Homeಮುಖಪುಟಉತ್ತರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ದಲಿತ ಬಾಲಕಿಯ ಮೇಲೆ ಮೂರು ಮಂದಿಯ ತಂಡ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದ್ದು, ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯ ಪ್ರಶ್ನೆ ಮತ್ತೆ ಮೂಡಿದೆ.

ಜಲಾಲಾಬಾದ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ 16 ವರ್ಷದ ಬಾಲಕಿಯನ್ನು ಮೂವರು ದುಷ್ಕರ್ಮಿಗಳು ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್‌ ಬಾಜಪೇಯಿ ಈ ಕುರಿತು ಮಾಹಿತಿಯನ್ನು ನೀಡಿದ್ದು, ಜಲಾಲಾಬಾದ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಮನೆ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ 16 ವರ್ಷದ ಬಾಲಕಿಯನ್ನು ಬಲವಂತವಾಗಿ ಇನ್ನೊಂದು ಗದ್ದೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲಾಗಿದೆ. ವೀರ್‌ಭನ್‌, ಪ್ರಮೋದ್‌ ಹಾಗೂ ಸೋನೆ ಎಂಬವರು ಕೃತ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ.

ಬಾಲಕಿಯ ಕೂಗು ಕೇಳಿಸಿ ಸ್ಥಳಕ್ಕೆ ಸ್ಥಳೀಯರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು  ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನು ಓದಿ: 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...