Homeಮುಖಪುಟಮಹಾರಾಷ್ಟ್ರ: 300 ರೂ.ಗಾಗಿ ಅಪ್ರಾಪ್ತ ಬಾಲಕನ ವಿವಸ್ತ್ರಗೊಳಿಸಿ ಥಳಿತ!

ಮಹಾರಾಷ್ಟ್ರ: 300 ರೂ.ಗಾಗಿ ಅಪ್ರಾಪ್ತ ಬಾಲಕನ ವಿವಸ್ತ್ರಗೊಳಿಸಿ ಥಳಿತ!

- Advertisement -
- Advertisement -

ಸಾಲವಾಗಿ ಪಡೆದುಕೊಂಡಿದ್ದ 300 ರೂಪಾಯಿ ಹಣವನ್ನು ವಾಪಸ್‌ ಕೊಡದಿದ್ದಕ್ಕೆ 17 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆಯ ಕಲ್ವಾ ಪ್ರದೇಶದಲ್ಲಿ ನಡೆದಿದೆ.

ಬಾಲಕನ ಮೇಲೆ ನಡೆದ ದೌರ್ಜನ್ಯದ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಕಲ್ವಾ ಪ್ರದೇಶದ ನಿವಾಸಿಗಳಾದ ತೌಸೀಫ್ ಖಾನ್‌ಬಂದೇ ಮತ್ತು ಶಾಮಿಲ್ ಖಾನ್‌ಬಂದೇ ಆರೋಪಿಗಳು ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕ ಮತ್ತು ಆರೋಪಿಗಳು ಒಂದೇ ಊರಿನವರು ಎಂದು ತಿಳಿದು ಬಂದಿದೆ.

ಸಂತ್ರಸ್ತ ಬಾಲಕ ಕಳೆದ ವರ್ಷ ಆರೋಪಿಗಳಿಂದ 300 ರೂಪಾಯಿ ಸಾಲ ಪಡೆದಿದ್ದ. ಅದನ್ನು ಹಿಂದಿರುಗಿಸುವಂತೆ ಆರೋಪಿಗಳು ಒತ್ತಾಯಿಸುತ್ತಿದ್ದರು. ಬಾಲಕ ಶೀಘ್ರದಲ್ಲೇ ಕೊಡುವುದಾಗಿ ಹೇಳುತ್ತಿದ್ದ. ಇದರಿಂದ ಕೋಪಗೊಂಡ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ತೌಸೀಫ್ ಬಾಲಕನ ಬ್ಲೂಟೂತ್‌ ತೆಗೆದಿಟ್ಟುಕೊಂಡಿದ್ದ. ಹಣ ವಾಪಸ್‌ ಕೊಡದೆ ಹಿಂದಿರುಗಿಸಲ್ಲ ಎಂದಿದ್ದ. ತೌಸೀಫ್ ಮನೆಯಲ್ಲಿ ಇಲ್ಲದ ವೇಳೆ ಆತನ ತಾಯಿಯಿಂದ ಬಾಲಕ ಬ್ಲೂಟೂತ್ ವಾಪಸ್ ಪಡೆದುಕೊಂಡು ಬಂದಿದ್ದ. ಇದರಿಂದ ಹೆಚ್ಚು ಕುಪಿತಗೊಂಡ ಆರೋಪಿಗಳು ಬಾಲಕನನ್ನು ವಿವಸ್ತ್ರಗೊಳಿಸಿ ತಳಿಸಿದ್ದಾರೆ. ಈ ಸಂಬಂಧ ಕಲ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ : ಗುಜರಾತ್: ಪಾದರಕ್ಷೆ ಬಾಯಿಯಲ್ಲಿ ಹಿಡಿದುಕೊಳ್ಳುವಂತೆ ದಲಿತ ವ್ಯಕ್ತಿಗೆ ಒತ್ತಾಯ; ಉದ್ಯಮಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...