Homeಮುಖಪುಟಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ಹಲ್ಲೆ ನಡೆಸಿದವರು ಬಿಜೆಪಿ ಮುಖಂಡನ ಕಡೆಯವರು ಎಂಬ ಆರೋಪವಿದೆ

- Advertisement -
- Advertisement -

ಒಡಿಶಾ ಆಡಳಿತ ಸೇವೆಯ (ಒಎಎಸ್‌) ಹಿರಿಯ ಅಧಿಕಾರಿಯೊಬ್ಬರನ್ನು ಕಚೇರಿಯಿಂದ ಎಳೆದೊಯ್ದು ಕ್ರೂರವಾಗಿ ಥಳಿಸಿರುವ ಘಟನೆ ಭುವನೇಶ್ವರ ಮಹಾನಗರ ಪಾಲಿಕೆಯಲ್ಲಿ (ಬಿಎಂಸಿ) ಸೋಮವಾರ (ಜೂನ್ 30, 2025) ನಡೆದಿದೆ.

ಅಧಿಕಾರಿ ವರ್ಗ, ವಿರೋಧ ಪಕ್ಷಗಳ ನಾಯಕರು ಮತ್ತು ಸಾರ್ವಜನಿಕರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಬಿಎಂಸಿಯ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರು ಪಾಲಿಕೆ ಕಟ್ಟಡದಲ್ಲಿ ಸಾರ್ವಜನಿಕರ ಕುಂದುಕೊರತೆ ಕುರಿತಂತೆ ಸಭೆ ನಡೆಸುತ್ತಿದ್ದರು. ಈ ವೇಳೆ 2024ರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಪರಾಜಯಗೊಂಡ ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಎನ್ನಲಾದ ವ್ಯಕ್ತಿಗಳ ಗುಂಪೊಂದು ಅವರನ್ನು ಎಳೆದೊಯ್ದು ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಹಲ್ಲೆಯಿಂದ ಅಧಿಕಾರಿ ಗಾಯಗೊಂಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಬಿಜೆಪಿ ಕಾರ್ಪೋರೇಟರ್ ಮುಂದೆಯೇ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಈ ಘಟನೆಗೂ ಸೋತ ಬಿಜೆಪಿ ಅಭ್ಯರ್ಥಿಗೂ ಸಂಬಂಧವಿದೆ ಎಂಬ ಆರೋಪವಿದೆ ಎಂದು” ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ರಾಜಧಾನಿ ಭುವನೇಶ್ವರದ ಹೃದಯಭಾಗದಲ್ಲಿ ಹಿರಿಯ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಜನರ ಕುಂದುಕೊರತೆಗಳನ್ನು ಆಲಿಸುತ್ತಿದ್ದಾಗ ಹಾಡಹಗಲೇ ಈ ಘಟನೆ ಸಂಭವಿಸಿದೆ ಎಂಬುದು ಹೆಚ್ಚು ಭಯಾನಕವಾಗಿದೆ” ಎಂದು ಪಟ್ನಾಯಕ್ ಹೇಳಿದ್ದಾರೆ.

“ಈ ನಾಚಿಕೆಗೇಡಿನ ದಾಳಿ ನಡೆಸಿದವರ ವಿರುದ್ಧ ಮಾತ್ರವಲ್ಲದೆ, ಅದರ ಹಿಂದೆ ಇರುವ ರಾಜಕೀಯ ನಾಯಕರ ವಿರುದ್ಧವೂ ತಕ್ಷಣದ ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾನು ಮುಖ್ಯಮಂತ್ರಿ ಮೋಹನ್ ಮಾಝಿ ಅವರಲ್ಲಿ ವಿನಂತಿಸುತ್ತೇನೆ” ಎಂದು ಬಿಜೆಡಿ ಅಧ್ಯಕ್ಷರೂ ಆಗಿರುವ ನವೀನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.

“ಅಧಿಕಾರಿ ತನ್ನ ಎಫ್‌ಐಆರ್‌ನಲ್ಲಿ ಹೆಸರಿಸಿರುವ ಜನರು ಕ್ರಿಮಿನಲ್‌ಗಳಂತೆ ವರ್ತಿಸಿದ್ದಾರೆ. ಒಬ್ಬ ಹಿರಿಯ ಅಧಿಕಾರಿ ತನ್ನ ಸ್ವಂತ ಕಚೇರಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಸಾಮಾನ್ಯ ನಾಗರಿಕರು ಸರ್ಕಾರದಿಂದ ಯಾವ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರೀಕ್ಷಿಸಬಹುದು?” ಎಂದು ನವೀನ್ ಪಟ್ನಾಯಕ್ ಪ್ರಶ್ನಿಸಿದ್ದಾರೆ.

“ಮಾಜಿ ರಾಜ್ಯಪಾಲರ ಪುತ್ರ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದಂತೆ, ಈ ಹೇಯ ಕೃತ್ಯಕ್ಕೆ ಶಿಕ್ಷೆಯಾಗದಂತೆ ತಡೆಯಲು ಪ್ರಯತ್ನಿಸದೆ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸುವ ಮೂಲಕ ತಮ್ಮ ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ಪುನಃಸ್ಥಾಪಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಒಡಿಶಾದ ಜನರು ಇದನ್ನು ಕ್ಷಮಿಸುವುದಿಲ್ಲ” ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಅಧಿಕಾರಿಯ ಮೇಲಿನ ಹಲ್ಲೆಯನ್ನು ಖಂಡಿಸಿ ಸೋಮವಾರ ಸಂಜೆ, ಮೇಯರ್ ಸುಲೋಚನಾ ದಾಸ್ ನೇತೃತ್ವದಲ್ಲಿ ಬಿಜೆಡಿ ಕಾರ್ಪೊರೇಟರ್‌ಗಳು ಭುವನೇಶ್ವರದ ಜನನಿಬಿಡ ರಸ್ತೆಯಾದ ಜನಪಥ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...