Homeಕರ್ನಾಟಕರಾಜ್ಯ ನಾಯಕತ್ವದ ವಿರುದ್ಧ ವಾಗ್ದಾಳಿ : ಶಾಸಕ ಯತ್ನಾಳ್‌ಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ

ರಾಜ್ಯ ನಾಯಕತ್ವದ ವಿರುದ್ಧ ವಾಗ್ದಾಳಿ : ಶಾಸಕ ಯತ್ನಾಳ್‌ಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ರಾಜ್ಯ ನಾಯಕತ್ವದ ವಿರುದ್ದ ನಿರಂತರ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಇಂದು (ಡಿ.2) ಶೋಕಾಸ್ ನೋಟಿಸ್ ನೀಡಿದೆ.

ಬಿಜೆಪಿ ಶಿಸ್ತು ಸಮಿತಿ ನೀಡಿರುವ ನೋಟಿಸ್‌ನಲ್ಲಿ “ಪಕ್ಷದ ರಾಜ್ಯ ಘಟಕದ ವಿರುದ್ದ ನಿರಂತರ ವಾಗ್ದಾಳಿ ನಡೆಸುತ್ತಿದ್ದೀರಿ. ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ, ಎಲ್ಲಾ ವಿಚಾರಗಳಲ್ಲಿಯೂ ಪಕ್ಷದ ಅಧಿಕೃತ ನಿಲುವಿನ ವಿರುದ್ದ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುತ್ತಿದ್ದೀರಿ. ಅವೆಲ್ಲವೂ ಮಾಧ್ಯಮಗಳು ಮತ್ತು ಇತರ ವೇದಿಕೆಗಳಲ್ಲಿ ವರದಿಯಾಗಿದೆ” ಎಂದು ಹೇಳಲಾಗಿದೆ.

“ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿದ್ದರೂ, ಮತ್ತೆ ಆ ರೀತಿ ಮಾಡುವುದಿಲ್ಲ ಎಂದು ನೀವೇ ಭರವಸೆ ನೀಡಿದ್ದೀರಿ. ಆದರೆ, ಅಶಿಸ್ತು ಮುಂದುವರೆದಿರುವುದು ಕಳವಳದ ಸಂಗತಿ. ನಿಮ್ಮ ಹಿರಿತನ, ಪಕ್ಷದೊಂದಿಗಿನ ದೀರ್ಘಕಾಲದ ಸಂಬಂಧವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಶಿಸ್ತು ಸಮಿತಿ ನಿಮ್ಮ ಹೇಳಿಕೆಗಳ ಬಗ್ಗೆ ಈ ಹಿಂದೆ ಮೃದು ನಿಲುವು ತಾಳಿತ್ತು” ಎಂದು ಉಲ್ಲೇಖಿಸಲಾಗಿದೆ.

ರಾಜಕೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳಲ್ಲಿ ಪಕ್ಷದ ನಿಲುವನ್ನು ಧಿಕ್ಕರಿಸಿ, ನಾಯಕರ ವಿರುದ್ದವೂ ಆರೋಪಗಳನ್ನು ಮಾಡಿದ್ದೀರಿ. ಇದು ಪಕ್ಷದ ಶಿಸ್ತಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಸಂಬಂಧ ಪಕ್ಷವು, ನಿಮ್ಮ ವಿರುದ್ದ ಏಕೆ ಕ್ರಮ ಕೈಗೊಳ್ಳಬಾರದು ಎಂದು 10 ದಿನಗಳ ಒಳಗಾಗಿ ವಿವರಣೆ ನೀಡಿ ಎಂದು ಸೂಚಿಸಲಾಗಿದೆ.

ಇದನ್ನೂ ಓದಿ : ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...