Homeಮುಖಪುಟಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

- Advertisement -
- Advertisement -

ದೇಶದಲ್ಲಿ ಜನನ ದರ ನಿಯಂತ್ರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಮೀಜೋರಾಂ ಸಚಿವ ತನ್ನ ಕ್ಷೇತ್ರದಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಿಜೋ ಸಮುದಾಯದ ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗ ಐಜ್ವಾಲ್‌ ಪೂರ್ವ-2 ಕ್ಷೇತ್ರದ ಶಾಸಕ ಮತ್ತು ಮಿಜೋರಾಂನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಘೋಷಣೆ ಮಾಡಿದ್ದಾರೆ.

ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಒಂದು ಲಕ್ಷ ರೂ ಬಹುಮಾನ, ಟ್ರೋಫಿ ಮತ್ತು ಪ್ರಮಾಣಪತ್ರವನ್ನು ವಿತರಿಸುವುದಾಗಿ ತಿಳಿಸಿರುವ ಅವರು ಕಡಿಮೆ ಮಕ್ಕಳನ್ನು ಹೊಂದಿರುವವರ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

“ಮಿಜೋ ಜನಸಂಖ್ಯೆಯ ಬೆಳವಣಿಗೆಯ ದರ ಕಡಿಮೆಯಾಗುತ್ತಿರುವುದು ಮತ್ತು ಬಂಜೆತನ ದರ ಹೆಚ್ಚುತ್ತಿರುವುದು ಗಂಭೀರ ಕಳವಳಕಾರಿ ವಿಷಯವಾಗಿದೆ. ಮಿಜೋರಾಂನ ಜನಸಂಖ್ಯೆಯಲ್ಲಿನ ಕುಸಿತದಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಇದು ಸಣ್ಣ ಸಮುದಾಯಗಳು ಅಥವಾ ಮಿಜೋಸ್‌ನಂತಹ ಬುಡಕಟ್ಟು ಜನಾಂಗದವರು ಬದುಕುಳಿಯಲು ಮತ್ತು ಪ್ರಗತಿಗೆ ಅಡ್ಡಿಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಮಿಜೋರಾಂ ಮಿಜೋ ಸಮುದಾಯದ ತವರು ಮನೆಯಾಗಿದೆ. 21,087 ಚದರ ಕಿಲೋಮೀಟರ್ ವಿಸ್ತೀರ್ಣವುಳ್ಳ ಅಲ್ಲಿ 2011ರ ಜನಗಣತಿಯ ಪ್ರಕಾರ 10,91,014 ಜನರು ವಾಸಿಸುತ್ತಿದ್ದಾರೆ. ಅಲ್ಲಿನ ಜನಸಾಂದ್ರತೆ (ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸರಾಸರಿ ಜನರ ಸಂಖ್ಯೆ) ಕೇವಲ 52 ಆಗಿದೆ. ಇದು ದೇಶದಲ್ಲಿಯೇ ಅತಿ ಕಡಿಮೆ ಜನಸಾಂದ್ರೆತೆ ಹೊಂದಿರುವ ಎರಡನೇ ರಾಜ್ಯವಾಗಿದೆ. ಅರುಣಾಚಲ ಪ್ರದೇಶದ ಜನಸಾಂದ್ರತೆ 17 ಇದ್ದು, ಇದು ಕಡಿಮೆ ಜನಸಾಂದ್ರತೆಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತದ ಸರಾಸರಿ ಜನಸಾಂದ್ರತೆ 382 ಆಗಿದೆ.

ಆದರೆ ಮಿಜೋರಾಂನ ನೆರೆ ರಾಜ್ಯ ಅಸ್ಸಾಂನಲ್ಲಿ ಬೇರೆಯದೆ ಪರಿಸ್ಥಿತಿ ಇದೆ. ಅಲ್ಲಿನ ನೂತನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇತ್ತೀಚೆಗೆ ರಾಜ್ಯವು ನೀಡುವ ಕೆಲವು ಯೋಜನೆಗಳ ಅಡಿಯಲ್ಲಿ ಧನಸಹಾಯ ಪ್ರಯೋಜನಗಳನ್ನು ಪಡೆಯಲು ಎರಡು ಮಕ್ಕಳ ನೀತಿಯನ್ನು ಕ್ರಮೇಣ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. 2019 ರಲ್ಲಿ ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರು 2021 ರ ಜನವರಿಯಿಂದ ಸರ್ಕಾರಿ ಉದ್ಯೋಗಗಳಿಗೆ ಅರ್ಹರಲ್ಲ ಎಂದು ರಾಜ್ಯ ಆಡಳಿತ ನಿರ್ಧರಿಸಿತ್ತು.

ದೇಶದ ಉತ್ತರದ ರಾಜ್ಯಗಳಲ್ಲಿ ಭೌಗೋಳಿಕತೆಗಿಂತ ಹೆಚ್ಚಿನ ಜನಸಂಖ್ಯೆ ಕಂಡುಬಂದರೆ ದಕ್ಷಿಣದ ರಾಜ್ಯಗಳಲ್ಲಿ ಭೌಗೋಳಿಕತೆಗಿಂತ ಕಡಿಮೆ ಜನಸಂಖ್ಯೆ ಇರುವುದು ಕಂಡುಬಂದಿದೆ. ಇದು ಹಲವು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.


ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...