Homeಕರ್ನಾಟಕಅಪ್ರಾಪ್ತ ಬಾಲಕಿಯ ಅತ್ಯಾಚಾರ: ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರು ಸೇರಿ 42 ಜನರ ಬಂಧನ

ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರು ಸೇರಿ 42 ಜನರ ಬಂಧನ

- Advertisement -
- Advertisement -

ಹಾವೇರಿ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಸಹಿತ 42 ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೂ ಹಲವರ ಬಂಧನ ನಡೆಯಲಿದೆ ಎನ್ನಲಾಗಿದ್ದು, ಪೊಲೀಸರು ಬರೋಬ್ಬರಿ 30 ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷದ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಕ್ರಷರ್‌ ಕೆಲಸಕ್ಕೆಂದು ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದನು. ನಂತರ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದರು.

ನಂತರ ಬಾಲಕಿಯ ಮೇಲೆ ನಿರಂತರವಾಗಿ 1 ವರ್ಷದಿಂದ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗಿತ್ತು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

ಈ ಬಗ್ಗೆ ಜನವರಿ 30 ರಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸಂತೋಷ್‌ ಎಂಬವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅವರು ಚಿಕ್ಕಮಗಳೂರಿನ ಶೃಂಗೇರಿ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿ ಎಂದು ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು.

ಪೊಲೀಸರು ಐದು ತಿಂಗಳಲ್ಲಿ ಹಲವು ಬಾರಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಆರೋಪಿಗಳಿದ್ದಾರೆ ಎನ್ನಲಾಗಿದ್ದು, ಅವರ ಬಂಧನಕ್ಕೆ ಪೊಲೀಸರು ತಯಾರಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ದಾರಿ ತಪ್ಪುತ್ತಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕವು ಈ ಹಿಂದೆ ಪ್ರತಿಭಟನೆ ಕೂಡಾ ಮಾಡಿತ್ತು. ಪ್ರಕರಣದಲ್ಲಿ ಮನಸೋ ಇಚ್ಚೆ ವರ್ತಿಸಿದರು ಎಂಬ ಕಾರಣಕ್ಕೆ ಸಬ್‍ಇನ್ಸ್‍ಪೆಕ್ಟರ್ ವರ್ಗಾವಣೆ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿತ್ತು. ಪ್ರಸ್ತುತ ತನಿಖೆಯನ್ನು ಎಎಸ್ಪಿ ಶೃತಿ ಅವರಿಗೆ ವಹಿಸಲಾಗಿದೆ.

ಇದನ್ನೂ ಓದಿ: ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು; ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ವಿಡಿಯೊ ನೋಡಿ: ಮಹಿಳೆಯರು ಆಟೋ ಓಡಿಸಬಾರದೇ?: ಚಿಕ್ಕ ವಯಸ್ಸಿನಲ್ಲಿಯೇ ಆಟೋ ಓಡಿಸಿ ಸಂಸಾರ ನಿಭಾಯಿಸುತ್ತಿರುವ ಅಮ್ಮುವಿನ ಕಥೆ
ಕಳೆದ ನಾಲ್ಕೈದು ವರ್ಷಗಳಿಂದ ಅಮ್ಮು ಆಟೋ ಓಡಿಸು ಸಂಸಾರ ಸಾಗಿಸುತ್ತಿದ್ದಾರೆ. ಹೋಟೆಲ್‌, ಆಸ್ಪತ್ರೆ, ಮಾಲ್‌ ಸೇರಿದಂತೆ ಬೇರೆ ಕಡೆಗಳಲ್ಲಿ ಹೆಲ್ಪರ್‌ ಆಗಿ ಕೆಲಸ ಮಾಡಿರುವ ಅಮ್ಮು 8-10 ಸಾವಿರ ರೂಗಳಿಂದ ಸಂಸಾರ ನಡೆಸುವುದು ಕಷ್ಟವಾಗಿ ಆಟೋ ಓಡಿಸಲು ಆರಂಭಿಸಿದರು. ಅಮ್ಮ, ಮಕ್ಕಳು ತಮ್ಮ ಸೇರಿದಂತೆ 8 ಜನರ ಕುಟುಂಬವನ್ನು ಒಬ್ಬರೇ ನಿಭಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...