ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ ಜಿಲ್ಲೆ ಹೂಲಿಕಟ್ಟಿ ಗ್ರಾಮದಲ್ಲಿ ಮುಸ್ಲಿಂ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಬರೆದುಕೊಂಡಿರುವ ಸಿಎಂ, “ದಯವೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕ್ರೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ ಎಂದಿದ್ದಾರೆ. ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು … Continue reading ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ