Homeಮುಖಪುಟಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

ಸಚಿವರಿಗೆ ಹಿಂದಿ ಗೊತ್ತಿಲ್ಲ: ಸಿಎಸ್‌ ಬದಲಾವಣೆಗೆ ಕೋರಿ ಅಮಿತ್‌ ಶಾಗೆ ಮಿಜೋರಾಂ ಸಿಎಂ ಪತ್ರ

"ನಾನು ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಮಿಜೋ ಭಾಷೆ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಬದಲಿಸದಿದ್ದರೆ ನನ್ನನ್ನು ವಿರೋಧ ಪಕ್ಷಗಳು ಅಪಹಾಸ್ಯ ಮಾಡುತ್ತವೆ"

- Advertisement -
- Advertisement -

“ರಾಜ್ಯದ ಸಚಿವರಿಗೆ ಹಿಂದಿ ಗೊತ್ತಿಲ್ಲ; ಅನೇಕರಿಗೆ ಇಂಗ್ಲಿಷ್‌ ಕೂಡ ಗೊತ್ತಿಲ್ಲ” ಎಂದು ಕೇಂದ್ರದ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಮಿಜೋರಾಂ ಮುಖ್ಯಮಂತ್ರಿ ಪು ಜೋರಮ್ತಂಗ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿ (ಸಿಎಸ್‌) ರೇಣು ಶರ್ಮಾ ಅವರನ್ನು ಬದಲಾಯಿಸಲು ಒತ್ತಾಯಿಸಿದ್ದಾರೆ.

ರೇಣು ಶರ್ಮಾ ಅವರ ಬದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಸಿ.ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿಯವರು ಕೇಂದ್ರದ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

“ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ ಗೃಹ ಸಚಿವಾಲಯವು ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ” ಎಂದು ಅಕ್ಟೋಬರ್‌ 29ರಂದು ಬರೆದ ಪತ್ರದಲ್ಲಿ ಮಿಜೋರಾಂ ಸಿಎಂ ಹೇಳಿದ್ದು, ಈ ಪತ್ರವು ತಮಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

1988ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರಿಗೆ ನವೆಂಬರ್ 1ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು. ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

“ಮಿಜೋ ಭಾಷಿಗರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಬರುವುದಿಲ್ಲ. ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ ಮಿಜೋ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿಯವರು ಎಂದಿಗೂ ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದಲೂ ಮಿಜೋ ಭಾಷೆಯನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ನೇಮಿಸಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಎನ್‌ಡಿಎ ಸರ್ಕಾರವಾಗಲಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ನಡೆದುಬಂದಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನು ತಿಳಿಯದವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ” ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.

“ನಾನು ಮೊದಲಿನಿಂದಲೂ ಈ ಸಮಯದವರೆಗೆ ಈಶಾನ್ಯ ರಾಜ್ಯಗಳಲ್ಲಿ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹದಿಂದಾಗಿ ವಿಶೇಷವಾದ ಒಲವು ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

“ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರು ಕೇಳಿದಾಗ ನಿರಾಕರಿಸಲಿಲ್ಲ. ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಬದಲಾಯಿಸಬೇಕು, ನನ್ನ ಪ್ರಸ್ತಾವನೆಯನ್ನು ದಯವಿಟ್ಟು ಸ್ವೀಕರಿಸಬೇಕು ಎಂದು ನಿಮ್ಮಲ್ಲಿ ಮನಃಪೂರ್ವಕವಾಗಿ ವಿನಂತಿಸುತ್ತೇನೆ” ಎಂದು ಜೊರಾಮ್‌ತಂಗಾ ಕೋರಿದ್ದಾರೆ.

ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...