Homeಮುಖಪುಟಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

- Advertisement -
- Advertisement -

ಟಿವಿ ಚರ್ಚೆಗಳ ತುಣುಕುಗಳನ್ನು ಪೋಸ್ಟ್ ಮಾಡುವ ಮೂಲಕ ಹಕ್ಕುಸ್ವಾಮ್ಯ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬ ದೂರುಗಳ ಮೇಲೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್ ಅವರ ಟ್ವಿಟರ್‌ ಖಾತೆಗೆ ಒಂಉ ಗಂಟೆ ನಿರ್ಬಂಧ ವಿಧಿಸಲಾಗಿದೆ.

“ಯುಎಸ್ಎದ ಡಿಜಿಟಲ್ ಮಿಲೇನಿಯಮ್ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಇದೆ ಎಂದು ಆರೋಪಿಸಿ ಸುಮಾರು ಒಂದು ಗಂಟೆಗಳ ಕಾಲ ನನ್ನ ಖಾತೆಗೆ ಟ್ವಿಟರ್ ನಿರ್ಬಂಧ ವಿಧಿಸಿತ್ತು ಎಂದು ಸಚಿವ ರವಿಶಂಕರ್‌ ಪ್ರಸಾದ್ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

“ಟ್ವಿಟ್ಟರ್‌ನ ಈ ಕ್ರಮ, ಮಾಹಿತಿ ತಂತ್ರಜ್ಞಾನ ನಿಯಮಗಳು 2021 ರ ನಿಯಮ 4 (8) ಅನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ,  ನನ್ನ ಸ್ವಂತ ಖಾತೆಗೆ ನನ್ನನ್ನು ನಿರ್ಬಂಧಿಸುವ ಮೊದಲು ಯಾವುದೇ ಮುನ್ಸೂಚನೆಯನ್ನು ನೀಡಿಲ್ಲ” ಎಂದು ಸಚಿವ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

“ಕೇಂದ್ರದ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಲು ಟ್ವಿಟರ್ ಏಕೆ ನಿರಾಕರಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಏಕೆಂದರೆ ಟ್ವಿಟರ್ ಈ ಮಾರ್ಗಸೂಚಿಗಳನ್ನು ಅನುಸರಿಸಿದರೆ, ಅವರ ಕಾರ್ಯಸೂಚಿಗೆ ಸರಿಹೊಂದದ ವ್ಯಕ್ತಿಯ ಖಾತೆಯನ್ನು ನಿರ್ಬಂಧಿಸುವುದು ಸಾಧ್ಯವಾಗುವುದಿಲ್ಲ” ಎಂದು ಟ್ವಿಟರ್‌ ವಿರುದ್ಧ ಕಿಡಿಕಾರಿದ್ದಾರೆ.

ಇದರ ಜೊತೆಗೆ “ಯಾವುದೇ ಪ್ಲಾಟ್‌ಫಾರ್ಮ್ ಇರಲಿ ಎಲ್ಲರು ಹೊಸ ಐಟಿ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸಬೇಕಾಗುತ್ತದೆ. ಅದರ ಬಗ್ಗೆ ಯಾವುದೇ ರಾಜಿ ಇಲ್ಲ” ಎಂದು ಒತ್ತಿ ಹೇಳಿದ್ದಾರೆ.

ರವಿಶಂಕರ್‌ ಪ್ರಸಾದ್‌ ಅವರ ಟ್ವಿಟರ್‌ ಖಾತೆ ನಿರ್ಬಂಧಕ್ಕೆ ಕಾಂಗ್ರೆಸ್ ನಾಯಕ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಟ್ವಿಟರ್‌ ನಿಯಮಗಳನ್ನು ಏಕೆ ಪಾಲಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಅಮೆರಿಕಾದಲ್ಲಿ,  ಟ್ವಿಟರ್ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಯುಎಸ್ ಅಧ್ಯಕ್ಷರನ್ನು ಬ್ಯಾನ್ ಮಾಡಲಾಗಿದೆ. ಭಾರತದಲ್ಲಿ, ಟ್ವಿಟರ್ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಕೆಲವು ಗಂಟೆಗಳ ಕಾಲ ಸಚಿವರಿಗೆ ಖಾತೆಯನ್ನು ಬಳಸಲಿ ನಿರ್ಬಂಧ ವಿಧಿಸಲಾಗಿದೆ. ಸಚಿವ ರವಿಶಂಕರ್‌ ಪ್ರಸಾದ್ ನಿಯಮಗಳನ್ನು ಏಕೆ ಅನುಸರಿಸಬಾರದು? ಸರ್ಕಾರ ಈಗ ಟ್ವಿಟರ್ ಮೇಲೆ ದಾಳಿ ನಡೆಸಿ, ಟ್ವಿಟರ್ ಎಂಡಿಗೆ ಕಿರುಕುಳ ನೀಡುತ್ತದೆಯೇ..?” ಎಂದು ಶ್ರಿವತ್ಸ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...