Homeಕರ್ನಾಟಕವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

ವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

- Advertisement -
- Advertisement -

ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ರಘುಪತಿ ಭಟ್‌ ಇದೀಗ ವಿಧಾನ ಪರಿಷತ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿನ್ನೆ ಪ್ರಕಟಿಸಿತ್ತು. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಉಡುಪಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ರಘುಪತಿ ಭಟ್‌ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡದೆ ಯಶ್ಪಲ್‌ ಸುವರ್ಣಾಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ರಘಪತಿ ಭಟ್‌ ಸಾರ್ವಜನಿಕವಾಗಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷ ‌ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಎಂದು ಹೇಳಿದ್ದರು. ರಘುಪತಿ ಭಟ್‌ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ಪರಿಷತ್‌ ಟಿಕೆಟ್‌ ನೀಡುವುದಾಗಿ ಹೇಳಿ ಬಿಜೆಪಿ ಹೈಕಮಾಂಡ್‌ ಸಮಾಧಾನ ಮಾಡಿತ್ತು ಎಂದು ಹೇಳಲಾಗಿದೆ. ಆ ಬಳಿಕ ಅವರು ಪರಿಷತ್‌ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮಾಡುತ್ತಿದ್ದರು. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರನ್ನು ಅವರು ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್‌ ಕೈತಪ್ಪಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.

ರಘುಪತಿ ಭಟ್ಫೇಸ್ಬುಕ್ಪೋಸ್ಟ್ನಲ್ಲಿ ಏನೇನಿದೆ?

ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.

1994ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.

ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ.

ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು?ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ, ಚರ್ಚಿಸೋಣ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...