Homeಕರ್ನಾಟಕಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ತನ್ನ ಉದ್ಧಟತನದ ಮಾತನ್ನು ಅವರು ಮತ್ತೇ ಸಮರ್ಥಿಸಿಕೊಂಡಿದ್ದಾರೆ

- Advertisement -
- Advertisement -

ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಅವರು ‘ಸತ್ತು ಹೋಗು’ ಎಂದು ಹೇಳಿ ಉಡಾಫೆಯಿಂದ ವರ್ತಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ರಾಜ್ಯದಲ್ಲಿ ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೆ ಲಾಕ್‌ಡೌನ್‌ ಹೇರಿದೆ. ಕಳೆದ ವರ್ಷ ಮಾಡಿದ ಲಾಕ್‌ಡೌನ್‌ನಿಂದಲೇ ಇನ್ನೂ ಚೇತರಿಸಿಕೊಳ್ಳದ ಜನರಿಗೆ ಮತ್ತೊಂದು ಲಾಕ್‌ಡೌನ್‌ ಹೇರಿರುವುದು ಆಹಾರದ ಪ್ರಶ್ನೆಯನ್ನೂ ತಂದೊಡ್ಡಿದೆ. ಈ ನಡುವೆ ರಾಜ್ಯ ಸರ್ಕಾರವು ಪಡಿತರ ವ್ಯವಸ್ಥೆಯಲ್ಲಿ ಸಿಗುತ್ತಿದ್ದ ಅಕ್ಕಿಯನ್ನು 2 ಕೆ.ಜಿ. ಗೆ ಇಳಿಸಿದೆ. ಇದನ್ನು ಪ್ರಶ್ನಿಸಿದ್ದ ಜನರೊಂದಿಗೆ ರಾಜ್ಯದ ಸಚಿವರು ಜವಾಬ್ದಾರಿ ಮರೆತು ವರ್ತಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಗದಗ ಜಿಲ್ಲೆಯ ರೈತರ ಸಂಘದ ಕಾರ್ಯಕರ್ತರಾದ ಈಶ್ವರ್‌ ಎಂಬವರು ಸಚಿವ ಉಮೇಶ್ ಕತ್ತಿಗೆ ಕರೆ ಮಾಡಿ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ ಕಡಿತ ಮಾಡಿದ್ದರ ಬಗ್ಗೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವರು ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡುತ್ತೇವೆ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತದೆ. ಮೇ ತಿಂಗಳಿನಿಂದ ಈ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಮತ್ತೆ ಪ್ರಶ್ನಿಸಿರುವ ರೈತ ಸಂಘದ ಕಾರ್ಯಕರ್ತ, ಮುಂದಿನ ತಿಂಗಳು ಎನ್ನುತ್ತೀರಿ, ಅಲ್ಲಿವರೆಗೂ ಉಪವಾಸ ಇರುವುದಾ, ಸತ್ತೋಗುವುದಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉದ್ದಟತನದಿಂದ ಉತ್ತರಿಸಿದ ಸಚಿವರು, “ಸತ್ತು ಹೋಗು ಒಳ್ಳೆಯದು, ಮೊದಲು ಅಕ್ಕಿ ಮಾರಾಟ ಮಾಡಿವ ದಂಧೆ ನಿಲ್ಲಿಸಿ. ಫೋನ್ ಮಾಡಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ಅಷ್ಟೆ ಅಲ್ಲದೆ ಈ ಬಗ್ಗೆ ಸ್ಪಷ್ಟೀಕರಣ ಕೇಳಿದ್ದ ಮಾಧ್ಯಮದ ಜೊತೆಗೆ ತಾನಾಡಿದ ಮಾತನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ. “ಅಕ್ಕಿ ಕಡಿತ ಮಾಡಿದ್ದಾರೆ ಸಾಯಬೇಕೋ ಅಂತಾ ಕೇಳಿದ, ಸತ್ತು ಹೋಗಪ್ಪಾ ಅಂದೆ. ಅವನು ಸಾಯ್ತೀನಿ ಅಂದ್ರೆ ನಾನೇನು ಉತ್ತರ ಕೊಡಲಿ” ಎಂದು ಪ್ರಶ್ನಿಸಿದ್ದಾರೆ.

ಸಾಯಬೇಡವೆಂದು ಸಮಾಧಾನ ಹೇಳಿ ದೈರ್ಯ ತುಂಬುವುದು ಜನಪ್ರತಿನಿಧಿಯೊಬ್ಬರ ಕರ್ತವ್ಯ ಅಲ್ಲವೆ ಎಂದು ಮಾಧ್ಯಮದವರ ಮತ್ತೊಂದು ಪ್ರಶ್ನೆಗೆ ಕೂಡಾ ಅವರು, “ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ. ಏಪ್ರಿಲ್ ತಿಂಗಳಲ್ಲಿ ಬಂದಿದೆ, ಮೇ ತಿಂಗಳಲ್ಲಿ ನೋಡೋಣ ಅಂತ ಹೇಳಿದ್ದೇನೆ. ಆರೂವರೆ ಕೋಟಿ ಜನರಿಗೆ ಉತ್ತರ ಕೊಡುತ್ತಾ ಎಲ್ಲಿ ಹೋಗಲಿ. ಸತ್ತು ಹೋಗಲಾ ಎಂದರೆ ನಾನೇನು ಉತ್ತರಿಸಲಿ?” ಎಂದು ಮತ್ತೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...