Homeಕರ್ನಾಟಕಶಾಸಕ ರಮೇಶ್‌ ಜಾರಕಿಹೊಳಿಯಿಂದ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಶಾಸಕ ರಮೇಶ್‌ ಜಾರಕಿಹೊಳಿಯಿಂದ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

- Advertisement -
- Advertisement -

ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್‌ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್‌ ರದ್ದುಗೊಳಿಸಲು ಕೋರಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಬರೋಬ್ಬರಿ ₹439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪವನ್ನು ರಮೇಶ್‌ ಜಾರಕಿಹೊಳಿ ಎದುರಿಸುತ್ತಿದ್ದಾರೆ.

ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್‌ ಜಾರಕಿಹೊಳಿ, ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್‌ ಪಾಟೀಲ್‌ ಮತ್ತು ಶಂಕರ್‌ ಪವಾಡೆ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

ವಾದ ಆಲಿಸಿದ ನ್ಯಾಯ ಪೀಠವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಏನಿದು ಪ್ರಕರಣ? ಬೆಳಗಾವಿಯ ಗೋಕಾಕ್‌ನಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್‌ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ ಮತ್ತು ಅದರ ಸಮೂಹದ ಬ್ಯಾಂಕ್‌ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 12.07.2013 ರಿಂದ 31.03.2017ರ ಅವಧಿಯಲ್ಲಿ ₹232.88 ಕೋಟಿ ಸಾಲ ಪಡೆಯಲಾಗಿತ್ತು. ಇದು ಬಡ್ಡಿ ಸೇರಿ ₹439.7 ಕೋಟಿಗೆ ಏರಿಕೆಯಾಗಿದ್ದರೂ ಪಾವತಿಸಿರಲಿಲ್ಲ.

ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್‌ ಕಂಪೆನಿಯಲ್ಲಿ ರಮೇಶ್ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್‌ ಮತ್ತು ಶಂಕರ್‌ ಅವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಅರ್ಜಿದಾರರು ಕಂಪೆನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಸಂಬಂಧಪಡದ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ.

ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ನೀಡಿದ ದೂರಿನ ಅನ್ವಯ ಬೆಂಗಳೂರಿನ ವಿ ವಿ ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 406,420&34ರ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...