Homeಕರ್ನಾಟಕಸಿದ್ದರಾಮಯ್ಯ ಕುರಿತು ನಕಲಿ ಪತ್ರಿಕಾ ತುಣುಕು ಹರಿಬಿಟ್ಟ ಕಿಡಿಗೇಡಿಗಳು; ಸ್ಪಷ್ಟನೆ

ಸಿದ್ದರಾಮಯ್ಯ ಕುರಿತು ನಕಲಿ ಪತ್ರಿಕಾ ತುಣುಕು ಹರಿಬಿಟ್ಟ ಕಿಡಿಗೇಡಿಗಳು; ಸ್ಪಷ್ಟನೆ

- Advertisement -
- Advertisement -

‘ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ತಲೆಬರಹ ಇರುವ ನಕಲಿ ಪೇಪರ್ ಕಟಿಂಗ್ ಒಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು’ ಎಂದು ಹೇಳಿದ್ದಾರೆ.

‘ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು” ಎಂದು ಮೈತ್ರಿ ಪಕ್ಚಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ’ ಎಂದು ಅವರು ಹೇಳಿದ್ದಾರೆ.

ನಕಲಿ ಪತ್ರಿಕಾ ತುಣುಕಿನಲ್ಲಿ ಏನಿದೆ?

‘ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮಿಸ್ಲಿಮರ ಓಲೈಕೆ ಕುರಿತು ಬಿಜೆಪಿಗರ ಟೀಕೆಗೆ ತಲೆ ಕೆಡಿಸಕೊಳ್ಳಬೇಡಿ’ ಎಂಬ ತಲೆ ಬರಹ ಇರುವ ನಕಲಿ ಪತ್ರಿಕಾ ತುಣುಕಿನಲ್ಲಿ, ‘ಕಾಂಗ್ರೆಸ್‌ ನಂಬಿಕೆ ಇಟ್ಟಿರುವುದು. ಮುಸ್ಲಿಂ ಓಟುಗಳನ್ನು, ಕಾಂಗ್ರೆಸ್‌ ಪಕ್ಷವು ಹಿಂದೂಗಳ ಓಟನ್ನು ನಂಬಿಕೊಂಡಿಲ್ಲ. ಪಕ್ಷದ ಚಿನ್ಹೆಯನ್ನು ಹಿ೦ದಿನ ಕಾಂಗ್ರೆಸ್‌ ನಾಯಕರು ಬದಲಾಯಿಸಿದ್ದಾರೆ. ಪಕ್ಷ ಕಟ್ಟಿರುವುದು ಮುಸ್ಲಿಂ ಆಧಾರದ ಮೇಲೆ ಹೊರತು ಹಿಂದೂಗಳ ಓಟುಗಳ ಮೇಲೆ ಅಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬಾರದು. ಹಿಂದುಗಳು ಯಾವುದೋ ಮೋದಿ ಎಂಬ ವ್ಯಕ್ತಿಯನ್ನು
ನಂಬಬಾರದು ಎಂದು ಶ್ರೀ ಸಿದ್ದರಾಮಯ್ಯ ಅವರು ಹೇಳಿದರು’ ಎಂದು ಬರೆಯಲಾಗಿದೆ.

ಅಸಲಿ ವಿಚಾರ ಏನು?

2023ರ ಜೂನ್ 02 ರಂದು ಸಂಪುಟ ಸಭೆಗೂ ಮುನ್ನ, ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಇದನ್ನು ಪಬ್ಲಿಕ್ ಟಿವಿ, ವಾರ್ತಾಭಾರತಿ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅದೇ ಫೋಟೊ ತೆಗೆದುಕೊಂಡು, ಚುನಾವಣಾ ಸಮಯದಲ್ಲಿ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿ ಸೃಷ್ಠಿಸಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ; ಪುರಾವೆ ಸಹಿತ ಬಿಜೆಪಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...