Homeಮುಖಪುಟಮಿಜೋರಾಂ ಮ್ಯಾನ್ಮಾರ್ ನಿರಾಶ್ರಿತರಿಗೆ ನೆರವು ನೀಡುವುದನ್ನು ಮುಂದುವರಿಸಲಿದೆ: ಸಿಎಂ ಲಾಲ್ದುಹೋಮ

ಮಿಜೋರಾಂ ಮ್ಯಾನ್ಮಾರ್ ನಿರಾಶ್ರಿತರಿಗೆ ನೆರವು ನೀಡುವುದನ್ನು ಮುಂದುವರಿಸಲಿದೆ: ಸಿಎಂ ಲಾಲ್ದುಹೋಮ

- Advertisement -
- Advertisement -

ಕೇಂದ್ರದ ಬೆಂಬಲದೊಂದಿಗೆ, ಮ್ಯಾನ್ಮಾರ್‌ನ ನಿರಾಶ್ರಿತರಿಗೆ ಮತ್ತು ಮಣಿಪುರದಿಂದ ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗೆ ತಮ್ಮ ಸರ್ಕಾರ ನೆರವು ನೀಡುವುದನ್ನು ಮುಂದುವರಿಸಲಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ತಿಳಿಸಿದ್ದಾರೆ.

ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬಂದ ಬಳಿಕ, ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು ಈ ಮಾತನ್ನು ಹೇಳಿದ್ದಾರೆ.

ಮ್ಯಾನ್ಮಾರ್ ಪ್ರಜೆಗಳಿಗೆ ನಿರಾಶ್ರಿತರ ಸ್ಥಾನಮಾನ ನೀಡಲು ಸಾಧ್ಯವಾಗದಿದ್ದರೂ, ಅವರಿಗೆ ಸಹಾಯ ಒದಗಿಸುವಲ್ಲಿ ನಮ್ಮೊಂದಿಗೆ ಸಹಕರಿಸಲು ಕೇಂದ್ರ ಸಿದ್ಧವಾಗಿದೆ. ಅದೇ ರೀತಿ ಜನಾಂಗೀಯ ಹಿಂಸಾಚಾರದಿಂದ ತಮ್ಮ ಮನೆಗಳನ್ನು ತೊರೆದ ಮಣಿಪುರದ ಜನರಿಗೂ ಕೂಡ ಕೇಂದ್ರದ ಸಹಬಾಗಿತ್ವದಲ್ಲಿ ಸಹಾಯ ನೀಡಲಾಗುವುದು ಎಂದು ಲಾಲ್ದುಹೋಮ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ತಮ್ಮ ತಾಯ್ನಾಡಿನಲ್ಲಿ ಮಿಲಿಟರಿ ದಂಗೆಯ ನಂತರ, ಫೆಬ್ರವರಿ 2021 ರಿಂದ ಮ್ಯಾನ್ಮಾರ್‌ನ ಚಿನ್ ಸಮುದಾಯಕ್ಕೆ ಸೇರಿದ 31,000ಕ್ಕೂ ಹೆಚ್ಚು ಜನರು ಮಿಜೋರಾಂಗೆ ಬಂದು ಆಶ್ರಯ ಪಡೆದಿದ್ದಾರೆ. ಮಣಿಪುರದಲ್ಲಿ ಜನಾಂಗೀಯ ಸಂಘರ್ಷದಿಂದ ರಾಜ್ಯ ತೊರೆದಿರುವ 9,000ಕ್ಕೂ ಹೆಚ್ಚು ಜನರು ಮಿಜೋರಾಂನಲ್ಲಿ ಆಶ್ರಯ ಪಡೆದಿದ್ದಾರೆ.

ಮ್ಯಾನ್ಮಾರ್‌ನ ಚಿನ್ ಸಮುದಾಯ ಮತ್ತು ಮಣಿಪುರದ ಕುಕಿ-ಜೋ ಸಮುದಾಯಗಳ ಜೊತೆ ಮಿಜೋರಾಂನ ಮಿಜೋಗಳು ಜನಾಂಗೀಯ ಸಂಬಂಧಗಳನ್ನು ಹೊಂದಿದ್ದು, ಹಾಗಾಗಿ, ಯಾವುದೇ ಸಂಘರ್ಷವಿಲ್ಲದೆ ಈ ಎರಡೂ ಸಮುದಾಯಗಳು ಮಿಜೋರಾಂನಲ್ಲಿ ಆಶ್ರಯ ಪಡೆದಿವೆ.

ಮ್ಯಾನ್ಮಾರ್‌ನಲ್ಲಿ ಪರಿಸ್ಥಿತಿ ಸಹಜ ಸ್ಥಿತಿ ಮರಳುವವರೆಗೆ ಮಿಜೋರಾಂನಲ್ಲಿ 2021ರಿಂದ ಆಶ್ರಯ ಪಡೆದಿರುವ ಮ್ಯಾನ್ಮಾರ್ ಪ್ರಜೆಗಳನ್ನು ಕೇಂದ್ರ ಸರ್ಕಾರ ಗಡಿಪಾರು ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲಾಲ್ದುಹೋಮಕ್ಕೆ ಅವರಿಗೆ ಭರವಸೆ ಕೊಟ್ಟಿದ್ದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಬೇಲಿ ಹಾಕಲು ಮುಂದಾಗಿರುವ ಕೇಂದ್ರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವ ವಿಶ್ವಾಸವನ್ನು ಸಿಎಂ ಲಾಲ್ದುಹೋಮ ವ್ಯಕ್ತಪಡಿಸಿದ್ದಾರೆ.

ಮಿಜೋರಾಂನ ಭಾರತ ಮತ್ತು ಮ್ಯಾನ್ಮಾರ್‌ ಗಡಿಯಲ್ಲಿ ಬೇಲಿ ಅಳವಡಿಸುವುದಾಗಿ ಕೇಂದ್ರ ಸರ್ಕಾರ ಇತ್ತೇಚೆಗೆ ಹೇಳಿತ್ತು. ಸುಮಾರು 300 ಕಿಮೀ ವ್ಯಾಪ್ತಿಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಸ್ತುತ ಯಾವುದೇ ಬೇಲಿ ಇಲ್ಲ. ಇಲ್ಲಿ ಎರಡೂ ದೇಶಗಳ ಜನರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸುಮಾರು 16 ಕಿ.ಮೀಗಳಷ್ಟು ಯಾವುದೇ ವೀಸಾ ಇಲ್ಲದೆ ಪ್ರವೇಶಿಸಬಹುದು.

ಇದನ್ನೂ ಓದಿ : ಜ.20 ರಿಂದ 25ರವರೆಗೆ ರೈಲು ಪ್ರಯಾಣ ಬೇಡ: ಮುಸ್ಲಿಂ ಸಮುದಾಯಕ್ಕೆ ಧುಬ್ರಿ ಸಂಸದರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...