Homeಮುಖಪುಟಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶ ಬಿಜೆಪಿ ಶಾಸಕ ದೋಷಿ!

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶ ಬಿಜೆಪಿ ಶಾಸಕ ದೋಷಿ!

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ಮೇಲಿನ ಆರೋಪ ಸಾಬೀತಾಗಿದ್ದು, ನ್ಯಾಯಾಲಯವು ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಡಿಸೆಂಬರ್ 15 ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.

ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ವಿರುದ್ಧ 2014ರಲ್ಲಿ ದಾಖಲಾಗಿದ್ದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಅಪರಾಧಿ ಎಂದು ಸಾಬೀತಾಗಿದೆ. ಪ್ರಸ್ತುತ ಅಪರಾಧಿ ಶಾಸಕನನ್ನು ನ್ಯಾಯಾಲಯ ಪೊಲೀಸ್ ವಶಕ್ಕೆ ನೀಡಿದೆ.

ರಾಮ್ದುಲರ್ ಗೊಂಡ್ ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕನಾಗಿದ್ದು, ಎಂಟು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದರು. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಮೈರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಆಗಿನ್ನೂ ರಾಮ್ದುಲರ್ ಗೊಂಡ್ ಶಾಸಕರಾಗಿರಲಿಲ್ಲ.

ಪೋಕ್ಸೋ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಬಾಕಿ ಇತ್ತು. ಅವರು ಶಾಸಕರಾಗಿ ಆಯ್ಕೆಯಾದ ನಂತರ, ಕಡತಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ನವೆಂಬರ್‌ನಲ್ಲಿಯೇ ವಾದ-ಪ್ರತಿವಾದಗಳು ಪೂರ್ಣಗೊಂಡಿದ್ದು, ನ್ಯಾಯಾಧೀಶರ ವರ್ಗಾವಣೆಯಿಂದಾಗಿ ತೀರ್ಪು ವಿಳಂಬವಾಗಿತ್ತು.

ನಂತರ ನ್ಯಾಯಾಧೀಶರಾಗಿ ಬಂದ ಹಸಾನುಲ್ಲಾ ಖಾನ್, ತಾವು ಅಧಿಕಾರ ವಹಿಸಿಕೊಂಡ ನಂತರ ವಿವಿಧ ದಿನಾಂಕಗಳ ನಂತರ ಶುಕ್ರವಾರ ಚರ್ಚೆ ಮುಕ್ತಾಯಗೊಂಡಿತು. ಈ ಪ್ರಕರಣದ ತೀರ್ಪನ್ನು ಡಿಸೆಂಬರ್ 12 ರಂದು ನೀಡಲು ನ್ಯಾಯಾಲಯ ನಿಗದಿಪಡಿಸಿತ್ತು. ಈಗ ವಿಚಾರಣೆ ನಡೆಸಿದ ನ್ಯಾಯಾಲಯವು, ರಾಮ್ದುಲರ್ ಗೊಂಡ್ ಅವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಡಿಸೆಂಬರ್ 15 ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಇದನ್ನೂ ಓದಿ; ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್ ಶರ್ಮಾ ಆಯ್ಕೆ: ಮೊದಲ ಬಾರಿಯ ಶಾಸಕನಿಗೆ ಸಿಎಂ ಪಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...