Homeಕರ್ನಾಟಕಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ...

ಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

- Advertisement -
- Advertisement -

ಬಲಪಂಥೀಯ ಟ್ರೋಲರ್‌ ರೋಹಿತ್ ಚಕ್ರತೀರ್ಥ ಅವರನ್ನು ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ಕೈಬಿಟ್ಟಿದ್ದು, ಅವರು ನೀಡುವ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ ಎಂದು ಟಿವಿ9 ಮಂಗಳವಾರ ವರದಿ ಮಾಡಿದೆ. ಈ ಮೂಲಕ ಪಠ್ಯ ಪರಿಷ್ಕರಣೆ ವಿರುದ್ದ ರಾಜ್ಯದಾದ್ಯಂತ ಎದ್ದಿರುವ ಜನರ ಆಕ್ರೋಶಕ್ಕೆ ಸರ್ಕಾರ ಮಣಿದಿದೆ.

ಪ್ರಾಥಮಿಕ ಮತ್ತು ಹೈಸ್ಕೂಲ್ ಪಠ್ಯ ಪುಸ್ತಕಗಳ ಬ್ರಾಹ್ಮಣೀಕರಣ ಮಾಡಿರುವ ರೋಹಿತ್ ಚಕ್ರತೀರ್ಥ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದರೂ, ರಾಜ್ಯ ಸರ್ಕಾರ ಮತ್ತೇ ದ್ವಿತೀಯ ಪಿಯುಸಿ ಪಠ್ಯಪುಸ್ತಕದ ಪರಿಷ್ಕರಣೆಗೆ ಅವರ ಸಮಿತಿಯನ್ನೇ ನೇಮಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದ್ವಿತೀಯ ಪಿಯುಸಿ ಪಠ್ಯದಲ್ಲಿರುವ ‘ಹೊಸ ಧರ್ಮಗಳ ಉದಯ’ ಎಂಬ ಪಠ್ಯಭಾಗದ ಪರಿಷ್ಕರಣೆ ಮಾಡುವ ಬಗ್ಗೆ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಗೆ ಸೂಚಿಸಿತ್ತು. ಇದೀಗ ರಾಜ್ಯದಾದ್ಯಂತ ಚಕ್ರತೀರ್ಥ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಮಿತಿಯನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

“ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ” ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ ಎಂದು ಟಿವಿ9 ವರದಿ ಮಾಡಿದೆ.

ಹೈಸ್ಕೂಲ್ ಮತ್ತು ಪ್ರಾಥಮಿಕ ತರಗತಿಗಳ ಪಠ್ಯಪುಸ್ತಕ ಮರು ಪರಿಶೀಲನೆ ಮಾಡುವಾಗ ಚಕ್ರತೀರ್ಥ ಸಮಿತಿ ಮಾಡಿರುವ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಆಗಿದ್ದಾರೆ.

ಸಾಹಿತಿ ಚೆನ್ನಣ್ಣ ವಾಲೀಕಾರ ಅವರು ಅಂಬೇಡ್ಕರ್‌‌ ಬರೆದಿರುವ ‘ನೀ ಹೋದ ಮರುದಿನ’ ಎಂಬ ಪದ್ಯವನ್ನು ಆರನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಅಳವಡಿಸಿತ್ತು. ಈ ಪದ್ಯವನ್ನು ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ತೆಗೆದುಹಾಕಿದೆ.

ಇದನ್ನೂ ಓದಿ: ಬಲಪಂಥೀಯ ಟ್ರೋಲರ್ ಒಬ್ಬನ ಕೈಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ..: ರೋಹಿತ್ ಚಕ್ರತೀರ್ಥ ಮಾಡಿದ ಅಸಹ್ಯದ ಪೋಸ್ಟ್‌ಗಳಿವು

ಆರನೇ ತರಗತಿಯ ‘ಸಿರಿಗನ್ನಡ’ ಪ್ರಥಮಭಾಷಾ ಪಠ್ಯಪುಸ್ತಕದಲ್ಲಿ ‘ಮೆರವಣಿಗೆ’ ಎಂಬ ಪಾಠ ಇತ್ತು. ಈ ಪಠ್ಯವನ್ನು ಸಮಿತಿಯೇ ರೂಪಿಸಿತ್ತು. ಕನ್ನಡ ರಾಜ್ಯೋತ್ಸವಕ್ಕಾಗಿ ಶಾಲೆಯೊಂದರಲ್ಲಿ ನಡೆದ ಸಿದ್ಧತೆ ಕುರಿತು ಮಾತನಾಡುವ ಈ ಪಾಠ, ನವೆಂಬರ್‌ 1ರ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯನ್ನು ತಿಳಿಸುತ್ತದೆ. ವಿವಿಧ ಧರ್ಮಗಳ ಹಿನ್ನೆಲೆಯ ಮಕ್ಕಳಲ್ಲಿ ಕನ್ನಡ ಪ್ರೇಮವನ್ನು ಉದ್ದೀಪಿಸುವ ಕೆಲಸವನ್ನು ಈ ಗದ್ಯಭಾಗ ಮಾಡುತ್ತದೆ. ಆದರೆ ಈ ಪಾಠವನ್ನು ಚಕ್ರತೀರ್ಥ ಸಮಿತಿ ಕಿತ್ತು ಹಾಕಿದೆ.

ಹಳೆಯ ಪಠ್ಯದಲ್ಲಿದ್ದ ಹಲವಾರು ಮೌಲ್ಯಯುತ ವಿಚಾರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ಸಮಿತಿಯು, ‘ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಕುರಿತ ವಿಚಾರಗಳನ್ನೂ ತಿರುಚುವ ಕೆಲಸ ಮಾಡಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿದ್ದು ಏಕೆಂಬ ವಿಷಯವನ್ನು ಹೊಸ ಪಠ್ಯದಲ್ಲಿ ಮರೆಮಾಚಿರುವುದು ಬೆಳಕಿಗೆ ಬಂದಿತ್ತು. ಇತಿಹಾಸವಷ್ಟೇ ಅಲ್ಲದೇ ರಾಜಶಾಸ್ತ್ರ ವಿಭಾಗದಲ್ಲೂ ಬಾಬಾ ಸಾಹೇಬರ ವಿಚಾರಗಳಲ್ಲಿ ಕತ್ತರಿ ಪ್ರಯೋಗ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಂಬೇಡ್ಕರ್‌ ಅವರು ‘ಸಂವಿಧಾನ ಶಿಲ್ಪಿ’ ಎಂಬ ವಾಕ್ಯಕ್ಕೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...