Homeಕರ್ನಾಟಕಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

ಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

- Advertisement -
- Advertisement -

ಬೆಂಗಳೂರಿನ ಹೆಚ್‌ಎಂಟಿ ವಾರ್ಡ್‌ನ ಪೀಣ್ಯದ ಎಸ್‌ಆರ್‌ಎಸ್‌ ರಸ್ತೆಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 53 ಕುಟುಂಬಗಳನ್ನು ತೆರವುಗೊಳಿಸಲು ಯಾರ ಆದೇಶವಿತ್ತು ಎಂಬುದರ ಬಗ್ಗೆ ರಾಜ್ಯ ಸರ್ಕಾರ ವಿವರಣೆ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ (ಫೆ.5) ಆದೇಶಿಸಿದೆ.

ತೆರವು ಕಾರ್ಯಾಚರಣೆ ವೇಳೆ ಮಾದಿಗ ಸಮುದಾಯದ ಮಹಿಳೆಯನ್ನು ನಿಂದಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮುನಿರತ್ನ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ನಡೆಸಿದ್ದಾರೆ.

ಮುನಿರತ್ನ ಪರ ವಕೀಲ ಎಸ್‌ ಎಸ್‌ ಶ್ರೀನಿವಾಸ ರಾವ್‌ ವಾದ ಮಂಡಿಸಿ, “ಈ ಪ್ರಕರಣದಲ್ಲಿ ಮುನಿರತ್ನ ಮುಗ್ಧರು. ಮೇಲಿಂದ ಮೇಲೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿರುವುದರಿಂದ ಕ್ಷೇತ್ರದಲ್ಲಿ ಅವರು ಸಾರ್ವಜನಿಕರ ಕೆಲಸ ಮಾಡುವುದೇ ಕಷ್ಟವಾಗಿದೆ” ಎಂದಿದ್ದಾರೆ.

ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿದೆ. ಆದರೆ, ಮಾಧ್ಯಮಗಳಲ್ಲಿ ಮುನಿರತ್ನ ಅವರ ವ್ಯಕ್ತಿತ್ವಕ್ಕೆ ಹಾನಿ ಮಾಡಲು ಅಪಪ್ರಚಾರ ಮಾಡಲಾಗುತ್ತಿದೆ. ದೂರುದಾರರ ಪರ ಹಿರಿಯ ವಕೀಲ ಸಿ. ಹೆಚ್‌ ಹನುಮಂತರಾಯ ಅವರು ಆರೋಪಿಸಿರುವಂತೆ ಅಲ್ಲಿ ಕೇವಲ ದಲಿತ ಕುಟುಂಬಗಳು ಮಾತ್ರವೇ ಇರಲಿಲ್ಲ. ಅವರಲ್ಲಿ ಮುಸ್ಲಿಂ ಮತ್ತು ಸಾಮಾನ್ಯ ವರ್ಗದ ಜನರೂ ಇದ್ದರು” ಎಂದಿದ್ದಾರೆ.

ಈ ವೇಳೆ ಹನುಮಂತರಾಯ ಅವರು “ಬಿಬಿಎಂಪಿ ಕಾರ್ಯಾಚರಣೆ ನಡೆಸಿದ್ದರೆ ಮುನಿರತ್ನ ಏಕೆ ಅದನ್ನು ಮೌನವಾಗಿ ವೀಕ್ಷಿಸಿದರು? ಕ್ಷೇತ್ರದ ಶಾಸಕರಾಗಿ ನಿರ್ಗತಿಕರಿಗೆ ಏಕೆ ಪುನರ್ವಸತಿ ಕಲ್ಪಿಸಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಆಗ ಮಧ್ಯಪ್ರವೇಶಿಸಿದ ಪೀಠ “ಈ ಪ್ರಕರಣದಲ್ಲಿ ಯಾರು ತೆರವು ಕಾರ್ಯಾಚರಣೆ ನಡೆಸಿದರು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್‌ ಸಮರ್ಪಕವಾಗಿ ಉತ್ತರಿಸಿಲ್ಲ. ಇದರಿಂದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಿಸಬೇಕಾಗಿ ಬಂದಿದೆ. ಪೊಲೀಸ್ ಇಲಾಖೆ ಕ್ಷಮತೆಯಿಂದ ಕಾರ್ಯ ನಿರ್ವಹಿಸಬೇಕಾದ ಅವಶ್ಯಕತೆ ಇದೆ” ಎಂದು ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, “ಯಾರ ಆದೇಶದ ಅನ್ವಯ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿದೆ ಎಂಬುವುದನ್ನು ತಿಳಿಸಬೇಕು” ಎಂದು ಸರ್ಕಾರಿ ಅಭಿಯೋಜಕಿ ಪಾರ್ವತಿ ಅವರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬ್ಯಾಂಕ್‌ಗೆ ವಂಚನೆ ಸಾಬೀತು; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...