Homeಮುಖಪುಟಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

- Advertisement -
- Advertisement -

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ತಯಾರಿ ನಡೆಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರು ತಿಂಗಳ ಕಾಲ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಇಬ್ಬರು ಶಿಕ್ಷಕರು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪ್ರಾಪ್ತ NEET

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಸಾಯನಶಾಸ್ತ್ರ ಬೋಧಿಸುತ್ತಿರುವ ವಿಕಾಸ್ ಪೋರ್ವಾಲ್ (39) ಮತ್ತು ಜೀವಶಾಸ್ತ್ರ ಕಲಿಸುತ್ತಿರುವ ಸಾಹಿಲ್ ಸಿದ್ದಿಕಿ (32) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ NEET

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಸಿದ್ದೀಕಿ ಬೇರೊಬ್ಬ ವಿದ್ಯಾರ್ಥಿಯ ಜೊತೆಗೆ ಲೈಂಗಿಕವಾಗಿ ವರ್ತಿಸುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಹಿಡಿಯಲಾಗಿದ್ದು, ಅದು ಬಹಿರಂಗವಾದ ನಂತರ ಆತನನ್ನು ಇತ್ತಿಚೆಗೆ ಬಂಧಿಸಲಾಗಿತ್ತು.

ಸಂತ್ರಸ್ತ ವಿದ್ಯಾರ್ಥಿ ಫತೇಪುರ್‌ ಮೂಲದವರಾಗಿದ್ದು, ಘಟನೆ ಸಂಭವಿಸಿದಾಗ ಅವರು 17 ವರ್ಷ ವಯಸ್ಸಿನವರಾಗಿದ್ದರು. ಅವರು ನೀಡಿರುವ ದೂರಿನಲ್ಲಿ, ಡಿಸೆಂಬರ್ 2022 ರಲ್ಲಿ, ಸಿದ್ದಿಕಿ ತನ್ನನ್ನು ಕಲ್ಯಾಣಪುರದ ಮಕ್ಡಿ- ಖೇರಾ ಪ್ರದೇಶದ ಸ್ನೇಹಿತರ ಸ್ಥಳಕ್ಕೆ ಹೊಸ ವರ್ಷದ ಕೂಟಕ್ಕೆ ಆಹ್ವಾನಿಸಿದ್ದನು. ಜೊತೆಗೆ ಅಲ್ಲಿಗೆ ಇತರ ವಿದ್ಯಾರ್ಥಿಗಳು ಕೂಡಾ ಇರುತ್ತಾರೆ ಎಂದು ಹೇಳಿದ್ದನು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಅದಾಗ್ಯೂ, ಸಿದ್ದಿಕಿಯ ಫ್ಲಾಟ್‌ಗೆ ಬಂದಾಗ ಅವರಿಗೆ ಅಲ್ಲಿ ಯಾರೂ ಕಾಣಲಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಸಿದ್ದಿಕಿ ತಂಪು ಪಾನೀಯಕ್ಕೆ ನಿದ್ರೆಯ ಮಾತ್ರೆಯನ್ನು ಬೆರೆಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ದುಷ್ಕರ್ಮಿಯು ಈ ಕೃತ್ಯವನ್ನು ವಿಡಿಯೋ ರೆಕಾರ್ಡಿಂಗ್ ಕೂಡ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ ಆರು ತಿಂಗಳ ಕಾಲ ದುಷ್ಕರ್ಮಿಯು ಫ್ಲಾಟ್‌ನಲ್ಲಿ ತನ್ನನ್ನು ಒತ್ತೆಯಾಳಾಗಿಟ್ಟುಕೊಂಡಿದ್ದು ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಈ ಕೃತ್ಯವನ್ನು ಬಹಿರಂಗ ಪಡಿಸಿದರೆ ತನ್ನ ಕೈಯ್ಯಲ್ಲಿ ಇರುವ ವಿಡಿಯೊ ಕ್ಲಿಪ್‌ಗಳನ್ನು ಶೇರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ದುಷ್ಕರ್ಮಿಯು ಪಾರ್ಟಿಗಳಿಗೆ ಹಾಜರಾಗುವಂತೆ ಆಕೆಯನ್ನು ಬಲವಂತಪಡಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಸಭೆಯೊಂದರಲ್ಲಿ ಬಾಲಕಿಯು ಪೋರ್ವಾಲ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...