Homeಮುಖಪುಟಅಲ್ಪಸಂಖ್ಯಾತರು ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ: ಅಮಿತ್ ಶಾ ಪುನರುಚ್ಚಾರ

ಅಲ್ಪಸಂಖ್ಯಾತರು ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ: ಅಮಿತ್ ಶಾ ಪುನರುಚ್ಚಾರ

- Advertisement -
- Advertisement -

ಸಿಎಎ ಕಾನೂನಿಂದ ಅಲ್ಪಸಂಖ್ಯಾತರು ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಅವರು ಒರಿಸ್ಸಾದ ಭುವನೇಶ್ವರದಲ್ಲಿ ಸಿಎಎ ಪರ ಸಭೆಯಲ್ಲಿ ಮಾತನಾಡುತ್ತಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಟೀಕಿಸುವುದರಲ್ಲಿ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿವೆ ಎಂದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಕಾನೂನು ಯಾರ ಪೌರತ್ವವನ್ನು ಕಸಿದುಕೊಳ್ಳುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

“ಬಿಎಸ್ಪಿ, ಎಸ್ಪಿ, ಕಮ್ಯುನಿಸ್ಟ್, ಕಾಂಗ್ರೆಸ್ ಮತ್ತು ಮಮತಾ ದೀದಿ ಸಿಎಎ ವಿರುದ್ಧವಾಗಿವೆ ಯಾಕೆಂದರೆ ಅಲ್ಪಸಂಖ್ಯಾತರು ತಮ್ಮ ಪೌರತ್ವವನ್ನು ಕಳೆದುಕೊಳ್ಳುತ್ತಾರೆ ಎಂದು ಅವರು ಹೇಳುತ್ತಾರೆ. ಅವರು ಯಾಕೆ ಸುಳ್ಳು ಹೇಳುತ್ತಿದ್ದಾರೆ? ಸಿಎಎ ಪೌರತ್ವ ನೀಡುವ ಕಾನೂನು, ಇದು ಯಾರದೆ ಪೌರತ್ವವನ್ನು ಕಸಿದುಕೊಳ್ಳಲು ಇರುವ ಕಾನೂನು ಅಲ್ಲ” ಎಂದು ಅಮಿತ್ ಶಾ ಭುವನೇಶ್ವರದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ.

ಸಿಎಎ ಧರ್ಮದ ಆಧಾರದಲ್ಲಿ ರಾಷ್ಟ್ರೀಯತೆನ್ನು ನೀಡುವ  ಕಾನೂನಾಗಿದ್ದು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ನೀಡುವ ಭರವಸೆ ನೀಡಿದೆ. ನೆರೆಹೊರೆಯ ದೇಶಗಳಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವವರಿಗೆ ಸಹಾಯ ಮಾಡಲು ಮಾತ್ರ ಈ ಕಾನೂನು ಉದ್ದೇಶಿಸಿದೆ ಎಂದು ಅಮಿತ್ ಶಾ ಮತ್ತು ಕೇಂದ್ರ ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡಿದೆ.

ಆದಾಗ್ಯೂ, ವಿರೋಧ ಪಕ್ಷಗಳು ಉದ್ದೇಶಿತ ಎನ್‌ಆರ್‌ಸಿಯೊಂದಿಗೆ ಸೇರಿ, ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯವಾದ ದಾಖಲೆಗಳನ್ನು ಇಲ್ಲದ ಮುಸ್ಲಿಮರನ್ನು ಗುರಿಯಾಗಿಸಲು ಸಿಎಎ ಕಾಯ್ದೆಯನ್ನು ಬಳಸಬಹುದು.

ದೆಹಲಿ ಪೊಲೀಸರನ್ನು ನಿಯಂತ್ರಿಸುವ ಗೃಹ ಸಚಿವರು, ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಸಿಎಎ ಪರವಾಗಿರುವ ಮತ್ತು ವಿರುದ್ಧವಾಗಿರುವ ಪ್ರತಿಭಟನಾಕಾರರು ಸೋಮವಾರದಿಂದ ಈಶಾನ್ಯ ದೆಹಲಿಯಲ್ಲಿ ಘರ್ಷಣೆ ನಡೆಸಿದ್ದರಿಂದ 42 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಮುನ್ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...