Homeಮುಖಪುಟ'ಜೈ ಭೀಮ್' ನಿರ್ಲಕ್ಷಿಸಿ ಕಳ್ಳಸಾಗಾಣಿಕೆ ಕಥಾಹಂದರದ 'ಪುಷ್ಪಾ' ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಬೇಸರ ವ್ಯಕ್ತಪಡಿಸಿದ ಸಚಿವೆ...

‘ಜೈ ಭೀಮ್’ ನಿರ್ಲಕ್ಷಿಸಿ ಕಳ್ಳಸಾಗಾಣಿಕೆ ಕಥಾಹಂದರದ ‘ಪುಷ್ಪಾ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಬೇಸರ ವ್ಯಕ್ತಪಡಿಸಿದ ಸಚಿವೆ ಸೀತಕ್ಕ

- Advertisement -
- Advertisement -

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುಷ್ಪ: ದಿ ರೈಸ್ ಚಿತ್ರಕ್ಕೆ ಸಿಕ್ಕಿರುವ ಮನ್ನಣೆ, ಜೈ ಭೀಮ್‌ನಂತಹ ಸಾಮಾಜಿಕ ಪರಿಣಾಮ ಬೀರುವ ಚಿತ್ರಗಳಿಗೆ ಸಿಕ್ಕಿಲ್ಲ ಎಂದು ಸೀತಕ್ಕ ಎಂದೇ ಖ್ಯಾತರಾಗಿರುವ ತೆಲಂಗಾಣ ಸಚಿವೆ ದನಸಾರಿ ಅನಸೂಯಾ ಸೀತಕ್ಕ ಬೇಸರ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನಲ್ಲಿ ಪುಷ್ಪ 2: ದಿ ರೂಲ್‌ನ ಪ್ರದರ್ಶನದ ವೇಳೆ ಥಿಯೇಟರ್‌ನಲ್ಲಿ ನೂಕುನುಗ್ಗಲು ಉಂಟಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಮಗನ ಸ್ಥಿತಿ ಗಂಭೀರವಾಗಿದೆ. ಚಿತ್ರದ ನಾಯಕ ನಟ ಅಲ್ಲು ಅರ್ಜುನ ಬಂಧನದ ವಿವಾದ ಸುದ್ದಿಯಲ್ಲಿರುವಾಗಲೇ ಅವರ ಈ ಹೇಳಿಕೆಗಳು ಬಂದಿವೆ.

ಕಳ್ಳಸಾಗಾಣಿಕೆದಾರನನ್ನು ನಾಯಕನನ್ನಾಗಿ ಚಿತ್ರಿಸುವ ಬಗ್ಗೆ ಸೀತಕ್ಕ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅಂತಹ ಚಲನಚಿತ್ರಗಳು ತಿಳಿಸುವ ಮೌಲ್ಯಗಳು ಏನು ಎಂದು ಅವರು ಪ್ರಶ್ನಿಸಿದ್ದಾರೆ.

ಮುಳುಗು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೀತಕ್ಕ, “ಜೈ ಭೀಮ್‌ನಂತಹ ದಮನಿತರ ಹಕ್ಕುಗಳನ್ನು ಪ್ರದರ್ಶಿಸಿದ, ದೀನದಲಿತರಿಗೆ ಸ್ಫೂರ್ತಿ ನೀಡಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಿಲ್ಲ. ಅಂತಹ ಅರ್ಥಪೂರ್ಣ ಚಿತ್ರಗಳಿಗೆ ಕೇಂದ್ರದ ಪ್ರೋತ್ಸಾಹವಿಲ್ಲ. ಬದಲಾಗಿ, ಒಬ್ಬ ಕಳ್ಳಸಾಗಣೆದಾರನಿಗೆ, ಪೋಲೀಸ್‌ನನ್ನು ವಿವಸ್ತ್ರಗೊಳಿಸಿ ಪ್ರಶಸ್ತಿ ನೀಡಲಾಯಿತು.. ಇದು ಯಾವ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ಪುಷ್ಪಾ ಚಿತ್ರದ ನಿರೂಪಣೆಯನ್ನು ಅವರು ಟೀಕಿಸಿದರು. ಅಲ್ಲಿ ಕಳ್ಳಸಾಗಾಣಿಕೆದಾರನನ್ನು ವೈಭವೀಕರಿಸಲಾಗುತ್ತದೆ ಮತ್ತು ಕಾನೂನು ಜಾರಿಯ ಸಂಕೇತವಾದ ಪೊಲೀಸ್ ಅಧಿಕಾರಿಯನ್ನು ಖಳನಾಯಕನಂತೆ ಚಿತ್ರಿಸಲಾಗಿದೆ. “ಕಾನೂನುಬದ್ಧವಾಗಿ ಅಪರಾಧವನ್ನು ತಡೆಯುವ ಪೋಲೀಸ್ ಅಧಿಕಾರಿ ಶೂನ್ಯವಾಗುವುದು ಹೇಗೆ” ಎಂದು ಅವರು ಕೇಳಿದರು.

ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ಪೋಸ್ಟರ್.

ಸಮಾಜವನ್ನು ರೂಪಿಸುವಲ್ಲಿ ಮತ್ತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವಲ್ಲಿ ಸಿನಿಮಾದ ಪಾತ್ರವನ್ನು ಒತ್ತಿ ಹೇಳಿದ ಸೀತಕ್ಕ, ಬಲವಾದ ಸಾಮಾಜಿಕ ಮೌಲ್ಯಗಳನ್ನು ಹೊಂದಿರುವ ಚಲನಚಿತ್ರಗಳಿಗೆ ಅವರು ಕರೆ ನೀಡಿದರು. “ಚಲನಚಿತ್ರಗಳು ಸಮಾಜವನ್ನು ಉನ್ನತೀಕರಿಸುವ ಮತ್ತು ಇತರರ ಘನತೆಯನ್ನು ಕಾಪಾಡುವ ಗುಣಗಳನ್ನು ಹೊಂದಿರಬೇಕು. ಸಂವಿಧಾನ ಸ್ಥಾಪಿಸಿದ ಸಂಸ್ಥೆಗಳನ್ನು ಗೌರವಿಸಿದರೆ ಮಾತ್ರ ಸಮಾಜ ಪ್ರಗತಿ ಹೊಂದುತ್ತದೆ” ಎಂದರು.

ಸಕಾರಾತ್ಮಕ ಸಂದೇಶಗಳನ್ನು ನೀಡುವ ಮತ್ತು ಸಮಾಜದ ಪ್ರಗತಿಯನ್ನು ಉತ್ತೇಜಿಸುವ ಚಲನಚಿತ್ರಗಳನ್ನು ಸೀತಕ್ಕ ಒತ್ತಾಯಿಸಿದರು. “ಪ್ರಶಸ್ತಿಗಳು ಸಮಾಜವನ್ನು ಪ್ರೇರೇಪಿಸುವ, ಮುಂದಕ್ಕೆ ಕೊಂಡೊಯ್ಯುವ ಚಲನಚಿತ್ರಗಳಿಗೆ ಹೋಗಬೇಕು. ಕಳ್ಳಸಾಗಣೆಯನ್ನು ವೈಭವೀಕರಿಸುವ ಅಥವಾ ಕಾನೂನುಬದ್ಧ ಅಧಿಕಾರವನ್ನು ದುರ್ಬಲಗೊಳಿಸುವ ಚಿತ್ರಗಳಿಗಲ್ಲ” ಎಂದು ಅವರು ಹೇಳಿದರು.

ಪುಷ್ಪ: ದಿ ರೈಸ್ (2021) ಚಿತ್ರದಲ್ಲಿನ ಶೀರ್ಷಿಕೆಯ ಪಾತ್ರದ ಚಿತ್ರಣಕ್ಕಾಗಿ ನಟ ಅಲ್ಲು ಅರ್ಜುನ್ ಅತ್ಯುತ್ತಮ ನಟ (ಪುರುಷ) ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದರು. ಆದರೆ, ದಮನಿತರ ನ್ಯಾಯಕ್ಕಾಗಿ ಹೋರಾಡುವ ವಕೀಲರಾಗಿ ಸೂರ್ಯ ನಟಿಸಿದ ತಮಿಳು ಚಲನಚಿತ್ರ ಜೈ ಭೀಮ್ ರಾಷ್ಟ್ರೀಯ ಪ್ರಶಸ್ತಿಗಳ ಮನ್ನಣೆಯಿಂದ ಹೊರಗುಳಿದಿದೆ.

ಇದನ್ನೂ ಓದಿ; ಛತ್ತೀಸ್‌ಗಢ| ಅಕ್ಕಿ ಕದ್ದ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...