Homeಮುಖಪುಟ'ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..'; ಅಸ್ಸಾಂ ಸಿಎಂ ದ್ವೇಷ ಭಾಷಣ

‘ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..’; ಅಸ್ಸಾಂ ಸಿಎಂ ದ್ವೇಷ ಭಾಷಣ

- Advertisement -
- Advertisement -

ಲೋಕಸಭಾ ಚುನಾವಣೆ ನಂತರವೂ ಬಿಜೆಪಿ ನಾಯಕರ ದ್ಷೇಷ ಭಾಷಣ ಮುಂದುವರಿದಿದ್ದು, “ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸದೆ ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. “ಅಸ್ಸಾಂನಲ್ಲಿ ಕೋಮುವಾದದಲ್ಲಿ ತೊಡಗಿರುವ ಏಕೈಕ ಸಮುದಾಯ ಇದಾಗಿದೆ” ಎಂದು ಅವರು ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಪಕ್ಷದ ರಾಜ್ಯ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿಜೇತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಮೈತ್ರಿಕೂಟವು ಸುಮಾರು ಶೇಕಡಾ 47 ರಷ್ಟು ಮತಗಳನ್ನು ಗಳಿಸಿದೆ. ಆದರೆ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಶೇಕಡಾ 39 ರಷ್ಟು ಮತಗಳನ್ನು ಗಳಿಸಿವೆ.

ಬಿಜೆಪಿ-ಎಜಿಪಿ-ಯುಪಿಪಿಎಲ್ ಸಮ್ಮಿಶ್ರವು ರಾಜ್ಯದ 14 ಲೋಕಸಭಾ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದುಕೊಂಡಿದೆ, ಉಳಿದ ಮೂರನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

”ಕಾಂಗ್ರೆಸ್‌ನ ಶೇಕಡಾ 39 ಮತಗಳನ್ನು ವಿಶ್ಲೇಷಿಸಿದರೆ, ಅದು ರಾಜ್ಯಾದ್ಯಂತ ಹರಡಿಲ್ಲ; ಅದರಲ್ಲಿ ಶೇಕಡಾ 50 ರಷ್ಟು ಅಲ್ಪಸಂಖ್ಯಾತರ ಪ್ರಾಬಲ್ಯವಿರುವ 21 ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರೀಕೃತವಾಗಿದೆ. ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ ಶೇಕಡಾ 3 ರಷ್ಟು ಮತಗಳನ್ನು ಪಡೆದುಕೊಂಡಿದೆ” ಅವರು ಸಮರ್ಥಿಸಿಕೊಂಡರು.

“ಹಿಂದೂಗಳು ಕೋಮುವಾದಕ್ಕೆ ಒಳಗಾಗುವುದಿಲ್ಲ ಎಂಬುದನ್ನು ಇದು ಸಾಬೀತುಪಡಿಸುತ್ತದೆ. ಅಸ್ಸಾಂನಲ್ಲಿ ಯಾರಾದರೂ ಕೋಮುವಾದವನ್ನು ನಡೆಸಿದರೆ ಅದು ಒಂದೇ ಸಮುದಾಯ, ಒಂದು ಧರ್ಮ, ಬೇರೆ ಯಾವುದೇ ಧರ್ಮದವರು ಅದನ್ನು ಮಾಡುವುದಿಲ್ಲ” ಎಂದು ಮುಖ್ಯಮಂತ್ರಿ ಯಾವುದೇ ಧರ್ಮವನ್ನು ಹೆಸರಿಸದೆ ದ್ವೇಷ ಭಾಷಣ ಮಾಡಿದ್ದಾರೆ.

ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ರಸ್ತೆಯಿಲ್ಲದಿರಬಹುದು, ವಿದ್ಯುತ್ ಇಲ್ಲದಿರಬಹುದು. ಆದರೆ, ಅವರು ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ ಎಂದು ಹೇಳಿದರು.

ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಅಸ್ಸಾಮಿ ಜನರು ಮತ್ತು ಬುಡಕಟ್ಟು ಜನಾಂಗದವರಿಗಾಗಿ ಕೆಲಸ ಮಾಡುತ್ತಿದ್ದರೂ, ಈ ಸಮುದಾಯಗಳು ಕೇಸರಿ ಪಕ್ಷಕ್ಕೆ 100 ಪ್ರತಿಶತ ಮತ ನೀಡಿಲ್ಲ ಎಂದು ಅವರು ಹೇಳಿದರು.

“ಕರೀಂಗಂಜ್ ಹೊರತುಪಡಿಸಿ, ಬಾಂಗ್ಲಾದೇಶ ಮೂಲದ ಬಹುಸಂಖ್ಯಾತರನ್ನು ಹೊಂದಿರುವ ಕೇಂದ್ರಗಳನ್ನು ನಾವು ಪರಿಗಣಿಸಿದರೆ, ಶೇಕಡಾ 99 ರಷ್ಟು ಮತಗಳು ಕಾಂಗ್ರೆಸ್‌ಗೆ ಬಂದಿವೆ” ಎಂದು ಅವರು ಹೇಳಿದರು.

“ಅವರು (ಅಲ್ಪಸಂಖ್ಯಾತ ಜನರು) (ಪ್ರಧಾನಿ ನರೇಂದ್ರ) ಮೋದಿಯವರು ನೀಡಿದ ಮನೆಗಳಲ್ಲಿ ವಾಸಿಸುತ್ತಿರಬಹುದು, ಮೋದಿ ಅವರು ಒದಗಿಸಿದ ವಿದ್ಯುತ್ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಅವರು ಮತ ಚಲಾಯಿಸಲು ಹೋದಾಗ ಅವರು ಕಾಂಗ್ರೆಸ್‌ಗೆ ಮತ ಹಾಕುತ್ತಾರೆ” ಎಂದು ಶರ್ಮಾ ಹೇಳಿದ್ದಾರೆ.

ಬಾಂಗ್ಲಾದೇಶ ಮೂಲದ ಸಮುದಾಯವು ಕಾಂಗ್ರೆಸ್‌ಗೆ ಮತ ಹಾಕುತ್ತದೆ. ಏಕೆಂದರೆ, ಅವರು “ಮುಂದಿನ 10 ವರ್ಷಗಳಲ್ಲಿ ರಾಜ್ಯವನ್ನು ನಿಯಂತ್ರಿಸಲು” ಬಯಸುತ್ತಾರೆ ಎಂದು ಅವರು ಸಮರ್ಥಿಸಿಕೊಂಡರು.

ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವಾಗಿನಿಂದ ಬಿಜೆಪಿ ಸರ್ಕಾರ ನಿಷ್ಕ್ರಿಯವಾಗಿದ್ದಾಗ ಸಮುದಾಯದ ಸದಸ್ಯರು ಬಾರ್ಪೇಟಾದ ಹಳ್ಳಿಯಾದ ಲಖಿಂಪುರದ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದರು; ಕೊಕ್ರಜಾರ್‌ನಲ್ಲಿ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸಿದರು ಎಂದು ಶರ್ಮಾ ಆರೋಪಿಸಿದರು.

‘ಬಿಜೆಪಿ ಸರ್ಕಾರ ಇಲ್ಲದಿರುವಾಗ ಇಂತಹ ದಾಳಿಗಳು ಎಷ್ಟು ನಡೆಯುತ್ತವೆ ಎಂಬುದನ್ನು ಊಹಿಸಬಹುದು’ ಎಂದು ಅವರು ಹೇಳಿದರು.

ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 126 ವಿಧಾನಸಭಾ ಕ್ಷೇತ್ರಗಳ ಪೈಕಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇದು ರಾಜ್ಯದಲ್ಲಿ ಯಾವುದೇ ಆಡಳಿತಾರೂಢ ಮೈತ್ರಿಕೂಟಕ್ಕೆ ಇದುವರೆಗೆ ಅತ್ಯಧಿಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

“ಈ ಬಾರಿ, ನಾವು ಶೇಕಡಾ 47 ರಷ್ಟು ಮತಗಳನ್ನು ಪಡೆದಿದ್ದೇವೆ. 2026ರ ರಾಜ್ಯ ಚುನಾವಣೆಯಲ್ಲಿ ಶೇಕಡಾ 50 ರಷ್ಟು ಮತಗಳನ್ನು ಪಡೆಯುವುದು ನಮ್ಮ ಗುರಿಯಾಗಿದೆ” ಎಂದು ಬಿಜೆಪಿ ನಾಯಕ ಹೇಳಿದರು.

ಬಿಜೆಪಿಯು ರಾಷ್ಟ್ರ ನಿರ್ಮಾಣಕ್ಕಾಗಿ ರಾಜಕೀಯದಲ್ಲಿದೆ; ಆ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿ ಗೆದ್ದಿರಲಿ ಅಥವಾ ಗೆಲ್ಲದಿರಲಿ, ಎಲ್ಲ ಭಾಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದರು.

ಇದನ್ನೂ ಓದಿ; ‘ದಯವಿಟ್ಟು ನ್ಯಾಯ ಕೊಡಿಸಿ, ನೀವೇ ನಮ್ಮ ಕೊನೆಯ ಭರವಸೆ..’; ಪ್ರಧಾನಿ ಮೋದಿಗೆ ಮನವಿ ಮಾಡಿದ ನೀಟ್ ಆಕಾಂಕ್ಷಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...