Homeಮುಖಪುಟಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಡಿ.ಕೆ.ಸುರೇಶ್‌, ಅಶ್ವತ್ಥ್ ನಾರಾಯಣ್ ನಡುವಿನ ಜಗಳದ ವಿಡಿಯೊ ವೈರಲ್ ಆಗಿದೆ. ಇತ್ತ ಕಳೆದ 24 ದಿನಗಳಿಂದ ಮುಷ್ಕರ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಸಚಿವ ಅಶ್ವತ್ಥ್‌ ನಾರಾಯಣ್ ಅವರಿಗೆ ತಮ್ಮ ಬೇಡಿಕೆಗಳನ್ನು ಮತ್ತೆ ನೆನಪಿಸಿದ್ದಾರೆ.

- Advertisement -
- Advertisement -

“ಉನ್ನತ ಶಿಕ್ಷಣ ಸಚಿವರಾದ ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರೇ ನೀವು ನಿಮ್ಮ ಕೆಲಸವನ್ನು ತೋರಿಸಬೇಕಿದೆ” ಎಂದು ಹೇಳಿರುವ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಸಚಿವರಿಗೆ ನೆನಪಿಸಿದ್ದಾರೆ.

ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದ ವೇಳೆ ಉನ್ನತ ಸಚಿವ ಅಶ್ವತ್ಥ್‌ ನಾರಾಯಣ ಅವರು ಮಾತನಾಡುತ್ತಾ, ಸಂಸದ ಡಿ.ಕೆ.ಸುರೇಶ್‌ ಅವರನ್ನು ಗುರಿಯಾಗಿಸಿಕೊಂಡು ಏರುದನಿಯಲ್ಲಿ ಟೀಕಿಸಿದರು. ವೇದಿಕೆಯಲ್ಲಿ ಹಾಜರಿದ್ದ ಡಿ.ಕೆ.ಸುರೇಶ್ ಅವರು ಸಿಟ್ಟಿಗೆದ್ದು ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್‌ ಮತ್ತು ಅಶ್ವತ್ಥ್‌ ನಾರಾಯಣ್ ನಡುವಿನ ಜಗಳದ ವಿಡಿಯೊ ವೈರಲ್‌ ಆಗಿದ್ದು, ಅಶ್ವತ್ಥ್ ನಾರಾಯಣ ಅವರು ಆಡಿರುವ ಮಾತುಗಳನ್ನು ಉಲ್ಲೇಖಿಸಿ, ಅತಿಥಿ ಉಪನ್ಯಾಸಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಅಶ್ವತ್ಥ್‌ ನಾರಾಯಣ್ ಅವರು ಮಾಡಬೇಕಿರುವ ಸಾಕಷ್ಟು ಕೆಲಸಗಳಿವೆ. ಹೀಗಿರುವ ಇನ್ನೊಬ್ಬರ ಕುರಿತು ರೋಷವೇಶದಿಂದ ಕಮೆಂಟ್ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅತಿಥಿ ಉಪನ್ಯಾಸಕರು ಪ್ರತಿಕ್ರಿಯೆ ನೀಡಿದ್ದಾರೆ.

ಘಟನೆಯ ವಿಡಿಯೊ ವೈರಲ್ ಆದ ಬಳಿಕ ಅತಿಥಿ ಉಪನ್ಯಾಸಕರು ಅಶ್ವತ್ಥ್‌ ನಾರಾಯಣ್‌ ಅವರಿಗೆ ತಮ್ಮ ಜವಾಬ್ದಾರಿಗಳನ್ನು ನೆಪಿಸಿದ್ದಾರೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅತಿಥಿ ಉಪನ್ಯಾಸರು ಸಚಿವರ ನಿರ್ಲಕ್ಷ್ಯ ಮನೋಭಾವವನ್ನು ಪ್ರಶ್ನಿಸಿದ್ದಾರೆ.

“ಕಳೆದ ಡಿಸೆಂಬರ್‌ 10ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸುತ್ತಿದ್ದೇವೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕೆಂದು ಆಗ್ರಹಿಸಲಾಗುತ್ತಿದೆ. ನಮ್ಮ ಕಷ್ಟವನ್ನು ಸಚಿವರು ಕೇಳುತ್ತಲೇ ಇಲ್ಲ” ಎನ್ನುತ್ತಾರೆ ಸಾಲಿಗ್ರಾಮ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ದಿನೇಶ್.

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸಿದ್ದಾರೆ. ಬೆಳಗಾವಿ ಅಧಿವೇಶನ ನಡೆದಾಗ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ. ನಮ್ಮ ಕಷ್ಟವನ್ನು ಕೇಳುವ ತಾಳ್ಮೆ ಸಚಿವರಿಗಿಲ್ಲ ಎನ್ನುತ್ತಿದ್ದಾರೆ ಉಪನ್ಯಾಸಕರು.

“ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ” ಎನ್ನುತ್ತಾರೆ ದಿನೇಶ್.

ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಅತಿಥಿ ಉಪನ್ಯಾಸಕರ ಅಳಲು.

ಯಾವುದೇ ಪೂರ್ವ ಸಿದ್ಧತೆ ಇಲ್ಲದೆಯೇ ಎನ್‌ಇಪಿ ಜಾರಿಗೆ ಅಶ್ವತ್ಥ್‌ ನಾರಾಯಣ ಅವರು ಉತ್ಸಾಹ ತೋರಿದರು. ಈಗ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿದ್ದಾರೆ. ಎನ್‌ಇಪಿ ಪಠ್ಯಕ್ರಮದಂತೆ ಪಠ್ಯಪುಸ್ತಕವನ್ನು ರೂಪಿಸುವಲ್ಲಿ ಉನ್ನತ ಶಿಕ್ಷಣ ಇಲಾಖೆ ವಿಫಲವಾಗಿದೆ. ಇತ್ತ ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಕಾಲೇಜುಗಳಲ್ಲಿ ತರಗತಿ ನಡೆಯುತ್ತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ನಷ್ಟವಾಗುತ್ತಿದೆ ಎನ್ನುತ್ತಾರೆ ಉಪನ್ಯಾಸಕರು.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ. ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಹೊಸಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಕರಾದ ಡಾ.ಡಿ.ಡಿ.ಸಂದೀಪ್‌, “ಅತಿಥಿ ಉಪನ್ಯಾಸಕರು ಸೇವಾ ಭದ್ರತೆಗಾಗಿ 24 ದಿನಗಳ ಕಾಲ ನಿರಂತರ ಹೋರಾಟ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ. ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಮನೆಯನ್ನು ನಿರ್ವಿಹಿಸಲು ಆಗಿದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತಿಲ್ಲ. ಇಂತಹ ಅನೇಕ ಸಮಸ್ಯೆಗಳು ನಿಮ್ಮ ಇಲಾಖೆ ವ್ಯಾಪ್ತಿಯಲ್ಲಿ ಇರುವಾಗ ಬೇರೆಯವರನ್ನು (ಡಿ.ಕೆ.ಸುರೇಶ್) ಕೆಲಸ ಮಾಡಿಲ್ಲ ಎಂದು ಪ್ರಶ್ನೆ ಮಾಡುವುದಕ್ಕೆ ನೈತಿಕತೆ ಇದೇಯೇ? ನೀವು ಮೊದಲು ಕೆಲಸಮಾಡಿ ತೋರಿಸಿ. ಆಮೇಲೆ ಪ್ರಶ್ನೆ ಮಾಡುವುದರಲ್ಲಿ ಅರ್ಥ ಇರುತ್ತದೆ. ನಿಮ್ಮ ಕಾಲಾವಧಿಯಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಅಧೋಗತಿಗೆ ಸಾಗಿದೆ. ಸಮಸ್ಯೆ ಬಗೆಹರಿಸಿ ಅಥವಾ ಮಂತ್ರಿ ಸ್ಥಾನಕ್ಕೆ ತಕ್ಷಣವೇ ರಾಜಿನಾಮೆ ಕೊಡಿ” ಎಂದು ಒತ್ತಾಯಿಸಿದರು.

ಉತ್ತಮ ಆಡಳಿತದ ದಿನದಂದು ಅಳಲು

ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ್ ಅವರ ಫೇಸ್‌ಬುಕ್ ಖಾತೆಯ ಮೂಲಕ ಗುಡ್‌ ಗವರ್ನೆನ್ಸ್‌ ಡೇ (ಉತ್ತಮ ಆಡಳಿತ ದಿನ) ಕಾರ್ಯಕ್ರಮದ ಡಿಸೆಂಬರ್‌ 25ರಂದು ನೇರ ಪ್ರಸಾರವಾಗಿತ್ತು. ಆ ವೇಳೆ ಅತಿಥಿ ಉಪನ್ಯಾಸರು ಕಮೆಂಟ್ ಬಾಕ್ಸ್‌ನಲ್ಲಿ ಅಳಲು ತೋಡಿಕೊಂಡಿದ್ದರು.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಅತ್ಯುತ್ತಮ ಆಡಳಿತ ದಿನವನ್ನು ಉನ್ನತ ಶಿಕ್ಷಣ ಇಲಾಖೆ, ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಅಶ್ವತ್‌ ನಾರಾಯಣ್ ಅವರು ತಮ್ಮ ಎಫ್‌ಬಿ ಖಾತೆಯಲ್ಲಿ ಕಾರ್ಯಕ್ರಮವನ್ನು ಲೈವ್ ಮಾಡಿದ್ದರು.

‘ಉತ್ತಮ ಆಡಳಿತ ದಿನ’ ಆಚರಣೆಯನ್ನು ಅಣಕಿಸಿದಂತೆ ಭಾಸವಾಗುವ ರೀತಿ ಕಮೆಂಟ್‌ಗಳು ದಾಖಲಾಗಿದ್ದವು. ಸುಮಾರು ಎರಡು ಸಾವಿರಕ್ಕೂ ಹೆಚ್ಚು ಕಮೆಂಟ್‌ಗಳಾಗಿದ್ದವು. ಈ ಕುರಿತು ನಾನುಗೌರಿ.ಕಾಂ ವರದಿ ಮಾಡಿತ್ತು. (ವರದಿಯನ್ನು ಇಲ್ಲಿ ಓದಬಹುದು)


ಇದನ್ನೂ ಓದಿರಿ: ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...