ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ ಎಂದ ಶಾಸಕ ಎನ್‌ ಮಹೇಶ್

ಬಿಎಸ್‌ಪಿ ಉಚ್ಚಾಟಿತ ಕೊಳ್ಳೇಗಾಲದ ಶಾಸಕ ಎನ್‌ ಮಹೇಶ್‌ ಬಿಜೆಪಿ ಸೇರಲಿದ್ದಾರೆ ಎನ್ನುವ ವದಂತಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿತ್ತು. ಇದಕ್ಕೆ ತೆರೆ ಎಳೆದಿರುವ ಶಾಸಕ ಮಹೇಶ್, “ಸ್ಥಾನಮಾನ ಸಿಕ್ಕಿದರೆ ಬಿಜೆಪಿಗೆ ಸೇರುವುದು ಖಂಡಿತ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಂದು ಸ್ಥಾನಮಾನ ಸಿಕ್ಕಿದರೆ, ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಪೇಕ್ಷೆಯನ್ನು ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಆದರೆ ಈ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ” ಎಂದರು.

“ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ಖಚಿತ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ. ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಅಂತಹ ಸಂದರ್ಭ ಸೃಷ್ಟಿಯಾಗಬೇಕು. ನಾನಾಗಿಯೇ ತೀರ್ಮಾನ ಕೈಗೊಳ್ಳುವುದಕ್ಕೆ ಆಗುವುದಿಲ್ಲ” ಎಂದು ಹೇಳಿದ್ದಾರೆ ಎಂಬುದಾಗಿ ಪ್ರಜಾವಾಣಿ ವರದಿ ಮಾಡಿದೆ.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

LEAVE A REPLY

Please enter your comment!
Please enter your name here