Homeಕರ್ನಾಟಕಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆ (ಅ.13) ಹೇಳಿಕೊಂಡಿದ್ದರು. ಈ ಕುರಿತಂತೆ ಇಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬರು ಸಚಿವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುವುದು ಇದೆ. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ “ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ನಿನಗೆಷ್ಟು ಧೈರ್ಯ?” ಎಂದು ಖರ್ಗೆ ಅವರಿಗೆ ಧಮ್ಕಿ ಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ನಿಮ್ಮ ಆರ್‌ಎಸ್‌ಎಸ್‌ ಶಾಖೆಗಳಲ್ಲಿ ಇದನ್ನೇ ಕಲಿಸಿಕೊಡುತ್ತಾರಾ?” ಎಂದು ಆತನಿಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, “ಆರ್‌ಎಸ್‌ಎಸ್‌ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?” ಎಂದು ಪ್ರಶ್ನಿಸಿದ್ದಾರೆ.
“ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿವೈ ವಿಜಯೇಂದ್ರ, ಆರ್‌.ಅಶೋಕ, ಸಿ.ಟಿ ರವಿ, ಸುನಿಲ್ ಕುಮಾರ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?” ಎಂದು ಕೇಳಿದ್ದಾರೆ.
“ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು, ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ” ಎಂದಿದ್ದಾರೆ.
“ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, ಆರ್‌ಎಸ್‌ಸ್‌ ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ. ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ” ಎಂದು ಸ್ಪಷ್ಟಪಡಿಸಿದ್ದಾರೆ.
“ಆರ್‌ಎಸ್‌ಎಸ್‌ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ” ಎಂದು ಹೇಳಿದ್ದಾರೆ.
“ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ: ಶವಪರೀಕ್ಷೆಗೆ ಒಪ್ಪಿದ ದಲಿತ ಐಪಿಎಸ್ ಅಧಿಕಾರಿ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...