Homeಮುಖಪುಟಅರುಣಾಚಲ ಪ್ರದೇಶ: ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಮಾಡಿದ ಚೀನಾ ಸೇನೆ

ಅರುಣಾಚಲ ಪ್ರದೇಶ: ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಮಾಡಿದ ಚೀನಾ ಸೇನೆ

- Advertisement -
- Advertisement -

ಅರುಣಾಚಲ ಪ್ರದೇಶದ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (ಎಲ್‌ಎಸಿ) ಬಳಿ ನಾಪತ್ತೆಯಾಗಿದ್ದ 17 ವರ್ಷದ ಯುವಕನನ್ನು ಚೀನಾ ಸೇನೆ ಪತ್ತೆ ಮಾಡಿದೆ. ಆತನನ್ನು ದೇಶಕ್ಕೆ ಕರೆತರಲು ಸೂಕ್ತ ವಿಧಾನವನ್ನು ಅನುಸರಿಸಲಾಗುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

“ಅರುಣಾಚಲ ಪ್ರದೇಶದಿಂದ ನಾಪತ್ತೆಯಾದ ಬಾಲಕನನ್ನು ಪತ್ತೆಹಚ್ಚಲಾಗಿದೆ ಎಂದು ಚೀನಾದ ಸೇನೆಯು ನಮಗೆ ತಿಳಿಸಿದ್ದು, ಸೂಕ್ತ ಕಾರ್ಯವಿಧಾನವನ್ನು ಅನುಸರಿಸಲಾಗುತ್ತಿದೆ” ಎಂದು ಡಿಫೆನ್ಸ್ PRO ತೇಜ್ಪುರ್ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಬುಧವಾರ ಮಿರಾಮ್ ತಾರೋಮ್ ನಾಪತ್ತೆಯಾದ ನಂತರ ಭಾರತೀಯ ಸೇನೆಯು ಚೀನಾದ ಪೀಪಲ್ ಲಿಬರೇಶನ್ ಆರ್ಮಿ (ಪಿಎಲ್‌ಎ) ನೆರವು ಕೋರಿತ್ತು. ಕಾಣೆಯಾಗಿದ್ದ ಯುವಕ LAC ಉದ್ದಕ್ಕೂ ದೂರದ ಪ್ರದೇಶಗಳಿಗೆ ಆಗಾಗ್ಗೆ ಭೇಟಿ ನೀಡುವ ಸ್ಥಳೀಯ ಬೇಟೆ ನಡೆಸುವ ಗುಂಪಿನ ಭಾಗವೆಂದು ಹೇಳಲಾಗಿದ್ದು, ತ್ಸಾಂಗ್ಪೋ ನದಿ ಭಾರತಕ್ಕೆ ಪ್ರವೇಶಿಸುವ ಬಳಿ ಚೀನಾದ ಸೇನೆ ಆತನನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಮೇನಕಾ ಗಾಂಧಿ, ವರುಣ್ ಗಾಂಧಿ ಔಟ್

“ಅರುಣಾಚಲ ಪ್ರದೇಶದ ಝಿಡೋದ 17 ವರ್ಷದ ಯುವಕ ಮಿರಾಮ್ ತಾರೋಮ್ ಅನ್ನು ಚೀನಾದ ಸೇನೆ ಪತ್ತೆಮಾಡಿದೆ ಎಂದು ವರದಿಯಾಗಿದೆ. ಭಾರತೀಯ ಸೇನೆಯು ತಕ್ಷಣವೇ ಹಾಟ್‌ಲೈನ್ ಮೂಲಕ ಸೇನೆಯನ್ನು ಸಂಪರ್ಕಿಸಿದೆ, ಪ್ರೋಟೋಕಾಲ್ ಪ್ರಕಾರ ಅವರನ್ನು ಪತ್ತೆಹಚ್ಚಲು ಮತ್ತು ಹಿಂದಿರುಗಿಸಲು ಪಿಎಲ್‌ಎ ಸಹಾಯವನ್ನು ಕೋರಲಾಗಿದೆ” ಎಂದು PRO ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...