Homeಮುಖಪುಟಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರ ಪಾಲಿನ ನಿವೇಶನ ಕಬಳಿಸಿದ್ದಾರೆ: ಆರೋಪ

- Advertisement -
- Advertisement -

ದಾವಣಗೆರೆಯ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿ ಮಾಡಾಳ್ ಕುಟುಂಬದವರು ಅಕ್ರಮವಾಗಿ ನಿವೇಶನ ಪಡೆದಿದ್ದಾರೆ. ಆ ಮೂಲಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಡವರಿಗೆ ಸಿಗಬೇಕಿದ್ದ ನಿವೇಶನ ಕಬಳಿಸಿದ್ದಾರೆ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಕೆ. ಮಣಿ ಸರ್ಕಾರ್ ಆರೋಪಿಸಿದ್ದಾರೆ.

ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “2013ರಲ್ಲಿ ದೂಡಾದಿಂದ (ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರ) ಜೆ.ಹೆಚ್. ಪಟೇಲ್ ಬಡಾವಣೆಯ ಬಡವರ ಪಾಲಿನ ನಿವೇಶನಗಳನ್ನು ಅಕ್ರಮವಾಗಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಅವರು ಪುತ್ರರಾದ ಎಂ.ವಿ. ಮಲ್ಲಿಕಾರ್ಜುನ, ಎಂ.ವಿ. ಪ್ರವೀಣ್ ಕುಮಾರ್, ಸೊಸೆ ಹೆಚ್.ಜಿ. ಸುಧಾರಾಣಿಯವರು ತೆಗೆದುಕೊಂಡಿದ್ದಾರೆ. ಈ ಕುರಿತ ಶ್ರೀರಾಮ ಸೇನೆ ಪ್ರಕರಣ ದಾಖಲಿಸಿದೆ” ಎಂದರು.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ಇಂದಿಗೂ ನಡೆಯುತ್ತಿದೆ. ಆರೋಪಿಗಳೆಲ್ಲ ಜಾಮೀನು ಪಡೆದಿದ್ದು, ಅವರ ಜಾಮೀನು ರದ್ದು ಮಾಡುವಂತೆ ಪಿಟಿಷನ್ ಸಲ್ಲಿಸಲಾಗುವುದು ಎಂದಿದ್ದಾರೆ.

ಕಳೆದ ೫ ವರ್ಷಗಳಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಕುಟುಂಬ ಕೋಟಿಗಟ್ಟಲೆ ಹಣ, ಆಸ್ತಿಯನ್ನು ಲೂಟಿ ಹೊಡೆದಿದೆ.ಈಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಈ ಕೂಡಲೇ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು. ಮುಖ್ಯಮಂತ್ರಿಗಳು ಸೂಕ್ತ ತನಿಖೆಗೆ ಸೂಚಿಸಬೇಕು ಎಂದು ಆಗ್ರಹಿಸಿದರು.

ಪ್ರಶಾಂತ್ ಈ ಹಿಂದೆ ಅಕ್ರಮವೆಸಗಿ ಅಮಾನತ್ತಾಗಿದ್ದರು. ಆದರೂ ಈಗ ದೊಡ್ಡ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಶಾಸಕರು ಈ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳು ಸೂಕ್ತ ತನಿಖೆ ನಡೆಸಿ, ಕೂಡಲೇ ಶಾಸಕರನ್ನು ಜೈಲಿಗಟ್ಟಬೇಕು. ಇಲ್ಲವಾದಲ್ಲಿ ಅವರು ಮನೆ ಮುಂದೆ ಧರಣಿ ಕೂರಲಿದ್ದೇವೆ ಎಂದು ಮಣಿ ಸರ್ಕಾರ್ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ  ಉಪಾಧ್ಯಕ್ಷ ಆಲೂರು ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಸಾಗರ್,  ಖಜಾಂಚಿ ಶ್ರೀಧರ್, ಸಂಘಟನಾ ಕಾರ್ಯದರ್ಶಿ ವಿನೋದ್ ರಾಜ್ ಮುಂತಾದವರು ಇದ್ದರು.

ಇದನ್ನೂ ಓದಿ; 20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...