Homeಮುಖಪುಟಮಿಜೋರಾಂನಲ್ಲಿ ಮತ ಎಣಿಕೆ: ಜೆಡ್‌ಪಿಎಂಗೆ ಭಾರೀ ಮುನ್ನಡೆ

ಮಿಜೋರಾಂನಲ್ಲಿ ಮತ ಎಣಿಕೆ: ಜೆಡ್‌ಪಿಎಂಗೆ ಭಾರೀ ಮುನ್ನಡೆ

- Advertisement -
- Advertisement -

ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ರಾಜ್ಯದಾದ್ಯಂತ 13 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

ಮಿಝೋರಾಂ ವಿಧಾನಸಭೆ 40 ಸದಸ್ಯ ಬಲವನ್ನು ಹೊಂದಿದೆ. ಸರಕಾರ ರಚನೆಗೆ 21 ಸ್ಥಾನಗಳಲ್ಲಿ ಗೆಲುವನ್ನು ಪಡೆಯಬೇಕಿದೆ.

ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್‌ಪಿಎಂ) ಮತ್ತು ಕಾಂಗ್ರೆಸ್ ನಡುವೆ ಮಿಝೋರಾಂನಲ್ಲಿ ಸ್ಪರ್ಧೆ ಇದೆ. ಆದರೆ ನ್ಯಾ ಷನಲ್ ಫ್ರಂಟ್ (ಎಂಎನ್‌ಎಫ್) ಮತ್ತು ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ ನಡುವೆ ಭಾರೀ ಪೈಪೋಟಿ ಇದೆ.

ಮತ ಎಣಿಕೆಯ ಆರಂಭಿಕ ಫಲಿತಾಂಶದ ಪ್ರಕಾರ ಮಿಜೋ ನ್ಯಾಷನಲ್ ಫ್ರಂಟ್ 14 ಕ್ಷೇತ್ರಗಳಲ್ಲಿ ಮತ್ತು ಜೋರಾಮ್ ಪೀಪಲ್ಸ್ ಪಾರ್ಟಿ 19 ಕ್ಷೇತ್ರಗಳಲ್ಲಿ ಕಾಂಗ್ರೆಸ್‌  6 ಕ್ಷೇತ್ರಗಳಲ್ಲಿ ಮತ್ತು ಬಿಜೆಪಿ 1 ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ.

ನವೆಂಬರ್‌ನಲ್ಲಿ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನಿನ್ನೆ ಪ್ರಕಟವಾಗಿತ್ತು. ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಮತವನ್ನು ಪಡೆದುಕೊಂಡರೆ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಬಹುಮತವನ್ನು ಪಡೆದುಕೊಂಡಿದೆ. ಮಧ್ಯಪ್ರದೇಶದಲ್ಲಿ 163 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ಮಧ್ಯಪ್ರದೇಶದಲ್ಲಿ ಬಿಜೆಪಿ ಹೆಚ್ಚುವರಿ 54 ಕ್ಷೇತ್ರಗಳಲ್ಲಿ ಗೆಲುವನ್ನು ಪಡೆದುಕೊಂಡಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಬಿಜೆಪಿ ಎರಡು ರಾಜ್ಯಗಳಲ್ಲಿ ಹೆಚ್ಚುವರಿಯಾಗಿ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು 2018ರ ಚುನಾವಣೆಗೆ ಹೋಲಿಸಿದರೆ 30 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌  35ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 2018ರ ಚುನಾವಣೆಗೆ ಹೋಲಿಸಿದೆ 33 ಸ್ಥಾನಗಳನ್ನು ಕಾಂಗ್ರೆಸ್‌ ಕಳೆದುಕೊಂಡಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...