Homeಮುಖಪುಟಸೇನೆಯನ್ನು ತೊರೆದ ‘Gay' ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸೇನೆಯನ್ನು ತೊರೆದ ‘Gay’ ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ರಕ್ಷಣಾ ಸಚಿವಾಲಯ ನಿಲುವು ತಾಳಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಸೇವೆಯನ್ನು ತೊರೆದ ಭಾರತೀಯ ಸೇನೆಯ ಮೇಜರ್‌ ಜೀವನ ಕುರಿತ ಚಿತ್ರಕಥೆಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೈನ್ಯದಲ್ಲಿ ತನ್ನ ಸ್ಥಾನವನ್ನು ತೊರೆಯಬೇಕಾದ ಸೈನಿಕನ ನೈಜ ಜೀವನದ ಹೋರಾಟ ಕಥನವನ್ನು ಚಿತ್ರನಿರ್ಮಾಪಕ ಓನಿರ್ ಅವರು ಮುಂದಿನ ಚಲನಚಿತ್ರವಾಗಿ ತರಲು ಇಚ್ಛಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತರಾಗಿದ್ದಕ್ಕೆ ಅವರು ಸೇನೆಯಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಈ ಚಲನಚಿತ್ರವು ಓನಿರ್‌ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ‘ಐ ಆಮ್‌’ನ ಮುಂದುವರಿದ ಭಾಗವಾಗಿರಬಹುದು. ‘ಐ ಆಮ್‌’ ಸಿನಿಮಾವು ಏಕ ತಾಯ್ತನ, ಸಲಿಂಗಕಾಮ ಮತ್ತು ಇತರ ಸಾಮಾಜಿಕ ಸಮಸ್ಯೆಗಳಂತಹ ವಿಷಯಗಳ ಕುರಿತು ಬೆಳಕು ಚೆಲ್ಲುತ್ತದೆ.

ಈ ವಿಷಯದ ಕುರಿತು TOI ವರದಿಗಾರ ಮಾಡಿರುವ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ ಓನೀರ್, “ಭಾರತೀಯ ಸೇನೆಯಲ್ಲಿ ಸಲಿಂಗಕಾಮವು ಇನ್ನೂ ಕಾನೂನುಬಾಹಿರವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಮಾಜ ನಮ್ಮನ್ನು ಸಮಾನವಾಗಿ ಪರಿಗಣಿಸಲು ಬಹಳ ದೂರದಲ್ಲಿದ್ದೇವೆ” ಎಂದು ಮೈ ಬ್ರದರ್ ನಿರ್ದೇಶಕ ನಿಖಿಲ್ ಬರೆದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ನನ್ನ ಸೇನೆಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಪ್ರೀತಿ ಇದೆ. ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯಾರನ್ನೂ ಲೈಂಗಿಕತೆಯ ಕಾರಣದಿಂದ ಸೇನೆ ತಾರತಮ್ಯ ಮಾಡಬಾರದು ಎಂದು ನಾನು ಬಯಸುತ್ತೇನೆ” ಎಂದು ಓನಿರ್ ತಿಳಿಸಿದ್ದಾರೆ.

ಜನವರಿ 19ರಂದು ಸೇನೆಯ ಕಾರ್ಯತಂತ್ರದ ಸಂವಹನ ವಿಭಾಗದ ಹೆಚ್ಚುವರಿ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಕರ್ನಲ್ ಸಚಿನ್ ಉಜ್ವಾಲ್ ಅವರಿಂದ ಒನಿರ್ ಇಮೇಲ್ ಸ್ವೀಕರಿಸಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಹೇಳುತ್ತದೆ.

“ಡಿಸೆಂಬರ್ 16, 2021ರಂದು ಇಮೇಲ್ ಮೂಲಕ ಸ್ವೀಕರಿಸಿದ ಸ್ಕ್ರಿಪ್ಟ್‌ನ ವಿಷಯವನ್ನು ವಿಶ್ಲೇಷಿಸಲಾಗಿದೆ” ಎಂದು ಉಜ್ವಾಲ್‌ ಹೇಳಿದ್ದಾರೆ. “ಸ್ಕ್ರಿಪ್ಟ್ ಅನ್ನು ಆರ್ಮಿಯಿಂದ ತೆರವುಗೊಳಿಸಲಾಗಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜುಲೈ 2020ರಲ್ಲಿ, ರಕ್ಷಣಾ ಸಚಿವಾಲಯವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ಗೆ ಪತ್ರ ಬರೆದಿರುವುದಾಗಿ ವರದಿಯಾಗಿತ್ತು. ಸೇನೆಯ ಮೇಲೆ ಯಾವುದೇ ಚಲನಚಿತ್ರ, ಸಾಕ್ಷ್ಯಚಿತ್ರ ಅಥವಾ ವೆಬ್ ಸರಣಿಯನ್ನು ಪ್ರಸಾರ ಮಾಡುವ ಮೊದಲು ರಕ್ಷಣಾ ಸಚಿವಾಲಯದಿಂದ “ನಿರಾಕ್ಷೇಪಣೆ ಪ್ರಮಾಣಪತ್ರ” ಪಡೆಯಲು ಪ್ರೊಡಕ್ಷನ್ ಹೌಸ್‌ಗಳಿಗೆ ಸಲಹೆ ನೀಡಬೇಕೆಂದು ಪತ್ರ ಸೂಚಿಸಿತ್ತು.

ರಕ್ಷಣಾ ಪಡೆಗಳ ಚಿತ್ರಣವನ್ನು ವಿರೂಪಗೊಳಿಸುವ ಮತ್ತು ರಕ್ಷಣಾ ಸಿಬ್ಬಂದಿ, ಅನುಭವಿಗಳ ಭಾವನೆಗಳನ್ನು ಘಾಸಿಗೊಳಿಸುವ ಘಟನೆಗಳನ್ನು ಮೊಟಕುಗೊಳಿಸುವ ಉದ್ದೇಶ ಈ ಸೂಚನೆಯ ಹಿಂದಿದೆ ಎನ್ನಲಾಗಿತ್ತು.

ಭಾರತೀಯ ಸೇನಾ ಸಿಬ್ಬಂದಿ ಮತ್ತು ಸೇನಾ ಸಮವಸ್ತ್ರವನ್ನು “ಅವಮಾನಕರ ರೀತಿಯಲ್ಲಿ” ಚಿತ್ರಿಸಿರುವ ಬಗ್ಗೆ ತೀವ್ರ ಆಕ್ಷೇಪಣೆಗಳನ್ನು ಎತ್ತುವ ಕೆಲವು ದೂರುಗಳನ್ನು ರಕ್ಷಣಾ ಸಚಿವಾಲಯ ಸ್ವೀಕರಿಸಿತ್ತು.

ಹಿಂದೆ ಪ್ರಸಾರವಾದ ವೆಬ್ ಸರಣಿಗಳಲ್ಲಿ ಸೇನೆಗೆ ಸಂಬಂಧಿಸಿದ ದೃಶ್ಯಗಳು ವಾಸ್ತವದಿಂದ ದೂರವಾಗಿದ್ದು ಸಶಸ್ತ್ರ ಪಡೆಗಳ ಕುರಿತು ವಿಕೃತ ಚಿತ್ರಣವನ್ನು ಪ್ರಸ್ತುತಪಡಿಸಲಾಗಿದೆ ಎಂದು  ಮೂಲಗಳು ವರದಿ ಮಾಡಿದ್ದವು.

ಹೀಗಾಗಿ “ಆಕ್ಷೇಪಣೆಯಿಲ್ಲದ ಪ್ರಮಾಣಪತ್ರ” ಪಡೆಯಲು ಓನೀರ್ ಅವರು ಚಲನಚಿತ್ರ ಸ್ಕ್ರಿಪ್ಟ್ ಅನ್ನು ಸೇನೆಗೆ ಸಲ್ಲಿಸಿದ್ದರು. ಸೇನೆಯು ಚಲನಚಿತ್ರ ಚಿತ್ರಕತೆಯನ್ನು ರದ್ದುಗೊಳಿಸಿದ ವರದಿಗೆ ಹಲವು ಜನರು ಪ್ರತಿಕ್ರಿಯೆಗಳನ್ನು ಟ್ವಿಟ್ಟರ್‌ನಲ್ಲಿ ನೀಡಿದ್ದಾರೆ. ಸೇನೆಯ ನಿಲುವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿರಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...