Homeಕರ್ನಾಟಕಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

- Advertisement -
- Advertisement -

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿರುವ ಯತ್ನಾಳ್, ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸುವಂತೆ ಕೋರಿದ್ದಾರೆ.

ಶಾಸಕ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ವೇಳೆ, ಒಮ್ಮೆ‌ ಸಿಬಿಐ ತನಿಖೆಗೆ ನೀಡಿದ ಒಪ್ಪಿಗೆ ಹಿಂಪಡೆಯುವಂತಿಲ್ಲ ಎಂದು ಕಾಜಿ ಲೆಂಡಪ್‌ ದೋರ್ಜಿ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಸರ್ಕಾರ ಕಾನೂನುಬಾಹಿರ ಕ್ರಮ ಕೈಗೊಂಡಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಡಿಕೆಶಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣದ ಸಿಬಿಐ ತನಿಖೆ ನಡೆಸಲು ಬಿಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಸಮ್ಮತಿ ಪಡೆದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ತನಿಖೆ ಅಂತಿಮ ಹಂತದಲ್ಲಿತ್ತು. ಆದರೆ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ.

ಸರ್ಕಾರದ ನಿರ್ಧಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಯತ್ನಾಳ್ ಹೇಳಿದ್ದರು. ಅದರಂತೆ ಈಗ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ : ‘ಆರ್‌ಎಸ್‌ಎಸ್‌ ಬಹಿರಂಗವಾಗಿ ಮುಸ್ಲಿಂ ವಿರುದ್ಧ; ಅಂತರಂಗದಲ್ಲಿ ದಲಿತರ ವಿರುದ್ಧ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...