Homeಕರ್ನಾಟಕಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

- Advertisement -
- Advertisement -

ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

“ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ” ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

“ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತಡ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ. ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಗ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ” ಎಂದಿದ್ದಾರೆ.

“ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಪ್ರಿಯಾಂಕ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಅವರು ಟಿಪ್ಪಣಿ ಕಳುಹಿಸಿದ್ದಾರೆ.

9 ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ: ಇಬ್ಬರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -