Homeಮುಖಪುಟ'ಬಾಲಕಿ ಆಘಾತಗೊಂಡಿಲ್ಲ' ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

"ದೌರ್ಜನ್ಯ ನಡೆದಿದ್ದರೆ ಬಾಲಕಿ ಭಯಭೀತಳಾಗಬೇಕಿತ್ತು, ಸಹಜವಾಗಿ ವರ್ತಿಸುತ್ತಿರಲಿಲ್ಲ" ಎಂದ ನ್ಯಾಯಾಲಯ

- Advertisement -
- Advertisement -

“ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆಕೆ ಭಯಭೀತಳಾಗಬೇಕಿತ್ತು. ಸಹಜವಾಗಿ ವರ್ತಿಸುತ್ತಿರಲಿಲ್ಲ ಮತ್ತು ಆಟವಾಡುತ್ತಿರಲಿಲ್ಲ” ಎಂದಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಗೋವಿಂದ್ ಸನಪ್ ಅವರ ಏಕ ಸದಸ್ಯ ಪೀಠ ಬಾಲಕಿಯ ತಾಯಿಯ ಆರೋಪವನ್ನು ಗಮನಿಸಿದೆ. ಆಕೆ (ತಾಯಿ) ಹೇಳಿದಂತೆ ಸಮಾಜ ಮಂದಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆ (ತಾಯಿ) ಘಟನಾ ಸ್ಥಳಕ್ಕೆ ಹೋದಾಗ ಬಾಲಕಿ ಆಟವಾಡುತ್ತಿದ್ದಳು.

“ತಾನು ಘಟನಾ ಸ್ಥಳಕ್ಕೆ ಹೋದಾಗ ಸಂತ್ರಸ್ಥೆ ಆಟವಾಡುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಒಂದು ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ವಿಷಯವಾಗಿದೆ. ಅಂತಹ ಕೃತ್ಯ ನಿಸ್ಸಂಶಯವಾಗಿ ಆಕೆಯನ್ನು ಭಯಭೀತಗೊಳಿಸಬೇಕಿತ್ತು. ಅಲ್ಲದೆ, ಭಾರೀ ನೋವು, ಸಂಕಟ ಮತ್ತು ಆಘಾತ ಉಂಟುಮಾಡಬೇಕಿತ್ತು” ಎಂದು ಆಗಸ್ಟ್ 14 ರಂದು ನೀಡಿದ ಆದೇಶದಲ್ಲಿ ನ್ಯಾಯಾಧೀಶರು ಹೇಳಿದ್ದಾರೆ. ಈ ಆದೇಶ ಪ್ರತಿ ಕಳೆದ ಗುರುವಾರ ಲಭ್ಯವಾಗಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಸಾಮಾನ್ಯವಾಗಿ, ಇಂತಹ ಕೃತ್ಯದ (ಲೈಂಗಿಕ ದೌರ್ಜನ್ಯ) ನಂತರ ಸಂತ್ರಸ್ತೆ ಘಟನಾ ಸ್ಥಳದಿಂದ ಮನೆಗೆ ಓಡಿ ಹೋಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸುತ್ತಾಳೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

2019ರ ಮಾರ್ಚ್‍ನಲ್ಲಿ ನಡೆದ ಪ್ರಕರಣದಲ್ಲಿ ಎಂಟು ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅಮರಾವತಿ ಜಿಲ್ಲೆಯ ಅಚಲಪುರ ನಿವಾಸಿ ವಿಜಯ್ ಜವಾಂಜಲ್ ಮೇಲಿತ್ತು. ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ಎಬಿ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ, ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, 3ನೇ ತರಗತಿ ವಿದ್ಯಾರ್ಥಿನಿ ಮನೆ ಪಕ್ಕದ ಸಮುದಾಯದ ಮಂದಿರದ ಬಳಿಗೆ ಆಟವಾಡಲು ಹೋಗಿದ್ದಳು. ದೂರು ನೀಡಿದ ತಾಯಿಗೆ ಮಗಳು ಪತ್ತೆಯಾಗಿರಲಿಲ್ಲ. ಸ್ವಲ್ಪಹೊತ್ತಿನ ಬಳಿಕ, ಬಾಲಕಿ ಅದೇ ಆವರಣದಲ್ಲಿ ಆಟವಾಡುವುದು ಕಂಡುಬಂದಿತ್ತು. ತಾಯಿ ಆಕೆಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಶಾಲೆಯಿಂದ ಮರಳಿದ ಬಳಿಕ ಬಾಲಕಿ ಮಂಕು ಕವಿದಂತಿದ್ದಳು ಹಾಗೂ ಸಹಜವಾಗಿರಲಿಲ್ಲ. ಆರೋಪಿ ಸಿಹಿತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಗುಪ್ತಾಂಗವನ್ನು ಸ್ಪರ್ಶಿಸಿದ ಹಾಗೂ ಆಗ ಅತೀವ ನೋವು ಆಗಿತ್ತು ಎಂದು ಬಾಲಕಿ ತಾಯಿಗೆ ಹೇಳಿದ್ದಳು. ತಾಯಿ ಅಸೇಗಾಂವ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

“ಆರೋಪಿ ನನ್ನ ಮಗಳು ಆಟವಾಡುತ್ತಿದ್ದಾಗ ಪಕ್ಕದಲ್ಲೇ ಕುಳಿತಿದ್ದ” ಎಂದು ತಾಯಿ ಸಾಕ್ಷ್ಯ ನುಡಿದಿದ್ದರು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ ಮಗುವಿಗೆ ಯಾವುದೇ ಬಗೆಯ ಕಿರುಕುಳ ನೀಡಿಲ್ಲ ಎನ್ನುವ ನಿರ್ಧಾರಕ್ಕೆ ಕೋರ್ಟ್ ಬಂದಿದೆ. ಏಕೆಂದರೆ, ಆರೋಪಿಯ ಹೆಸರನ್ನು ಹೇಳುವಂತೆ ತಾಯಿ ತನಗೆ ಕಿರುಕುಳ ನೀಡಿದ್ದಾಗಿ ಬಾಲಕಿ ಸಾಕ್ಷ್ಯ ನುಡಿದಿರುವುದೇ ತಾಯಿಯ ಸಾಕ್ಷ್ಯವನ್ನು ನಾಶಪಡಿಸಿದಂತಾಗಿದೆ” ಎಂದು ನ್ಯಾಯಮೂರ್ತಿ ಸನಪ್ ಹೇಳಿದ್ದಾರೆ.

ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿದ್ದಕ್ಕಾಗಿ ಬಾಲಕಿಯ ತಂದೆಗೆ ಕಪಾಳಮೋಕ್ಷ ಮಾಡಿದ್ದೆ. ಆ ಕಾರಣಕ್ಕೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಮೇಲ್ಮನವಿದಾರ ಅಥವಾ ಆರೋಪಿಯ ಪ್ರತಿವಾದವನ್ನು ಪೀಠವು ಪರಿಗಣಿಸಿದೆ. ವಿಚಾರಣಾ ನ್ಯಾಯಾಲಯವು ಪ್ರಮುಖ ಸಂಗತಿಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೃಪೆ : ಲೈವ್ ಲಾ

ಇದನ್ನೂ ಓದಿ : ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...