Homeಕರ್ನಾಟಕಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಳಗಾವಿ ಜಿಲ್ಲೆ ಹೂಲಿಕಟ್ಟಿ ಗ್ರಾಮದಲ್ಲಿ ಮುಸ್ಲಿಂ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಬರೆದುಕೊಂಡಿರುವ ಸಿಎಂ, “ದಯವೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕ್ರೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ ಎಂದಿದ್ದಾರೆ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ ಎಂದು ತಿಳಿಸಿದ್ದಾರೆ.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಎಲ್ಲಾ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು ಎಂದಿದ್ದಾರೆ.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ ಎಂದಿರು ಸಿಎಂ, ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ.

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...