ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿ ದಿನ ಬೆಂಗಳೂರಿನಲ್ಲಿ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗಾಗಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿ ದಿನ 1 ಲಕ್ಷ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಒಂದು ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಸಂಪರ್ಕಿತರನ್ನು ಪತ್ತೆ ಮಾಡಲು ಸೂಚಿಸಲಾಗಿದೆ ಎಂದು  ಬಿಬಿಎಂಪಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದದ ಬಳಿಕ ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವುದರಿಂದ ಕೊರೊನಾ ಪರೀಕ್ಷೆ ಸಂಖ್ಯೆ ಹೆಚ್ಚಿಸಲಾಗಿದೆ. ಅಧಿಕಾರಿಗಳು ಜನರ ಮನೆ ಬಾಗಿಲಿಗೆ ಬಂದು ಕೊರೊನಾ ಪರೀಕ್ಷೆ ಮಾಡಿದರೆ ಸಾರ್ವಜನಿಕರು ಸಹಕರಿಸಬೇಕು. ಯಾರೂ ಗಲಾಟೆ ಮಾಡಬಾರದು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ ಬರುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ- ಜಿಲ್ಲಾಧಿಕಾರಿ

“ಬಿಬಿಎಂಪಿ ವ್ಯಾಪ್ತಿಯಲ್ಲಿ 8,500 ಬೂತ್ ಇದ್ದು, ಪ್ರತಿ ಬೂತ್‌ನಲ್ಲಿಯೂ ತಂಡಗಳನ್ನು ರಚಿಸಲಾಗುವುದು. ಈ ತಂಡ ಪ್ರತಿ ಮನೆ ಬಾಗಿಲಿಗೆ ಹೋಗಿ ಪರೀಕ್ಷೆ ಮಾಡಲಿದೆ. ಕೊರೊನಾ ರೋಗಿಗಳಿಗೆ ಸಹಾಯ, ಐಸೋಲೇಟ್ ಆದವರ ಸಂಚಾರ, ಅವರಿಗೆ ಆರೋಗ್ಯ ರಕ್ಷಣೆ, ಮುದ್ರೆ ಹಾಕುವುದು, ಆರೋಗ್ಯ ಪರೀಕ್ಷೆ, ಸೋಂಕಿಗೊಳಗಾದವರಿಗೆ ಆಕ್ಸಿಜನ್ ವ್ಯವಸ್ಥೆ ಹೇಗಿದೆ ಎಂಬ ಮೊದಲಾದ ಕೆಲಸಗಳನ್ನು ಈ ತಂಡ ಮಾಡಲಿದೆ” ಎಂದು ಮಾಹಿತಿ ನೀಡಿದ್ದಾರೆ.

’ಕಳೆದ ವರ್ಷವೇ ಈ ಕಾರ್ಯಕ್ರಮ ಹಾಕಿಕೊಂಡಿದ್ದರೂ ನೂರಕ್ಕೆ ನೂರರಷ್ಟು ಆಗಿರಲಿಲ್ಲ. ಈಗ ಕಾರ್ಯರೂಪಕ್ಕೆ ತರಲಾಗುತ್ತಿದೆ. ಪ್ರತಿ ವಾರ್ಡ್ ಗೆ ಒಂದರಂತೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುತ್ತಿದ್ದು, ಒಟ್ಟು 250 ಆಂಬ್ಯುಲೆನ್ಸ್ ಸಿದ್ಧವಿದೆ. ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೊರೊನಾ ರೋಗಿಗಳಿಗೆ ಮೀಸಲಿಡಬೇಕೆಂದು ಸೂಚಿಸಲಾಗಿದೆ’ ಎಂದರು.

ಇನ್ನು ದೇಶದಲ್ಲಿ ಮಹಾರಾಷ್ಟ್ರ, ಛತ್ತೀಸ್‌ಘಡ್, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ರಾಜ್ಯಗಳಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದೆ. ಬುಧವಾರ (ಏಪ್ರಿಲ್ 07) ದಾಖಲಾಗಿರುವ 1,26,789 ಹೊಸ ಪ್ರಕರಣಗಳಲ್ಲಿ ಶೇ .84.21 ರಷ್ಟು ಪ್ರಕರಣಗಳು ಈ 10 ರಾಜ್ಯಗಳಿಂದ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಹೆಚ್ಚು ಪ್ರಕರಣ ದಾಖಲಾಗಿರುವ ರಾಜ್ಯಗಳು

 ರಾಜ್ಯ          ಕೊರೊನಾ ಪ್ರಕರಣಗಳು(ದಿನ)

ಛತ್ತೀಸ್‌ಗಢ –     10,310
ಕರ್ನಾಟಕ –       6,976
ಉತ್ತರ ಪ್ರದೇಶ-   6,023
ದೆಹಲಿ  –           5,506
ಮಧ್ಯಪ್ರದೇಶ-    4,043
ಗುಜರಾತ್-       3,575
ತಮಿಳುನಾಡು – 3,986


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here