Homeಮುಖಪುಟಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

- Advertisement -
- Advertisement -

ಕೇರಳ ಸಚಿವಾಲಯದ ಬಳಿ ಕಳೆದ ವರ್ಷ ಡಿಸೆಂಬರ್ 21ರಂದು ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಮಮ್‌ಕೂಟತಿಲ್ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಮಕೂಟತಿಲ್ ಅವರ ಬಂಧನ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಮಮಕೂಟತಿಲ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ ನಂತರ, ಜನವರಿ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತಿರುವನಂತಪುರಂನ ಕಂಟೋನ್ಮೆಂಟ್ ಪೊಲೀಸರು ಅಡೂರಿನಲ್ಲಿರುವ ರಾಹುಲ್ ಮನೆಯಿಂದ ಅವರನ್ನು ಮಂಗಳವಾರದಂದು ವಶಕ್ಕೆ ಪಡೆದರು. ‘ನನ್ನ ತಾಯಿಯ ಮುಂದೆ ನನ್ನನ್ನು ಬಂಧಿಸಲು ಸಿಎಂ ಪಿಣರಾಯಿ ವಿಜಯನ್ ನಿರ್ಧಾರ ಮಾಡಿದ್ದಾರೆ. ಆದರೆ, ನಾನು ನನ್ನ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ’ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರು ಪೊಲೀಸ್ ವಾಹನದಲ್ಲಿ ಕುಳಿತು ಮಾಧ್ಯಮಗಳಿಗೆ ಹೇಳಿದರು.

ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಯ ನಂತರ ಕಳೆದ ವರ್ಷ ನವೆಂಬರ್‌ನಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಮಮಕೂಟತಿಲ್ ಅವರು ಡಿಸೆಂಬರ್‌ನಲ್ಲಿ ಪಕ್ಷವು ಆಯೋಜಿಸಿದ್ದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿ ಪ್ರತಿಪಕ್ಷದ ನಾಯಕ ವಿ.ಡಿ.ಸತೀಶ, ಎರಡು ಮತ್ತು ಮೂರನೇ ಆರೋಪಿ ಶಾಸಕರಾದ ಶಫಿ ಪರಂಬಿಲ್ ಮತ್ತು ಎಂ.ವಿನ್ಸೆಂಟ್.

ಕಾನೂನುಬಾಹಿರ ಸಭೆ, ಗಲಭೆ, ಅಕ್ರಮವಾಗಿ ಸಾರಿಗೆ ತಡೆಹಿಡಿಯುವುದು, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವುದು, ಸ್ವಯಂಪ್ರೇರಿತವಾಗಿ ಹಾನಿ ಮಾಡುವುದು ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಸೇರಿದಂತೆ ಹಲವು ಅಪರಾಧಗಳ ಅಡಿ ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅನಾಮಧೇಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್ ಬಂಧನ ವಿರೋಧಿಸಿ ಪ್ರತಿಭಟಿಸಿದ ಕೇರಳ ಕಾಂಗ್ರೆಸ್ ಕಾರ್ಯಕರ್ತರು

ರಾಹುಲ್ ಬಂಧನ ವಿರೋಧಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಲ್ಲಿ ರಸ್ತೆ ಹಾಗೂ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಅಲ್ಲದೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರತಿಕೃತಿ ದಹಿಸಿದರು. ಮಾಮ್ಕೂಟತಿಲ್ ಬಂಧನದ ಸಮಯದಲ್ಲಿ ಅವರ ತಾಯಿ ಮನೆಯಲ್ಲಿದ್ದರು. ಅನೇಕ ಪೊಲೀಸರು ಮನೆಗೆ ಬಂದಿದ್ದರೂ ಏನಾಗುತ್ತಿದೆ ಎಂದು ತಿಳಿದಿರಲಿಲ್ಲ. ಮನೆಯಿಂದಲೇ ರಾಹುಲ್‌ನನ್ನು ಬಂಧಿಸುವಂತೆ ಮೇಲಾಧಿಕಾರಿಗಳಿಂದ ನಿರ್ದೇಶನವಿದೆ ಎಂದು ಅವರ ತಾಯಿ ಆರೋಪಿಸಿದ್ದಾರೆ.

ರಾಹುಲ್ ಹಠಾತ್ ಬಂಧನಕ್ಕಾಗಿ ಸತೀಶನ್ ಪೊಲೀಸರನ್ನು ಟೀಕಿಸಿದ್ದಾರೆ. ‘ಆತ ಅಪರಾಧಿ ಅಥವಾ ಭಯೋತ್ಪಾದಕನಲ್ಲ. ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಂದ ಆರೋಪಿಗೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡಿದ ಅದೇ ಸರ್ಕಾರ ಮತ್ತು ಪೊಲೀಸರು, ರಾಹುಲ್‌ನನ್ನು ಆತನ ಮನೆಯಿಂದ ಮುಂಜಾನೆ ಬಂಧಿಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕರನ್ ಎಲ್‌ಡಿಎಫ್ ಸರ್ಕಾರ ಮತ್ತು ಪೊಲೀಸರಿಗೆ ಪ್ರತೀಕಾರದ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಿಪಿಐ (ಎಂ) ಮತ್ತು ಪೊಲೀಸರ ಸಂಚಿನಿಂದ ರಾಹುಲ್ ಅವರನ್ನು ಬಂಧಿಸಲಾಗಿದೆ. ಒಂದು ವೇಳೆ ನೋಟಿಸ್ ನೀಡಿದ್ದರೆ ತಾನಾಗಿಯೇ ಪೊಲೀಸರ ಮುಂದೆ ಹಾಜರಾಗುತ್ತಿದ್ದ. ಬದಲಾಗಿ, ಅಪರಾಧಿಗಳಂತೆ, ಅವರನ್ನು ಮುಂಜಾನೆ ಅವರ ಮನೆಯಿಂದ ಬಂಧಿಸಲಾಗಿದೆ’ ಎಂದು ಕಿಡಿಕಾರಿದರು.

ಬಂಧನವನ್ನು ಸಮರ್ಥಿಸಿಕೊಂಡ ಎಲ್‌ಡಿಎಫ್ ಸಂಚಾಲಕ ಇಪಿ ಜಯರಾಜನ್, ‘ಯುವ ಕಾಂಗ್ರೆಸ್ ಮುಖ್ಯಸ್ಥರಾಗಿರುವ ಅವರಿಗೆ ವಿಶೇಷ ರಕ್ಷಣೆ ಇದೆಯೇ? ಕಾನೂನು ಮತ್ತು ನಿಯಮಗಳು ಅವರಿಗೆ ಅನ್ವಯಿಸುವುದಿಲ್ಲವೇ? ಆತ ಹೋಗಿ ದೊಣ್ಣೆ, ಕಲ್ಲುಗಳಿಂದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದರೆ ಕ್ರಮ ಎದುರಿಸುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮೋದಿ ಜನಪ್ರಿಯತೆಯನ್ನು ರಾಹುಲ್‌ಗೆ ಹೋಲಿಸಿದ ಕಾರ್ತಿ: ನೋಟಿಸ್ ಕೊಟ್ಟ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...