Homeಮುಖಪುಟಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು: ಉದಯನಿಧಿ ಸ್ಟಾಲಿನ್

ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು: ಉದಯನಿಧಿ ಸ್ಟಾಲಿನ್

- Advertisement -
- Advertisement -

ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ, ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು  ಎಂದು ತಮಿಳುನಾಡಿನ ಸಚಿವ, ಸಿಎಂ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್,  ಸನಾತನ ಧರ್ಮವನ್ನು ವಿರೋಧಿಸುವುದು ಮಾತ್ರವಲ್ಲ, ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಬಿಜೆಪಿಯ ವಿವಾದವನ್ನು ಎಬ್ಬಿಸಿದೆ. ಅಮಿತ್ ಮಾಳವೀಯ ಉದಯನಿಧಿ ಸ್ಟಾಲಿನ್ ನರಮೇಧಕ್ಕೆ ಕರೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ  ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ನಾನು ಭಾಷಣದಲ್ಲಿ ಹೇಳಿದ ಅಂಶಗಳನ್ನು  ಪುನರುಚ್ಚರಿಸುತ್ತೇನೆ.  ಕೋವಿಡ್-19, ಸೊಳ್ಳೆಗಳಿಂದ ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂದು ನಾನು ನಂಬುತ್ತೇನೆ ಎಂದು ಉದಯ ನಿಧಿ ಸ್ಟ್ಯಾಲಿನ್ ಅವರು ಹೇಳಿದ್ದಾರೆ.

ಇದನ್ನು ಓದಿ: ಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...