Homeಕರ್ನಾಟಕತುಮಕೂರು ವಿವಿ ಸಂಶೋಧನಾ ವಿದ್ಯಾರ್ಥಿಯಿಂದ ಬಾಲಕಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

ತುಮಕೂರು ವಿವಿ ಸಂಶೋಧನಾ ವಿದ್ಯಾರ್ಥಿಯಿಂದ ಬಾಲಕಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

- Advertisement -
- Advertisement -

ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಾಗಿದೆ.

ತುಮಕೂರು ವಿವಿಯಲ್ಲಿ ಕನ್ನಡ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಎನ್ ಮಲ್ಲಿಕಾರ್ಜುನ ಎಂಬಾತ ಮನೆಗೆಲಸ ಮಾಡುವ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಯು ಗರ್ಭಿಣಿಯಾದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಮಲ್ಲಿಕಾರ್ಜುನ್ ವಿರುದ್ಧ ಡಿಸೆಂಬರ್ 26 ರಂದು ತುಮಕೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆತ ತಂಗಿದ್ದ ಮನೆಯಲ್ಲಿ ಬಾಲಕಿಯ ಮೇಲೆ ಸತತ ಅತ್ಯಾಚಾರವೆಸಗಲಾಗಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕನ್ನಡ ವಿಭಾಗವು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಆರೋಪಿ ವಿದ್ಯಾರ್ಥಿಯ ಸಂಶೋಧನಾ ದಾಖಲಾತಿಯನ್ನು ರದ್ದುಪಡಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಕ್ರಮ ಕೈಗೊಳ್ಳುವುದಾಗಿ ವಿವಿ ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಆರೋಪಿಯನ್ನು ಬಂಧಿಸುವಂತೆ ಹಲವರು ಆಗ್ರಹಿಸಿದ್ದಾರೆ. ಸದ್ಯ ಆರೋಪಿ ನಾಪತ್ತೆಯಾಗಿದ್ದು, ಪತ್ತೆಗಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಇದನ್ನೂ ಓದಿ: 4 ವರ್ಷದ ಮಗು ಮೇಲೆ ಅತ್ಯಾಚಾರ: ಸಿಸಿಕ್ಯಾಮರ ನೆರವಿನಿಂದ ಆರೋಪಿಯ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read