Homeಮುಖಪುಟರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಹೇಳಿಕೆ ಬದಲಿಸಿದ ಸಂತ್ರಸ್ತೆ ತಂದೆ

ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಹೇಳಿಕೆ ಬದಲಿಸಿದ ಸಂತ್ರಸ್ತೆ ತಂದೆ

- Advertisement -
- Advertisement -

ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದ್ದು, ಘಟನೆ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ದೂರು ನೀಡಿದ ಒಂದು ದಿನದ ನಂತರ ಸಂತ್ರಸ್ತ ಬಾಲಕಿಯ ತಂದೆ ಹೇಳಿಕೆ ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಮಹಿಳಾ ಠಾಣೆಯಲ್ಲಿ ಭಾನುವಾರ ಸಲ್ಲಿಸಿದ ದೂರಿನ ಪ್ರಕಾರ, ಮೂವರು ವ್ಯಕ್ತಿಗಳು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ನೀಡಿದ್ದ ದೂರಿನ ನಂತರ ಆರೋಪಿಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

“ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿ ಸೋಮವಾರ ಪ್ರಕರಣದ ಬಗ್ಗೆ ತಂದೆಯ ಹೇಳಿಕೆಯನ್ನು ದಾಖಲಿಸಲು ಹೋಗಿದ್ದಾರೆ. ಆದರೆ, ಆಕೆಯ ತಂದೆ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ನಿರಾಕರಿಸಿದ್ದರೆ” ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮೃದುಲ್ ಕಚಾವಾ ಹೇಳಿದ್ದಾರೆ.

ದೂರು ದಾಖಲಿಸಿದ್ದ ಸಂತ್ರಸ್ತೆ ಸಹ ಅತ್ಯಾಚಾರ ಪ್ರಕರಣವನ್ನು ಹಿಂತೆಗೆದುಕೊಂಡಿದ್ದಾರೆ. ಜೊತೆಗೆ ತನ್ನ ಸಹೋದರಿಯೊಂದಿಗಿನ ಜಗಳದ ನಂತರ ತಾನು ಬಾವಿಗೆ ಹಾರಿದ್ದಾಗಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೂ ತನಿಖೆ ಮುಂದುವರೆಸುತ್ತಿದ್ದು, ಹೆಚ್ಚಿನ ತನಿಖೆಗಾಗಿ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...