Homeಕರ್ನಾಟಕಬೀದರ್ ನಗರಸಭೆ ಚುನಾವಣೆ ಮುಂದೂಡಿ ಎಂದು ಸಿಎಂಗೆ ಪತ್ರ ಬರೆದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ ನಗರಸಭೆ ಚುನಾವಣೆ ಮುಂದೂಡಿ ಎಂದು ಸಿಎಂಗೆ ಪತ್ರ ಬರೆದ ಶಾಸಕ ಬಂಡೆಪ್ಪ ಖಾಶೆಂಪುರ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಸರ್ಕಾರ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಬೀದರ್‌ ಜಿಲ್ಲೆಯಲ್ಲಿಯೂ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಗರಸಭೆ ಚುನಾವಣೆಯನ್ನು ಮುಂದೂಡುವಂತೆ ಶಾಸಕ ಬಂಡೆಪ್ಪ ಖಾಶೆಂಪುರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಬೀದರ್‌ ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಿರುವ 8 ಜಿಲ್ಲೆಗಳಲ್ಲಿ ಬೀದರ್‌ ಕೂಡ ಒಂದಾಗಿದೆ. ಹೀಗಾಗಿ ಏಪ್ರಿಲ್ 27 ರಂದು ನಡೆಯಲಿರುವ ನಗರಸಭೆ ಚುನಾವಣೆಯನ್ನು ಮುಂದೂಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಸಿಎಂ ಬಿ.ಎಸ್. ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ


ಬೀದರ್‌ ಜಿಲ್ಲೆಯಲ್ಲಿ ಕೊರೊನಾ ಮೊದಲನೇ ಅಲೆಗೆ ಹೊಲಿಕೆ ಮಾಡಿದರೆ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ ಪ್ರತಿದಿನ 250ಕ್ಕೂ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಬೀದರ್ ಜಿಲ್ಲೆಯೂ ಮಹಾರಾಷ್ಟ್ರ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿದ್ದು, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ನಮ್ಮ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಿಲ್ಲೆಯ ಪರಿಸ್ಥಿತಿ ಹೀಗಿರುವಾಗ ನಗರ ಸಭೆ ಚುನಾವಣೆ ನಡೆಸುವುದು ಸೂಕ್ತವೆನಿಸುತ್ತಿಲ್ಲ. ಆದ ಕಾರಣ ಸಾರ್ವಜನಿಕರ ಹಿತದೃಷ್ಠಿಯಿಂದ ನಗರ ಸಭೆ ಚುನಾವಣೆಯನ್ನು ಮುಂದೂಡಬೇಕೆಂದು ಪತ್ರದ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ 10 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಚುನಾವಣ ಆಯೋಗ ದಿನಾಂಕ ಘೋಷಿಸಿದ್ದು, ಏಪ್ರಿಲ್ 27 ರಂದು ಬೀದರ್‌ ನಗರ ಸಭೆಗೆ ಚುನಾವಣೆ ನಡೆಯಿದೆ. ಏಪ್ರಿಲ್ 30 ಕ್ಕೆ ಮತ ಏಣಿಕೆ ನಡೆಯಲಿದೆ.


ಇದನ್ನೂ ಓದಿ: ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...