸಚಿವ ಬಿ ನಾಗೇಂದ್ರ ರಾಜೀನಾಮೆ?

- Advertisement -
- Advertisement -

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣಕ್ಕೆ ಸಂಬಂಧಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆಯನ್ನು ನೀಡುವ ಸಾಧ್ಯತೆ ಇದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಶರಣಾಗಿ 5 ಪುಟಗಳ ಡೆತ್ ನೋಟ್ ಬರೆದ ನಂತರ ಬೆಳಕಿಗೆ ಬಂದ ಬಹುಕೋಟಿ ಹಗರಣದಲ್ಲಿ ನಾಗೇಂದ್ರ ಅವರ ಹೆಸರು ಕೇಳಿ ಬಂದಿತ್ತು. ಡೆತ್‌ನೋಟ್‌ನಲ್ಲಿ ಚಂದ್ರಶೇಖರನ್ ತಮ್ಮ ಮೇಲಧಿಕಾರಿಗಳು ಮತ್ತು ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿರಿಸಲಾಗಿದ್ದ 187 ಕೋಟಿ ರೂ.ಗಳಲ್ಲಿ 90 ಕೋಟಿ ರೂ.ಗಳ ಹಣವನ್ನು ಬಹು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಎಫ್‌ಐಆರ್ ದಾಖಲಿಸಿದ ಸುದ್ದಿ ಹೊರಬಿದ್ದ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತು ಸಭೆ ನಡೆಸಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಗೇಂದ್ರ ಅವರನ್ನು ಕರೆಸಿ ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದರು. ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಸಿಕ್ಕರೆ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸುವುದಾಗಿ ಉಭಯ ನಾಯಕರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 94.73 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್‌ನ ವಸಂತನಗರ ಶಾಖೆಯಿಂದ ಎಂ.ಜಿ. ರಸ್ತೆಯ ಶಾಖೆಗೆ ವರ್ಗಾಯಿಸಲಾಗಿತ್ತು. ಅಲ್ಲಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್‌ ಸೊಸೈಟಿಯ 18 ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ಸೊಸೈಟಿಯ ಖಾತೆಗಳಿಂದ ಹೈದರಾಬಾದ್‌ನ ರತ್ನಾಕರ ಬ್ಯಾಂಕ್ ಲಿಮಿಟೆಡ್‌ಗೆ (ಆರ್‌ಬಿಎಲ್‌) ವರ್ಗಾಯಿಸಿ, ಅಲ್ಲಿಂದ ಹಣವನ್ನು ಡ್ರಾ ಮಾಡಿಕೊಳ್ಳಲಾಗಿತ್ತು ಎಂಬ ಆರೋಪ ಇದೆ.

ಈ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಸರಕಾರ ಎಸ್ಐಟಿ ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಗಳು ನಿಗಮದ ಅಧಿಕಾರಿಗಳನ್ನು ಹಾಗೂ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಅವರನ್ನು ಈಗಾಗಲೇ ಬಂಧಿಸಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...