Homeಮುಖಪುಟಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ: ಸಚಿವ ಶಿವಲಿಂಗೇಗೌಡ ವಿವಾದದ ಹೇಳಿಕೆ ಲೋಕಾಯುಕ್ತ...

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ: ಸಚಿವ ಶಿವಲಿಂಗೇಗೌಡ ವಿವಾದದ ಹೇಳಿಕೆ ಲೋಕಾಯುಕ್ತ ಮತ್ತು ರಾಜ್ಯಪಾಲರಿಗೆ ದೂರು

- Advertisement -
- Advertisement -

ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಚಿವರ ವಿರುದ್ಧ ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿಗೆ ವಕೀಲರು ದೂರು ಸಲ್ಲಿಸಿದ್ದಾರೆ.

ವಕೀಲ ಎಂ.ಡಿ. ಗೋಪಾಲಗೌಡ ನೇತೃತ್ವದ ನಿಯೋಗವು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸಚಿವರು ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡುವಂತೆ ಸಾರ್ವಜನಿಕವಾಗಿ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದೆ. ಸಾರ್ವಜನಿಕ ಸೇವೆಯಲ್ಲಿ ಭ್ರಷ್ಟಾಚಾರವನ್ನು ಉತ್ತೇಜಿಸುವ ಹಾಗೂ ಲಂಚ ಪಡೆಯುವುದನ್ನು ಸಮರ್ಥಿಸುವ ರೀತಿಯಲ್ಲಿ ಸಚಿವರು ಮಾತನಾಡಿದ್ದು, ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಕೀಲರು ಒತ್ತಾಯಿಸಿದ್ದಾರೆ.

ಸಕಲೇಶಪುರದಲ್ಲಿ ನಡೆದ ಜನಸೇವಾ ಆಂದೋಲನ ಸಭೆಯಲ್ಲಿ ಮಾತನಾಡಿದ್ದ ಸಚಿವ ಶಿವಲಿಂಗೇಗೌಡ, “ಅಧಿಕಾರಿಗಳು ಬಲವಂತವಾಗಿ ಲಂಚ ವಸೂಲಿ ಮಾಡುವುದು ತಪ್ಪು, ಆದರೆ ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಸಾರ್ವಜನಿಕರು ಗೌರವದಿಂದ ಏನಾದರೂ ನೀಡುವುದು ಅವರ ಕರ್ತವ್ಯ” ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಸಚಿವರ ಈ ಮಾತಿನ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಸೆಕ್ಷನ್ 7, 8 ಮತ್ತು 12ರ ಅಡಿಯಲ್ಲಿ ಸಚಿವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಂಡು, ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಆದರೆ ತಮ್ಮ ಹೇಳಿಕೆ ವಿವಾದಕ್ಕೆ ಈಡಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಸಚಿವ ಕೆ.ಎಂ. ಶಿವಲಿಂಗೇಗೌಡ, “ನಾನು ಸಾರ್ವಜನಿಕರಿಗೆ ಅಥವಾ ರೈತರಿಗೆ ಅಧಿಕಾರಿಗಳಿಗೆ ಲಂಚ ನೀಡುವಂತೆ ಎಲ್ಲೂ ಹೇಳಿಲ್ಲ. ರೈತರು ಮತ್ತು ಅಧಿಕಾರಿಗಳ ನಡುವಿನ ಚರ್ಚೆಯ ಸಂದರ್ಭದಲ್ಲಿ, ಸರ್ಕಾರಿ ಅಧಿಕಾರಿಗಳನ್ನು ಗೌರವದಿಂದ ಕಾಣಬೇಕು ಎಂದಷ್ಟೇ ಹೇಳಿದ್ದೇನೆ ಹೊರತು ಲಂಚ ನೀಡಲು ಯಾವುದೇ ರೀತಿಯ ಪ್ರಚೋದನೆ ನೀಡಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆಯಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

‘ವಂದೇ ಮಾತರಂ’ ದೇಶದ ರಾಷ್ಟ್ರೀಯ ಗೀತೆಯಾಗಿ (National Song) ಮುಂದುವರಿಯಲಿದೆ, ಆದರೆ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ನೈಜ ಧಾರ್ಮಿಕ ಆಕ್ಷೇಪಣೆ ಹೊಂದಿರುವ ಯಾವುದೇ ವ್ಯಕ್ತಿಯು ಅದರ ಕೆಲವು ಚರಣಗಳನ್ನು...

ಉತ್ತರ ಪ್ರದೇಶ ಸೇರಿದಂತೆ 3 ರಾಜ್ಯಗಳ 12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಭಾರತೀಯ ಚುನಾವಣಾ ಆಯೋಗವು (ಇಸಿಐ) 11 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಗಳು ಹಾಗೂ ಪಶ್ಚಿಮ ಬಂಗಾಳದ ಒಂದು ಸ್ಥಾನಕ್ಕೆ ಉಪಚುನಾವಣೆಯನ್ನು ಅಕ್ಟೋಬರ್ 16ರಂದು ನಡೆಸುವುದಾಗಿ ಘೋಷಿಸಿದೆ. ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ನಡೆಯಲಿರುವ 11 ಸ್ಥಾನಗಳ...

ಪತ್ರಕರ್ತ ರವಿ ನಾಯರ್ ಬಂಧನ ಮುಂದುವರಿಕೆ: ಅದಾನಿ ಮಾನನಷ್ಟ ಪ್ರಕರಣದಲ್ಲಿ ಬಿಡುಗಡೆ ಅರ್ಜಿ ಮುಂದೂಡಿದ ಗುಜರಾತ್ ಹೈಕೋರ್ಟ್ 

ಅದಾನಿ ಎಂಟರ್‌ಪ್ರೈಸಸ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಬಂಧನ ಪ್ರಶ್ನಿಸಿ ಪತ್ರಕರ್ತ ರವಿ ನಾಯರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ಸೋಮವಾರ ಮುಂದೂಡಿದೆ. ನಾಯರ್ ಅವರ ಅರ್ಜಿಗೆ ಪ್ರತಿಕ್ರಿಯಿಸಲು ಅದಾನಿ ಎಂಟರ್‌ಪ್ರೈಸಸ್‌ಗೆ...

ರಾಮನ ಹೆಸರಿಗೆ ಕಳಂಕ ತರಬೇಡಿ’: ರಾಮಮಂದಿರ ದೇಣಿಗೆ ಪ್ರಕರಣದ ಚಾರ್ಜ್‌ಶೀಟ್‌ ವಿಳಂಬದ ಕುರಿತು ಕಾಂಗ್ರೆಸ್‌ ಆಕ್ರೋಶ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆ ಕುರಿತು ಕಾಂಗ್ರೆಸ್‌ ಪ್ರಶ್ನೆಗಳನ್ನು ಎತ್ತಿದ್ದು, ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದೆ. ದೇಣಿಗೆ ನಿರ್ವಹಣೆ ಮತ್ತು...

SIR ಹೆಸರಿನಲ್ಲಿ ಚುನಾವಣಾ ಆಯೋಗದ ವಿಐಪಿ ಹಾಗೂ ಸಾಮಾನ್ಯ ಮತದಾರರು ಎಂಬ ಪದವೇ ಅಸಂವಿಧಾನಿಕ: ಮಲ್ಲಿಕಾರ್ಜುನ ಖರ್ಗೆ

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಹೆಸರಿನಲ್ಲಿ ದೇಶದ ಪ್ರಜೆಗಳ ಮತದಾನದ ಹಕ್ಕನ್ನೇ ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ...

ದೆಹಲಿ ಎಸ್‌ಐಆರ್‌: ಮುಸ್ಲಿಂ, ಎಸ್‌ಸಿ ಹಾಗೂ ವಲಸಿಗರ ಪ್ರದೇಶಗಳಲ್ಲೇ ಭಾರೀ ಮತದಾರರ ಹೆಸರುಗಳ ಹೊರಗಿಡುವಿಕೆ: ವರದಿ

ನವದೆಹಲಿ: ದೆಹಲಿಯಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಈ ಹಿಂದೆ ನೋಂದಾಯಿತರಾಗಿದ್ದ ಸುಮಾರು ಮೂವರಲ್ಲಿ ಒಬ್ಬರ ಹೆಸರು ಕಾಣೆಯಾಗಿರುವುದು ಗಮನಾರ್ಹ ಸಂಗತಿಯಾಗಿ ಹೊರಹೊಮ್ಮಿದೆ. ಅದರಲ್ಲೂ...

ಅಪಹರಣ ಪ್ರಕರಣದಲ್ಲಿ ಬಂಧನ: ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ದಲಿತ ಯುವಕ

ಉತ್ತರ ಪ್ರದೆಶದ ಪ್ರತಾಪ್‌ಗಢದ ಪಟ್ಟಿ ಪೊಲೀಸ್ ಠಾಣೆಯ ತನಿಖಾ ಕೊಠಡಿಯ ಶೌಚಾಲಯದಲ್ಲಿ ಸೋಮವಾರ ಮುಂಜಾನೆ 22 ವರ್ಷದ ದಲಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪ್ರತಾಪ್‌ಗಢ ಎಸ್‌ಪಿ,...

‘ಬಾಂಗ್ಲಾದೇಶಿ’ ಎಂಬ ಹಣೆಪಟ್ಟಿ, 87 ದಿನಗಳ ಬಂಧನ, ಬಳಿಕ ಜಾಮೀನು : ಇದು ಬಂಗಾಳಿ ಮುಸ್ಲಿಮನ ಕರುಣಾಜನಕ ಕಥೆ

ಜಲೀಲ್ ಅಖ್ತರ್ ಅವರು ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಬಾಗ್ರೋಯಿ ಗ್ರಾಮದಲ್ಲಿ 70 ವರ್ಷಗಳ ಕಾಲ ಅತ್ಯಂತ ಶಾಂತಿಯುತ ಮತ್ತು ನಿರಾಳವಾದ ಜೀವನವನ್ನು ನಡೆಸುತ್ತಿದ್ದರು. ಭೂ ರಹಿತ ಗ್ರಾಮಸ್ಥರಾಗಿದ್ದ ಅವರು, ದಿನಗೂಲಿ...

‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ

ಪ್ರಯಾಗ್‌ರಾಜ್‌ನ ಡಾ. ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್‌ಎಲ್‌ಯು) ಕಾನೂನು ವಿಭಾಗದ ಮುಖ್ಯಸ್ಥರ ವಿರುದ್ಧ ದಲಿತ ವಿದ್ಯಾರ್ಥಿಯೊಬ್ಬರು ಮಾಡಿದ ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನದ ಆರೋಪಗಳ ಬಗ್ಗೆ ತನಿಖೆ ನಡೆಸಲು...

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...