Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

ಮಹಿಳೆಯ ಅಪಹರಣ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

- Advertisement -
- Advertisement -

ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯಾಗಿರುವ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಹೆಚ್‌.ಡಿ ರೇವಣ್ಣ ವಿರುದ್ದ ಮೈಸೂರಿನ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು (ಮೇ 4) ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಜಾಮೀನು ನೀಡಲು ನಿರಾಕರಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದ್ದಾರೆ. ಜಾಮೀನು ನಿರಾಕರಣೆ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭ ನಗರದ ಹೆಚ್‌.ಡಿ ದೇವೇಗೌಡರ ನಿವಾಸದಿಂದ ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

“ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ”ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. ಆದರೆ, ಈ ಮನವಿಯನ್ನು ಪುರಸ್ಕರಿಸದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಹಾಗೂ ವಿಶೇಷ ತನಿಖಾ ತಂಡದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ವಾದ ಮಂಡನೆ ಮಾಡಿದರು.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...