Homeಕರ್ನಾಟಕಮುಖ್ಯಮಂತ್ರಿ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ ಶಾಸಕ ಬಿ.ಆರ್. ಪಾಟೀಲ್

ಮುಖ್ಯಮಂತ್ರಿ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ ಶಾಸಕ ಬಿ.ಆರ್. ಪಾಟೀಲ್

- Advertisement -
- Advertisement -

ಬೆಂಗಳೂರು: ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಶಾಸಕ ಬಿ.ಆರ್.ಪಾಟೀಲ್ ಅವರು ಮುಖ್ಯಮಂತ್ರಿ ಸಲಹೆಗಾರ ಹುದ್ದೆಗೆ ಶನಿವಾರ (ಫೆ.01) ಹಠಾತ್ತನೇ ರಾಜೀನಾಮೆ ನೀಡುವ ಮೂಲಕ ರಾಜಕೀಯ ಸುಳಿಗಾಳಿ ಎಬ್ಬಿಸಿದ್ದಾರೆ. ರಾಜೀನಾಮೆ ಸಲ್ಲಿಕೆ ಮಾಡಿರುವ ವಿಚಾರವನ್ನು ಬಿ ಆರ್‌ ಪಾಟೀಲ್ ಅವರೇ ಸ್ವತಃ ಅಧಿಕೃತಗೊಳಿಸಿದ್ದಾರೆ.

ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಕೇವಲ ಶಾಸಕರಾಗಿ ಮುಂದುವರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಿ ಈ ಹಿಂದೆ ಸಹ ಸರಕಾರದ ವಿರುದ್ಧ ಬಹಿರಂಗ‌ ಪತ್ರ ಬರೆದಿದ್ದರು.

ಇದಲ್ಲದೆ, ಈ ಹಿಂದೆ ನಡೆದ ಕಾಂಗ್ರೆಸ್ ಸಿಎಲ್ ಪಿ ಸಭೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿ ಹೊರನಡೆದು ಬಿಸಿ ಮುಟ್ಟಿಸಿದ್ದರು.

ಬೆಂಗಳೂರಿನಲ್ಲಿ ಶನಿವಾರ ಹಠಾತನೇ ತಮ್ಮ ರಾಜೀನಾಮೆಯನ್ನು ಸಿಎಂ ಕಚೇರಿಗೆ ಕಳಿಸಿರುವ ಅವರು, ರಾಜಿನಾಮೆ ಸ್ವೀಕಾರ ಆಗುವುದನ್ನು ಕಾಯುತ್ತಿದ್ದಾರೆ. ಬಳಿಕ ತಮ್ಮ ಮುಂದಿನ ನಡೆ ಏನು ಎನ್ನುವುದನ್ನು ಘೋಷಣೆ ಮಾಡಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಸಿಎಂ ಸಲಹೆಗಾರನ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದರು.

ಅಳಂದ ಶಾಸಕ ಬಿ ಆರ್ ಪಾಟೀಲ್ ಅವರು ಈ ಹಿಂದೆಯೂ ಸರ್ಕಾರದ ಕೆಲವೊಂದು ಕಾರ್ಯವೈಖರಿಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಿದೆ. ಇತ್ತೀಚೆಗೆ ಕಲಬುರಗಿಯಲ್ಲಿ ನಡೆಸಿದ್ದ ಕ್ಯಾಬಿನೆಟ್‌ ಸಭೆಯ ಬಗ್ಗೆಯೂ ಅವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

ಇದೀಗ ಇದ್ದಕ್ಕಿದ್ದಂತೆ ಸಿಎಂ ಸಲಹೆಗಾರ ಸ್ಥಾನಕ್ಕೆ ಬಿ ಆರ್ ಪಾಟೀಲ್ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿರುವ ಕುರಿತು ಇನ್ನು ಸ್ಪಷ್ಟಗೊಂಡಿಲ್ಲ.
ಬಿಆರ್ ಪಾಟೀಲ್ ರಾಜೀನಾಮೆ ಸದ್ಯಕ್ಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಭಿನ್ನಮತದ ನಡುವೆಯೂ ಈ ರಾಜೀನಾಮೆ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು – ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...