Homeಕರ್ನಾಟಕರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ ಫಲಿತಾಂಶಗಳು ತಿಳಿಸಿವೆ ಎಂಬ ವರದಿಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತ ಡೆಕ್ಕನ್ ಹೆರಾಲ್ಡ್ ಪತ್ರಿಕಾ ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರ ಸಮೀಕ್ಷೆ ಮಾಡಿಸಿಲ್ಲ. ಇದು ಚುನಾವಣಾ ಆಯೋಗದಿಂದ ರಾಜ್ಯ ಮುಖ್ಯ ಚುನಾವಣಾಧಿಕಾರಿಯ ಮೂಲಕ ಆಯೋಜಿಸಲಾದ ಸಮೀಕ್ಷೆ. ಪ್ರಧಾನಿ ಕಚೇರಿಯಲ್ಲೇ ಕೆಲಸ ಮಾಡುವ, ಪ್ರಧಾನಿಗೆ ಅದ್ಧೂರಿ ಗೌರವದ ಕಾಣಿಕೆ ನೀಡಿದ ಪ್ರಧಾನಿಯ ಸೇವಕನಿಂದ ನಡೆದ ಸಮೀಕ್ಷೆ ಎಂದಿದ್ದಾರೆ.

ಮುಂದುವರಿದು, ಸಮೀಕ್ಷೆ ನಡೆದಿದ್ದು ಮೇ 2025ರಲ್ಲಿ. ಕಾಂಗ್ರೆಸ್ ಪಕ್ಷ ಮತಗಳ್ಳತನ (ವೋಟ್‌ ಚೋರಿ) ಕುರಿತು ವಿವರವಾಗಿ ಬಹಿರಂಗಪಡಿಸಿದ್ದು ಆಗಸ್ಟ್ 2025ರಲ್ಲಿ ಎಂದು ತಿಳಿಸಿದ್ದಾರೆ.

ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ಕೇವಲ 50 ಜನರನ್ನು ಸಂದರ್ಶಿಸಿದ್ದ ಈ ಸಮೀಕ್ಷೆಯು ಸಂಖ್ಯೆಯಲ್ಲಿ ದುರ್ಬಲ, ಮಾದರಿಗಳಲ್ಲಿ ವ್ಯಾಪಕ ದೋಷ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷಪಾತ ಹೊಂದಿದ್ದು ನಿರ್ಧಾರ ಕೈಗೊಳ್ಳಲು ಸೂಕ್ತವಾಗಿಲ್ಲ. ಆದರೂ ಬಿಜೆಪಿ ಈ ಸಮೀಕ್ಷೆಯನ್ನು “ರಾಜ್ಯ ಸರ್ಕಾರದ ಸಮೀಕ್ಷೆ” ಎಂದು ತಪ್ಪಾಗಿ ಪ್ರಚಾರ ಮಾಡುತ್ತಿದೆ. ಆಶ್ಚರ್ಯದ ವಿಷಯವೆಂದರೆ, ಆಳಂದ ಕ್ಷೇತ್ರದ ಮತಗಳ್ಳತನ ಆರೋಪ ಪಟ್ಟಿಯಲ್ಲಿ ಮಾಜಿ ಬಿಜೆಪಿ ಶಾಸಕರನ್ನು ಮೊದಲ ಆರೋಪಿ (ಎ1) ಎಂದು ಹೆಸರಿಸಿರುವುದರ ಬಗ್ಗೆ ಬಿಜೆಪಿ ಮೌನವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರಿಯಾಂಕ್‌ ಖರ್ಗೆ ಹಂಚಿಕೊಂಡಿರುವ ವರದಿಯಲ್ಲಿ, ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನ ಆಡಳಿತ ವಿಭಾಗಗಳಲ್ಲಿರುವ 102 ವಿಧಾನಸಭಾ ಕ್ಷೇತ್ರಗಳಲ್ಲಿ 5,100 ಜನರನ್ನು ಒಳಗೊಂಡ ಈ ಸಮೀಕ್ಷೆಯನ್ನು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ನಿಯೋಜಿಸಿದ್ದರು ಎಂದು ಹೇಳಲಾಗಿದೆ. ಆದರೆ, ವರದಿಯ ಆರಂಭದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿದ ವರದಿ ಎಂದು ಹೇಳಲಾಗಿದೆ.

ಇದು 2024ರ ಲೋಕಸಭಾ ಚುನಾವಣೆಯ ನಂತರ ನಾಗರಿಕರ ಜ್ಞಾನ (Knowledge), ಧೋರಣೆ (Attitude) ಮತ್ತು ಅಭ್ಯಾಸ (Practice) ಅಂದರೆ ಕೆಎಪಿ (KAP) ಸಮೀಕ್ಷೆಯ ಅಂತಿಮ ಹಂತದ (endline) ಸಮೀಕ್ಷೆಯಾಗಿದೆ. ಈ ಸಮೀಕ್ಷೆಯ ವರದಿಯನ್ನು ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶಗಳ ಇಲಾಖೆಯಡಿ ಬರುವ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಪ್ರಕಟಿಸಿದೆ. ಈ ಸಮೀಕ್ಷೆಯು ಚುನಾವಣಾ ಆಯೋಗದ ಕಾರ್ಯಕ್ರಮದ ಪ್ರಭಾವವನ್ನು ಮೌಲ್ಯಮಾಪನ ಮಾಡಲು ನಡೆಸಲಾಗಿದ್ದು, ಕರ್ನಾಟಕದಲ್ಲಿ ಮತದಾರರ ಚುನಾವಣಾ ಪ್ರಕ್ರಿಯೆ ಬಗ್ಗೆ ತಿಳುವಳಿಕೆ, ನಂಬಿಕೆ ಮತ್ತು ಭಾಗವಹಿಸುವಿಕೆಯನ್ನು ಅಧ್ಯಯನ ಮಾಡಿದೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...