ಬಿಜೆಪಿಯಲ್ಲಿ ವಲಸಿಗರು ಮತ್ತು ಮೂಲನಿವಾಸಿಗರ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಮೊನ್ನೆ ಈಶ್ವರಪ್ಪ ವಲಸೆ ಸಚಿವರಿಂದಲೇ ಸರ್ಕಾರದಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಎಂಎಲ್‌ಸಿ ಹೆಚ್. ವಿಶ್ವನಾಥ್, ಬಿ.ಎಸ್. ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಆರೋಗ್ಯ ಸ್ಪಂದಿಸುತ್ತಿಲ್ಲ, ಸರ್ಕಾರ ನಡೆಸುವ ಉತ್ಸಾಹವಿಲ್ಲ. ಹಾಗಾಗಿ ಅವರು ರಾಜಿನಾಮೆ ಕೊಟ್ಟು ಬೇರೆಯವರಿಗೆ ಅವಕಾಶಮಾಡಿಕೊಡಬೇಕು ಎಂದು ಹೇಳಿಕೆ ನೀಡಿ ವಿವಾದವನ್ನು ಹುಟ್ಟುಹಾಕಿದ್ದರು. ಬಿಜೆಪಿ ನಾಯಕ ಹೆಚ್.ವಿಶ್ವನಾಥ್ ಹೇಳಿಕೆಗೆ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧನ ವ್ಯಕ್ತವಾಗಿದೆ. ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ವಿಶ್ವನಾಥ್ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ಇನ್ನು ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಹೆಚ್. ವಿಶ್ವನಾಥ್ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ದಾರೆ. ಹೆಚ್. ವಿಶ್ವನಾಥ್ ಹಿರಿಯರು, ಅವರ ಹಿರಿತನದ ಗೌರವವನ್ನು ಉಳಿಸಿಕೊಳ್ಳಬೇಕು ಎಂದು ವ್ಯಂಗ್ಯವಾಗಿ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಶ್ವನಾಥ್ ಅವರಿಗೆ ಪಕ್ಷನಿಷ್ಠೆಯೆಂಬುದು ತಿಳಿದಿಲ್ಲ ಎಂಬರ್ಥದಲ್ಲಿ ಮಾತನಾಡಿದ ಶಾಸಕ ರೇಣುಕಾಚಾರ್ಯ ಹೆಚ್. ವಿಶ್ವನಾಥ್ ನಾಲಿಗೆ ಸಂಸ್ಕೃತಿಯವರು ಎಂದು ವ್ಯಂಗ್ಯವಾಡಿದ್ದಾರೆ. ಹೆಚ್. ವಿಶ್ವನಾಥ್ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸಂದರ್ಭದಲ್ಲಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ವಿರುದ್ದ ಲಘುವಾಗಿ ಮಾತನಾಡಿದ್ದರು. ಆ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಲು ಅರಂಭಿಸಿದರು. ನಂತರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮೇಲೆ ತಮ್ಮದೇ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಲು ಆರಂಭಿಸಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತಾಗಿ ವಿಶ್ವನಾಥ್ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರ ನಾಲಿಗೆಗೆ ಸಂಸ್ಕೃತಿ ಇಲ್ಲ. ಯಡಿಯೂರಪ್ಪ ವಿಶ್ವನಾಥ್‌ಗೆ ಎಲ್ಲವನ್ನೂ ನೀಡಿದ್ದಾರೆ. ಆದರೆ ಅವರಿಗೆ ಕೃತಜ್ಞತೆ ಎಂಬುದು ತಿಳಿದಿಲ್ಲ ಎಂದು  ಹೆಚ್.ವಿಶ್ವನಾಥ್ ವಿರುದ್ಧ ಹರಿಹಾಯ್ದಿದ್ದಾರೆ.

ನನ್ನ ಫೋನ್ ಟ್ಯಾಪ್ ಆಗುತ್ತಿದೆ: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪ

ಈ ನಡುವೆ ಸಿಎಂ ಯಡಿಯೂರಪ್ಪ ವಿರುದ್ಧ ಬಣದಲ್ಲಿ ಗುರುತಿಸಿಕೊಂಡಿರುವ ಮತ್ತು ದೆಹಲಿಗೆ ತೆರಳಿ ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಧಾರವಾಡ ಪಶ್ಚಿಮ ಶಾಸಕ ಅರವಿಂದ್ ಬೆಲ್ಲದ್ ನನ್ನ ಫೋನ್‌ ಅನ್ನು ಕದ್ದಾಲಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಡಿಜಿಪಿ ಪ್ರವೀಣ್‌ ಸೂದ್‌ರವರಿಗೆ ದೂರು ನೀಡಿದ್ದಾರೆ.

ಸದ್ಯಕ್ಕೆ ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಯುವರಾಜ್‌ಸ್ವಾಮಿ ನನಗೆ ಕರೆ ಮಾಡಿದರು. ನಿಮ್ಮ ನಂಬರ್‌ನಿಂದ ಮಿಸ್‌ ಕಾಲ್ ಬಂದಿತ್ತು ಅದಕ್ಕೆ ಕರೆ ಮಾಡಿದೆ ಎಂದರು. ಆಗ ನನಗೆ ಈತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಲು ಕರೆ ಮಾಡಿದ್ದಾನೆ ಎಂಬುದು ಅರಿವಾಯಿತು. ಇದು ನನ್ನನ್ನು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಸಲು ಯಾರೋ ಮಾಡಿರುವ ಹುನ್ನಾರ. ನಮ್ಮ ತಂದೆಯವರು ಐದು ಬಾರಿ ಶಾಸಕರಾದವರು. ನಾನು ಸ್ವಚ್ಚ ಚಾರಿತ್ರ್ಯ ರಾಜಕಾರಣಿ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ಬಿಜೆಪಿಯೊಳಗಿನ ಆಂತರಿಕ ಬಿಕ್ಕಟ್ಟು ಸದ್ಯಕ್ಕೆ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೇ ಸಂದರ್ಭದಲ್ಲಿ ಇಂದು ಸಂಜೆಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಮುಂದೆ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ : ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here