Homeಕರ್ನಾಟಕಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ - ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ...

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬೆಂಗಳೂರು ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವ್ರೆ ಸ್ವಾಮಿ, ಏನ್ ಮಾಡೋದು, ಎಲ್ಲಿ ನೋಡಿದ್ರೂ ಗಿಜಿಗಿಜಿ ಅಂತಾರೆ ಎಂದು ಕೊರೊನಾ ರೋಗಿಗಳ ಕುರಿತು ಸಚಿವ ವಿ.ಸೋಮಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದಾರೆ ಸ್ವಾಮೀಜಿ, ಎಲ್ಲಿ ನೋಡಿದ್ರೂ ಅವರೆ’ ಎಂದು ಸಚಿವರ ಮಾತಿಗೆ ದನಿಗೂಡಿಸಿದ್ದಾರೆ.

ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಜೊತೆ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಕೈಗೊಂಡಿರುವ ಕಾರ್ಯಗಳನ್ನು ವಿವರಿಸುತ್ತಾರೆ. ಆ ಸಂದರ್ಭದಲ್ಲಿ ಮೇಲಿನ ವಿವಾದಾತ್ಮಕ ಮಾತುಳನ್ನು ಆಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿ

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ.. ಅವರೆ ಎಂದರೆ ಯಾರು ಎಂದು ಪ್ರಶ್ನೆ ಉದ್ಭವ??

Posted by Naanu Gauri on Tuesday, July 14, 2020

ಬೆಂಗಳೂರಿನ 53 ವಾರ್ಡ್‌ಗಳಲ್ಲಿ 26 ಕಡೆ ಕೋವಿಡ್ ಆಸ್ಪತ್ರೆಗಳನ್ನು ತೆರೆದಿದ್ದೇನೆ. 24*7 ಸಹಾಯವಾಣಿ, ಆಂಬುಲೆನ್ಸ್, ಒಂದು ಆಕ್ಸಿಜನ್ ಇದ್ದು ಎಲ್ಲಾ ಸೌಲಭ್ಯ ಒದಗಿಸಲಾಗಿದೆ ಎಂದು ಹೇಳುತ್ತಾರೆ.

ಆಗ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದ್ದಾರೆ ಸ್ವಾಮೀಜಿ ಅನ್ನುತ್ತಾರೆ. ಇದರಿಂದ ಉತ್ತೇಜನಗೊಂಡ ಸಚಿವ ಸೋಮಣ್ಣ ‘ಎಲ್ಲಾ ಅವ್ರೆ ಏನ್ ಮಾಡೋದು, ಗಿಜಿಗಿಜಿ ಅಂತಾರೆ ಸ್ವಾಮೀಜಿ’ ಎಂದು ಹೇಳುತ್ತಾರೆ.

ಇಲ್ಲಿ ಎಲ್ಲಾ ಅವರೆ ಎಂದು ಯಾರು? ಒಂದು ಸಮುದಾಯದವರನ್ನು ಹೀಗೆ ಗುರಿ ಮಾಡಬಹುದೇ? ಸಂವಿಧಾನಬದ್ದವಾಗಿ ಆಡಳಿತ ನಡೆಸುತ್ತೇವೆಂದು ಪ್ರತಿಜ್ಞೆ ಸ್ವೀಕರಿಸಿರುವ ಸಚಿವರು ಈಗೆ ಸಾರ್ವಜನಿಕವಾಗಿ ಕೋವಿಡ್ ಸೋಂಕಿತರನ್ನು ಹೀಯಾಳಿಸಬಹುದೇ? ಎಂದು ಹಲವರು ಪ್ರಶ್ನಿಸಿದ್ದಾರೆ.

ಆಂಬುಲೆನ್ಸ್ ನವರು ಕೋವಿಡ್ ಸೋಂಕಿತರನ್ನು ಕರೆತರಲು 3000 ರೂಪಾಯಿ ಕೊಟ್ರೆ ಹೋಗೋದು.. ಇಲ್ಲದಿದ್ದರೆ ಹೋಗೋದೇ ಇಲ್ಲ ಎಂದು ಸಚಿವ ಸೋಮಣ್ಣ ಅಸಹಾಯಕತೆ ವ್ಯಕ್ತಪಡಿಸುತ್ತಾ, ಹಾಗಾಗಿ ನಾವು ದೊಡ್ಡ ಆಸ್ಪತ್ರೆಗಳಲ್ಲಿ 4500 ರೂಪಾಯಿ ಫಿಕ್ಸ್ ಮಾಡಿದ್ದೇವೆ ಎನ್ನುತ್ತಾರೆ. ಇದು ಸಹ ವಿಡಿಯೋದಲ್ಲಿ ದಾಖಲಾಗಿದೆ.

ಪ್ರತಿ ವಾರ್ಡ್‌ನಲ್ಲಿರುವ ಕೌಂಟರ್‌ ಗೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದೇನೆ. ಅವರು ಆಯಾ ವಾರ್ಡ್‌ನಷ್ಟೇ ನೋಡಿಕೊಳ್ಳುತ್ತಾರೆ. ಹೀಗಾಗಿ ಸೋಂಕು ಕಂಟ್ರೋಲ್ ಗೆ ಬಂದಿದೆ ಎಂದು ಸ್ವಾಮೀಗೆ ವಿವರಿಸಿದ್ದಾರೆ.

ನಿನ್ನೆ ಮಾಜಿ ಸಚಿವ ಜಾರ್ಜ್, ಕಾಂಗ್ರೆಸ್ ಮುಖಂಡ ಹ್ಯಾರೀಸ್ ಮತ್ತು ಶಾಸಕ ರಿಜ್ವನ್  ಅರ್ಷದ್, ಅಖಂಡ ಶ್ರೀನಿವಾಸಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಸೋಂಕು ನಿಯಂತ್ರಣದ ಸಂಬಂಧ ಚರ್ಚೆಸಿದ್ದೇನೆ ಎಂದೂ ಸಹ ಸೋಮಣ್ಣ ಹೇಳಿದ್ದಾರೆ.


ಇದನ್ನೂ ಓದಿ:

ಒಳಚರಂಡಿ ನಿರ್ಮಾಣ ಕಾಮಗಾರಿ: ಕ್ಯೂರಿಂಗ್‌ಗೆ ಮೊದಲೇ ಹಾಳಾದ ಛೇಂಬರ್‌ಗಳು ತುಮಕೂರಿನಲ್ಲಿ ಹೀಗೊಂದು ಕಳಪೆ ಕಾಮಗಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...