HomeಮುಖಪುಟELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

ELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

- Advertisement -
- Advertisement -

ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು  ಜೋರಾಮ್ ಪೀಪಲ್ಸ್ ಪಾರ್ಟಿ 25 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿ ಬಹುಮತವನ್ನು ಪಡೆದುಕೊಂಡಿದ್ದು, ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ ಭಾರೀ ಹಿನ್ನೆಡೆಯನ್ನು ಅನುಭವಿಸಿದೆ.

ಜೋರಾಮ್ ಪೀಪಲ್ಸ್ ಪಾರ್ಟಿ 27 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿತ್ತು. ಈ ಪೈಕಿ 25ಕ್ಷೇತ್ರಗಳಲ್ಲಿ ಈಗಾಗಲೇ ಗೆಲುವನ್ನು ಸಾಧಿಸಿದ್ದು, ಮ್ಯಾಜಿಕ್‌ ನಂಬರನ್ನು ದಾಟಿದೆ. ಜೋರಾಮ್ ಪೀಪಲ್ಸ್ ಪಾರ್ಟಿ ಮುನ್ನಡೆ ಸಾಧಿಸಿರುವ ಇನ್ನೆರಡು ಕ್ಷೇತ್ರಗಳ ಫಲಿತಾಂಶ ಕೆಲವೇ ಕ್ಷಣದಲ್ಲಿ ಹೊರಬೀಳಲಿದೆ.

ಮಿಜೋರಾಂನಲ್ಲಿ ಆಡಳಿತ ನಡೆಸುತ್ತಿದ್ದ ಮಿಜೋ ನ್ಯಾಷನಲ್ ಫ್ರಂಟ್ 7 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು, ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ ಮಿಜೋರಾಂನಲ್ಲಿ 2 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು, ಕಾಂಗ್ರೆಸ್‌ ಒಂದು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಕಳೆದ ಬಾರಿ ಚುನಾವಣೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ 27 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮಿಜೋರಾಂನಲ್ಲಿ ಅಧಿಕಾರಕ್ಕೇರಿತ್ತು. ಈ ಬಾರಿ 17ಕ್ಕೂ ಅಧಿಕ ಸ್ಥಾನಗಳನ್ನು ಮಿಜೋ ನ್ಯಾಷನಲ್ ಫ್ರಂಟ್ ಕಳೆದುಕೊಂಡಿದೆ.

ಜೋರಾಮ್ ಪೀಪಲ್ಸ್ ಪಾರ್ಟಿ ಕಳೆದ ಭಾರಿಗಿಂತ ಈ ಬಾರಿ 25 ಹೆಚ್ಚುವರಿ ಸ್ಥಾನಗಳನ್ನು ಪಡೆದುಕೊಂಡು ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಕಾಂಗ್ರೆಸ್‌ ಕಳೆದ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ 2 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ಪೂರ್ವ ಐಜ್ವಾಲ್‌ನಲ್ಲಿ ಪ್ರತಿಸ್ಪರ್ಧಿ ZPM ಅಭ್ಯರ್ಥಿ ಎದುರು ಮಿಝೋರಾಂ ಮುಖ್ಯಮಂತ್ರಿ ಸೋತಿದ್ದಾರೆ. ಮುಖ್ಯಮಂತ್ರಿ ಝೊರಾಂಥಾಂಗ ವಿರುದ್ಧ ZPM ಅಭ್ಯರ್ಥಿ ಲಾಲತನಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ(ಜೆಡ್‌ಪಿಎಂ) ನಡುವೆ ಮಿಝೋರಾಂನಲ್ಲಿ ಸ್ಪರ್ಧೆ ಇತ್ತು. ಕೊನೆಗೆ ಜೋರಾಮ್ ಪೀಪಲ್ಸ್ ಪಾರ್ಟಿ ರಾಜ್ಯದಲ್ಲಿ ಬಹುಮತವನ್ನು ಪಡೆದುಕೊಂಡಿದೆ.

ನವೆಂಬರ್‌ನಲ್ಲಿ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳ ಚುನಾವಣಾ ಫಲಿತಾಂಶ ನಿನ್ನೆ ಪ್ರಕಟವಾಗಿತ್ತು. ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಮತವನ್ನು ಪಡೆದುಕೊಂಡರೆ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಬಹುಮತವನ್ನು ಪಡೆದುಕೊಂಡಿದೆ. ಮಧ್ಯಪ್ರದೇಶದಲ್ಲಿ 163 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ಮಧ್ಯಪ್ರದೇಶದಲ್ಲಿ ಬಿಜೆಪಿ ಹೆಚ್ಚುವರಿ 54 ಕ್ಷೇತ್ರಗಳಲ್ಲಿ ಗೆಲುವನ್ನು ಪಡೆದುಕೊಂಡಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಬಿಜೆಪಿ ಎರಡು ರಾಜ್ಯಗಳಲ್ಲಿ ಹೆಚ್ಚುವರಿಯಾಗಿ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು 2018ರ ಚುನಾವಣೆಗೆ ಹೋಲಿಸಿದರೆ 30 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 2018ರ ಚುನಾವಣೆಗೆ ಹೋಲಿಸಿದರೆ 33 ಸ್ಥಾನಗಳನ್ನು ಕಾಂಗ್ರೆಸ್‌ ಕಳೆದುಕೊಂಡಿದೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...