Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣವನ್ನು ಎನ್‌ಐಎ ವಹಿಸಿದ ಗೃಹ ಸಚಿವಾಲಯದ ನಡೆಗೆ ವ್ಯಾಪಕ ವಿರೋಧ...

ಭೀಮಾ ಕೋರೆಗಾಂವ್ ಪ್ರಕರಣವನ್ನು ಎನ್‌ಐಎ ವಹಿಸಿದ ಗೃಹ ಸಚಿವಾಲಯದ ನಡೆಗೆ ವ್ಯಾಪಕ ವಿರೋಧ…

ಈ ಪ್ರಕರಣವನ್ನು ರಾಜ್ಯದ ಅನುಮತಿಯಿಲ್ಲದೆ ವರ್ಗಾಯಿಸಲಾಗಿದೆ, ಇದು ಅಸಂವಿಧಾನಿಕ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದ್ದಾರೆ.

- Advertisement -
- Advertisement -

2018ರ ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯನ್ನು ಗೃಹ ಸಚಿವಾಲಯವು ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿದೆ. ಅದರ ಬೆನ್ನಲ್ಲೇ ವ್ಯಾಪಕ ವಿರೋಧ ಕೇಳಿಬಂದಿದೆ.

ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಪುಣೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಒಂದು ದಿನದಲ್ಲಿಯೇ ಕೇಂದ್ರ ಸರ್ಕಾರವು ತನಿಖೆಯನ್ನು ಎನ್‌ಐಎಗೆ ವಹಿಸಿರುವುದರಿಮದ ಮತ್ತೊಮ್ಮೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ನಿರಪರಾಧಿಗಳ ಮೇಲೆ ಉದ್ದೇಶಪೂರ್ವಕವಾಗಿ ಹಾಕಲಾಗಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಬುದ್ಧಿಜೀವಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ತಯಾರಿ ನಡೆಸುತ್ತಿದ್ದರೆ, ಅದನ್ನು ತಡೆಯಲೇಂದೆ ಕೇಂದ್ರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಈ ಕುರಿತು ಮಹಾರಾಷ್ಟ್ರ ಗೃಹಸಚಿವ ಅನಿಲ್‌ ದೇಶ್‌ಮುಖ್‌ ಕೇಂದ್ರದ ವಿರುದ್ಧ ಕಿಡಿಕಾರಿದ್ದು “ಈ ಪ್ರಕರಣವನ್ನು ರಾಜ್ಯದ ಅನುಮತಿಯಿಲ್ಲದೆ ವರ್ಗಾಯಿಸಲಾಗಿದೆ, ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಮತ್ತು ನಾನು ಅದನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವಾದ್, “ಕಾನೂನು ಸುವ್ಯವಸ್ಥೆ ರಾಜ್ಯ ವಿಷಯವಾಗಿದೆ ಎಂದು ಕೇಂದ್ರಕ್ಕೆ ನೆನಪಿಸಲು ಬಯಸುತ್ತೇನೆ. ಕೇಂದ್ರದ ನೇರ ಕ್ರಮವು ಸಂವಿಧಾನವನ್ನು ಅವಮಾನಿಸುವಂತಿದೆ. ಸಂವಿಧಾನವು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧವನ್ನು ಸ್ಪಷ್ಟವಾಗಿ ಹೇಳುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದು, ರಕ್ಷಣೆ ಮಾತ್ರ ಕೇಂದ್ರಕ್ಕೆ ಸಂಬಂಧಿಸಿದೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸವಾರಿ ಮಾಡಿದರೆ ಸಂವಿಧಾನಕ್ಕೆ ವಿರುದ್ಧವಿದ್ದೀರಿ ಎಂದರ್ಥ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೋದಿ-ಶಾರ ದ್ವೇಷದ ಕಾರ್ಯಸೂಚಿಯನ್ನು ವಿರೋಧಿಸುವವರನ್ನು “ಅರ್ಬನ್ ನಕ್ಸಲ್” ಎಂದು ಹಣೆಪಟ್ಟೆ ಕಟ್ಟಲಾಗುತ್ತದೆ. ಭೀಮಾ-ಕೋರೆಗಾಂವ್ ಪ್ರತಿರೋಧದ ಸಂಕೇತವಾಗಿದ್ದು, ಅದನ್ನು ಸರ್ಕಾರದ ಎನ್‌ಐಎ ತನಿಖೆ ಎಂದಿಗೂ ಅಳಿಸಲಾಗುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ್ದಾರೆ. “ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸಿ ನಗರ ನಕ್ಸಲರನ್ನು ಕೃತ್ಯವನ್ನು ಬಹಿರಂಗಪಡಿಸಿದೆ. ಸುಪ್ರೀಂ ಕೋರ್ಟ್ ಕೂಡ ಮಹಾರಾಷ್ಟ್ರ ಪೊಲೀಸರ ಪರವಾಗಿ ತೀರ್ಪು ನೀಡಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಕೇಸುಗಳನ್ನು ಹಿಂಪಡೆಯಲು ಯೋಜಿಸಿದೆ ಎಂದು ದೂರಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...